Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ

ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ.

Flipkart: ಫ್ಲಿಪ್​ಕಾರ್ಟ್​ಗೆ ಬಿಗ್ ರಿಲೀಫ್; 1,100 ಕೋಟಿ ಪಾವತಿ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ
ಫ್ಲಿಪ್​ಕಾರ್ಟ್
Follow us
Ganapathi Sharma
|

Updated on:Feb 08, 2023 | 6:02 PM

ಬೆಂಗಳೂರು: ಆದಾಯ ತೆರಿಗೆ ಇಲಾಖೆಗೆ 1,100 ಕೋಟಿ ರೂ. ಬಾಕಿ ಪಾವತಿಸುವ ವಿಚಾರದಲ್ಲಿ ಇ-ಕಾಮರ್ಸ್ ಕಂಪನಿ ಫ್ಲಿಪ್​ಕಾರ್ಟ್​​ಗೆ (Flipkart) ಕರ್ನಾಟಕ ಹೈಕೋರ್ಟ್​​ನಿಂದ (Karnataka High Court) ಬುಧವಾರ ರಿಲೀಫ್ ದೊರೆತಿದೆ. ಬಾಕಿ ಮೊತ್ತ ಪಾವತಿ ವಿಚಾರವಾಗಿ ಜನವರಿ 31ರಂದು ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಫ್ಲಿಪ್​ಕಾರ್ಟ್​ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್​ ಸೂಚಿಸಿದೆ. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.

ಆದಾಯ ತೆರಿಗೆ ಆಯುಕ್ತರು ನೀಡಿರುವ ತೀರ್ಪಿನ ವಿರುದ್ಧ ಫ್ಲಿಪ್​ಕಾರ್ಟ್​ ಕರ್ನಾಟಕ ಹೈಕೋರ್ಟ್​​ಗೆ ರಿಟ್ ಅರ್ಜಿ ಸಲ್ಲಿಸಿತ್ತು. 2016-17 ಹಾಗೂ 2018-19ನೇ ತೆರಿಗೆ ಮೌಲ್ಯಮಾಪನ ವರ್ಷದಲ್ಲಿ ಕ್ರಮವಾಗಿ 4,500 ಕೋಟಿ ರೂ. ಮತ್ತು 180 ಕೋಟಿ ರೂ. ಮೊತ್ತದಲ್ಲಿ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್​ (ESOP) ಗೆ ಅನುಮತಿಸದಿರುವುದನ್ನು ಮತ್ತು ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ತನ್ನ ವಿರುದ್ಧ ತೀರ್ಪು ನೀಡಿದ್ದನ್ನು ಪ್ರಶ್ನಿಸಿ ಕಂಪನಿ ರಿಟ್ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಅಮೂರ್ತ ವಸ್ತುಗಳ ಬಂಡವಾಳೀಕರಣಕ್ಕೆ ಸಂಬಂಧಿಸಿ ಆದಾಯ ತೆರಿಗೆ ಆಯುಕ್ತರು ಇಲಾಖೆಯ ಪರವಹಿಸಿ ನಿರ್ಧಾರ ಕೈಗೊಂಡಿದ್ದಾರೆ. ಜತೆಗೆ ಎಂಪ್ಲಾಯೀಸ್ ಸ್ಟಾಕ್ ಓನರ್​ಶಿಪ್ ಪ್ಲಾನ್ ವಿಚಾರದಲ್ಲಿ ಮದ್ರಾಸ್ ಮತ್ತು ದೆಹಲಿ ಹೈಕೋರ್ಟ್​​ಗಳು ಈ ಹಿಂದೆ ನೀಡಿದ್ದ ತೀರ್ಪುಗಳನ್ನು ಕಡೆಗಣಿಸಿದ್ದಾರೆ ಎಂದು ಫ್ಲಿಪ್​ಕಾರ್ಟ್ ಆರೋಪಿಸಿತ್ತು.

ಬಾಕಿ ಪಾವತಿಗೆ ಸಾಕಷ್ಟು ಕಾಲಾವಕಾಶ ನೀಡಲಾಗಿಲ್ಲ. ಬಾಕಿ ಪಾವತಿಗೆ ಕೇವಲ ನಾಲ್ಕು ದಿನಗಳ ಕಾಲಾವಕಾಶ ನೀಡಿರುವುದಕ್ಕೆ ಯಾವುದೇ ಸಮರ್ಥನೆಗಳಿಲ್ಲ. ಇದರಿಂದಾಗಿ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಯಲ್ಲಿ ಪ್ರಶ್ನಿಸುವುದಕ್ಕೂ ನಿರ್ಬಂಧ ವಿಧಿಸಿದಂತಾಗಿತ್ತು ಎಂದು ಫ್ಲಿಪ್​ಕಾರ್ಟ್ ಹೇಳಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Wed, 8 February 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ