Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಮುಂದಿನ ವರ್ಷ, ಅಂದರೆ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ತರುವ ಆಲೋಚನೆ ಭಾರತಕ್ಕೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

Digital Currency: ದೇಶದಲ್ಲಿ 2023ರ ಹೊತ್ತಿಗೆ ಡಿಜಿಟಲ್ ಕರೆನ್ಸಿ ಪರಿಚಯಿಸುವ ಗುರಿ ಇದೆ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Apr 28, 2022 | 12:23 PM

ಭಾರತವು 2023ರ ವೇಳೆಗೆ ಡಿಜಿಟಲ್ ಕರೆನ್ಸಿಯನ್ನು (Digital Currency) ಪರಿಚಯಿಸುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಅದರ ಹಲವಾರು ವಾಣಿಜ್ಯ ಬಳಕೆ ಉದ್ದೇಶಗಳನ್ನು ಪರಿಶೀಲಿಸುತ್ತಿದೆ ಮತ್ತು ಕೇವಲ ಹಣಕಾಸಿನ ಸೇರ್ಪಡೆ ಮಾತ್ರವಲ್ಲ, ಇದನ್ನು ಹೆಚ್ಚಾಗಿ JAM ಟ್ರಿನಿಟಿ (ಜನ್ ಧನ್-ಆಧಾರ್-ಮೊಬೈಲ್) ಮೂಲಕ ಸಾಧಿಸಲಾಗುತ್ತದೆ.,” ಎಂದು ಅವರು ಹೇಳಿದ್ದಾರೆ. ಎಲ್ಲ ಕೈಗಾರಿಕೆಗಳಲ್ಲಿ ಸರ್ಕಾರವು ಸ್ಥಿರವಾದ ಡಿಜಿಟಲ್ ಉತ್ತೇಜನವನ್ನು ನಿರ್ವಹಿಸುತ್ತದೆ ಎಂದು ಸಚಿವೆ ತಿಳಿಸಿದ್ದಾರೆ.

“ಕೇಂದ್ರ ಬ್ಯಾಂಕ್ ಡಿಜಿಟಲ್ ಕರೆನ್ಸಿ, ಡಿಜಿಟಲ್ ಬ್ಯಾಂಕ್‌ಗಳು ಮತ್ತು ಡಿಜಿಟಲ್ ವಿಶ್ವವಿದ್ಯಾನಿಲಯವನ್ನು ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾಗಿದೆ. ಕ್ಷೇತ್ರಗಳಾದ್ಯಂತ ಸರ್ಕಾರದಿಂದ ನಿರಂತರ ಡಿಜಿಟಲ್ ಪ್ರೋತ್ಸಾಹ ಇದೆ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಡಿಜಿಟಲ್ ಕರೆನ್ಸಿಯ ಪರಿಚಯವು ಡಿಜಿಟಲ್ ಆರ್ಥಿಕತೆಗೆ ದೊಡ್ಡ ಉತ್ತೇಜನವನ್ನು ನೀಡುತ್ತದೆ ಎಂದು ಅವರು ಬಜೆಟ್‌ನಲ್ಲಿ ಹೇಳಿದ್ದರು.

“ಡಿಜಿಟಲ್ ಕರೆನ್ಸಿಯು ಹೆಚ್ಚು ಪರಿಣಾಮಕಾರಿ ಮತ್ತು ಅಗ್ಗದ ಕರೆನ್ಸಿ ನಿರ್ವಹಣಾ ವ್ಯವಸ್ಥೆಗೆ ಕಾರಣವಾಗುತ್ತದೆ. ಆದ್ದರಿಂದ ಬ್ಲಾಕ್‌ಚೈನ್ ಮತ್ತು ಇತರ ತಂತ್ರಜ್ಞಾನಗಳನ್ನು ಬಳಸಿಕೊಂಡು ಡಿಜಿಟಲ್ ರೂಪಾಯಿಯನ್ನು ಪರಿಚಯಿಸಲು ಪ್ರಸ್ತಾಪಿಸಲಾಗಿದೆ. ಇದನ್ನು 2022-23ರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡುತ್ತದೆ.” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಅಭಿವೃದ್ಧಿಪಡಿಸುತ್ತಿರುವ ಡಿಜಿಟಲ್ ರೂಪಾಯಿ ಬ್ಲಾಕ್‌ಚೈನ್, ಖಾಸಗಿ ಕಂಪನಿಗಳು ನೀಡುವ ಮೊಬೈಲ್ ವ್ಯಾಲೆಟ್‌ನ ಪ್ರಸ್ತುತ ವ್ಯವಸ್ಥೆಗಿಂತ ಭಿನ್ನವಾಗಿ ಎಲ್ಲ ವಹಿವಾಟುಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತದೆ. ವರ್ಚುವಲ್ ಕರೆನ್ಸಿಯ ಸುತ್ತಲಿನ ನಿಯಂತ್ರಣದ ಬಗ್ಗೆ ಭಾರತವು ಪರಿಗಣಿಸುವ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಮತ್ತು “ಕ್ರಿಪ್ಟೋ ನಿರ್ಧಾರವನ್ನು ಆತುರದಿಂದ ತೆಗೆದುಕೊಳ್ಳಲಾಗುವುದಿಲ್ಲ” ಎಂದು ನಿರ್ಮಲಾ ಸೀತಾರಾಮನ್ ಈ ಹಿಂದೆ ಹೇಳಿದ್ದರು.

ಇದನ್ನೂ ಓದಿ: Central Bank Digital Currency: ಬಜೆಟ್​ನಲ್ಲಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಪ್ರಸ್ತಾವ; ಏನಿದರ ಅನುಕೂಲ?

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್