AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wheat Price: ಸರ್ಕಾರ ಮಧ್ಯ ಪ್ರವೇಶಿಸುತ್ತಿದ್ದಂತೆಯೇ ಗೋಧಿ ದರ ಶೇ 10ರಷ್ಟು ಇಳಿಕೆ

ಫೆಬ್ರವರಿ ಮಧ್ಯಭಾಗದ ವೇಳೆಗೆ ಗೋಧಿ ಮತ್ತು ಗೋಧಿ ಹಿಟ್ಟಿನ ದರ ಇನ್ನಷ್ಟು ಕಡಿಮೆಯಾಗಲಿದೆ. ದೊಡ್ಡ ಮಟ್ಟದ ಖರೀದಿದಾರರು ಭಾರತೀಯ ಆಹಾರ ನಿಗಮದ ಹರಾಜಿನಿಂದ ಗೋಧಿ ಖರೀದಿಸುತ್ತಿದ್ದಂತೆಯೇ ದರ ಇಳಿಕೆಯಾಗಲಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

Wheat Price: ಸರ್ಕಾರ ಮಧ್ಯ ಪ್ರವೇಶಿಸುತ್ತಿದ್ದಂತೆಯೇ ಗೋಧಿ ದರ ಶೇ 10ರಷ್ಟು ಇಳಿಕೆ
ಗೋಧಿ ದರ (ಸಾಂದರ್ಭಿಕ ಚಿತ್ರ)
Follow us
Ganapathi Sharma
|

Updated on:Jan 28, 2023 | 3:15 PM

ನವದೆಹಲಿ: ಮುಂದಿನ ಆರು ವಾರಗಳಲ್ಲಿ ಮುಕ್ತ ಮಾರುಕಟ್ಟೆಗೆ 30 ಲಕ್ಷ ಮೆಟ್ರಿಕ್ ಟನ್ ಗೋಧಿ ಬಿಡುಗಡೆ ಮಾಡಲು ಭಾರತೀಯ ಆಹಾರ ನಿಗಮವು (FCI) ಟೆಂಡರ್​​ ಕರೆಯುತ್ತಿದ್ದಂತೆಯೇ ದೇಶದಲ್ಲಿ ಗೋಧಿ ದರ (Wheat Price) ತುಸು ಇಳಿಕೆಯಾಗಿದೆ. ಎರಡು ದಿನಗಳ ಹಿಂದಷ್ಟೇ ದೇಶದಾದ್ಯಂತ ಮಾರುಕಟ್ಟೆಗಳಲ್ಲಿ ಗೋಧಿ ಮತ್ತು ಗೋಧಿ ಹಿಟ್ಟಿನ (wheat flour) ದರ ದಶಕದ ಗರಿಷ್ಠ ಮಟ್ಟ ತಲುಪಿದ್ದು, ಕ್ವಿಂಟಲ್​​ಗೆ 2,950 ರೂ. ಆಗಿತ್ತು. ಶುಕ್ರವಾರ ಸಂಜೆ ವೇಳೆಗೆ ಮಧ್ಯ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ರಾಜಸ್ಥಾನದ ಮಂಡಿಗಳಲ್ಲಿ ಗೋಧಿ ದರ ಶೇ 10ರಷ್ಟು ಇಳಿಕೆಯಾಗಿದೆ. ಇದೀಗ ವ್ಯಾಪಾರಿಗಳು ಪ್ರತಿ ಕ್ವಿಂಟಲ್​ಗೆ 200 ರೂ.ನಷ್ಟು ದರ ಕಡಿತಗೊಳಿಸಿದ್ದಾರೆ ಎಂದು ಸಿಹೋರ್​​ನ ವ್ಯಾಪಾರಿ ಗಗನ್ ಗುಪ್ತಾ ತಿಳಿಸಿರುವುದಾಗಿ ‘ಪೈನಾನ್ಶಿಯಲ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಗೋಧಿ ದಾಸ್ತಾನು ಇಟ್ಟಿರುವ ವ್ಯಾಪಾರಿಗಳೆಲ್ಲ ಈಗ ಮಾರುಕಟ್ಟೆಗೆ ಬಿಡಲು ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

2022-23ನೇ ಹಣಕಾಸು ವರ್ಷದ ಏಪ್ರಿಲ್-ಜೂನ್ ಅವಧಿಯ ಕನಿಷ್ಠ ಬೆಂಬಲ ಬೆಲೆಗಿಂತಲೂ ಮಂಡಿಗಳಲ್ಲಿ ಶೇ 40ರಿಂದ 45ರಷ್ಟು ಹೆಚ್ಚು ದರ ನಿಗದಿಯಾಗಿತ್ತು. ಕಳೆದ ವರ್ಷದ ಕಡಿಮೆ ಉತ್ಪಾದನೆಯಿಂದಾಗಿ ಪೂರೈಕೆಯಲ್ಲೂ ವ್ಯತ್ಯಯವಾಗಿತ್ತು. ಮುಂದಿನ ಹಣಕಾಸು ವರ್ಷಕ್ಕೆ ಕನಿಷ್ಠ ಬೆಂಬಲ ಬೆಲೆ ಪ್ರತಿ ಕ್ವಿಂಟಲ್​ಗೆ 2,125 ರೂ. ನಿಗದಿಯಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಫೆಬ್ರವರಿ ಮಧ್ಯಭಾಗದ ವೇಳೆಗೆ ಗೋಧಿ ಮತ್ತು ಗೋಧಿ ಹಿಟ್ಟಿನ ದರ ಇನ್ನಷ್ಟು ಕಡಿಮೆಯಾಗಲಿದೆ. ದೊಡ್ಡ ಮಟ್ಟದ ಖರೀದಿದಾರರು ಭಾರತೀಯ ಆಹಾರ ನಿಗಮದ ಹರಾಜಿನಿಂದ ಗೋಧಿ ಖರೀದಿಸುತ್ತಿದ್ದಂತೆಯೇ ದರ ಇಳಿಕೆಯಾಗಲಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Wheat Price: ಗೋಧಿ ದರ ಭಾರೀ ಏರಿಕೆ, ನಿಯಂತ್ರಿಸಲು ಸರ್ಕಾರ ಸಾಹಸ

ದರ ಇಳಿಕೆಗಾಗಿ ಮುಕ್ತ ಮಾರುಕಟ್ಟೆಗೆ ಗೋಧಿ ಬಿಡುಗಡೆ ಮಾಡುವುದರಿಂದ ಆಹಾರ ನಿಗಮಕ್ಕೆ ಪ್ರತಿ ಕೆಜಿ ಗೋಧಿಗೆ 2-3 ರೂ. ನಷ್ಟವಾಗಲಿದೆ ಎಂದು ಎಫ್​ಸಿಐ ಅಧ್ಯಕ್ಷ ಅಶೋಕ್ ಮೀನಾ ತಿಳಿಸಿದ್ದಾರೆ.

ಗೋಧಿ ದರ ಏರಿಕೆ ನಿಯಂತ್ರಣಕ್ಕಾಗಿ ಆಹಾರ ನಿಗಮದಿಂದ 30 ಲಕ್ಷ ಮೆಟ್ರಿಕ್ ಟನ್ ಗೋಧಿ ಬಿಡುಗಡೆ ಮಾಡಲಾಗುವುದು. ಪ್ರತಿ ಹಿಟ್ಟಿನ ಗಿರಣಿಯವರಿಗೆ ಮತ್ತು ದೊಡ್ಡ ಮಟ್ಟದ ಖರೀದಿದಾರರಿಗೆ ಇ-ಹರಾಜಿನ ಮೂಲಕ ಗರಿಷ್ಠ 3,000 ಮೆಟ್ರಿಕ್ ಟನ್ ಗೋಧಿ ವಿತರಣೆ ಮಾಡಲು ಉದ್ದೇಶಿಸಲಾಗಿದೆ. ಜತೆಗೆ ನೇರವಾಗಿ ರಾಜ್ಯ ಸರ್ಕಾರಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗುತ್ತದೆ ಎಂದು ಆಹಾರ ಸಚಿವಾಲಯದ ಗುರುವಾರ ತಿಳಿಸಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಚಿವರ ಸಮಿತಿ ಬುಧವಾರ ಅನುಮೋದನೆ ನೀಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Sat, 28 January 23

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ