ಹಣಕಾಸು ವರ್ಷ 22ರಲ್ಲಿ ಆಹಾರ ಸಬ್ಸಿಡಿ 4 ಲಕ್ಷ ಕೋಟಿ ರೂಪಾಯಿಗಿಂತ ಸ್ವಲ್ಪ ಕಡಿಮೆ ಎಂದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ

ಹಣಕಾಸು ವರ್ಷ 22ರಲ್ಲಿ ಆಹಾರ ಸಬ್ಸಿಡಿ 4 ಲಕ್ಷ ಕೋಟಿ ರೂಪಾಯಿಗಿಂತ ಸ್ವಲ್ಪ ಕಡಿಮೆ ಆಗಲಿದೆ ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಅವರು ಹೇಳಿದ್ದಾರೆ.

ಹಣಕಾಸು ವರ್ಷ 22ರಲ್ಲಿ ಆಹಾರ ಸಬ್ಸಿಡಿ 4 ಲಕ್ಷ ಕೋಟಿ ರೂಪಾಯಿಗಿಂತ ಸ್ವಲ್ಪ ಕಡಿಮೆ ಎಂದ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on: Dec 30, 2021 | 6:47 PM

ಸರ್ಕಾರದ ಆಹಾರ ಸಬ್ಸಿಡಿಯು 2021-22ರ ಹಣಕಾಸು ವರ್ಷದಲ್ಲಿ ರೂ 4 ಲಕ್ಷ ಕೋಟಿಗಿಂತ ಸ್ವಲ್ಪ ಕಡಿಮೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ರೂ. 5.29 ಲಕ್ಷ ಕೋಟಿ ಇತ್ತು ಎಂದು ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ ಗುರುವಾರ ಹೇಳಿದ್ದಾರೆ. “ನಾವು ಈ ವರ್ಷ 4 ಲಕ್ಷ ಕೋಟಿ ರೂಪಾಯಿಗಳಿಗಿಂತ ಕಡಿಮೆ ಆಹಾರ ಸಬ್ಸಿಡಿಯನ್ನು ನಿರೀಕ್ಷಿಸುತ್ತಿದ್ದೇವೆ,” ಎಂದು ಪಾಂಡೆ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಆಹಾರ ಧಾನ್ಯಗಳ ಸಂಗ್ರಹ ಮತ್ತು ವಿತರಣೆಗೆ ಸುಮಾರು 2.25 ಲಕ್ಷ ಕೋಟಿ ರೂಪಾಯಿ ಆಹಾರ ಸಬ್ಸಿಡಿ ಅಂದಾಜಿಸಲಾಗಿದೆ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅನುಷ್ಠಾನಕ್ಕೆ ಹೆಚ್ಚುವರಿ 1.47 ಲಕ್ಷ ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಎನ್‌ಎಫ್‌ಎಸ್‌ಎ ಅಡಿಯಲ್ಲಿ ಕೇಂದ್ರ ಸರ್ಕಾರವು ಪ್ರಸ್ತುತ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮೂಲಕ 81 ಕೋಟಿಗೂ ಹೆಚ್ಚು ಜನರಿಗೆ ಪ್ರತಿ ಕೇಜಿಗೆ ರೂ. 1ರಿಂದ 3ರಂತೆ ಹೆಚ್ಚು ಸಬ್ಸಿಡಿ ಆಹಾರ ಧಾನ್ಯಗಳನ್ನು ನೀಡುತ್ತದೆ. ಸಬ್ಸಿಡಿ ಆಹಾರಧಾನ್ಯಗಳ ಮೇಲೆ ಮತ್ತು ಕೊರೊನಾ ಸಮಯದಲ್ಲಿ ಸರ್ಕಾರವು ಪಿಎಂಜಿಕೆಎವೈ ಅಡಿಯಲ್ಲಿ ಎನ್‌ಎಫ್‌ಎಸ್‌ಎ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುತ್ತಿದೆ. ಈ ಯೋಜನೆಯನ್ನು ಹಲವಾರು ಬಾರಿ ವಿಸ್ತರಿಸಲಾಗಿದೆ ಮತ್ತು ಈಗ 2022ರ ಮಾರ್ಚ್​ವರೆಗೆ ಇದೆ. 2020-21ರ ಹಣಕಾಸು ವರ್ಷದಲ್ಲಿ ಸರ್ಕಾರದ ಆಹಾರ ಸಬ್ಸಿಡಿ 5.29 ಲಕ್ಷ ಕೋಟಿ ರೂಪಾಯಿಗಳಷ್ಟಿದೆ ಎಂದು ಆಹಾರ ಸಚಿವಾಲಯದ ಮತ್ತೊಬ್ಬ ಅಧಿಕಾರಿ ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕೊರೊನಾ ಸಂದರ್ಭಗಳ ಮಧ್ಯೆ ಅಭೂತಪೂರ್ವವಾದ ಪ್ರಯತ್ನಗಳನ್ನು ಸರ್ಕಾರ ಮಾಡಿದ್ದರಿಂದ ಅನೇಕ ಕಾರಣಗಳಿಗಾಗಿ 2021ನೇ ಇಸವಿ “ಅಸಾಧಾರಣ ವರ್ಷ” ಎಂದು ಕಾರ್ಯದರ್ಶಿ ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಎಫ್‌ಸಿಐ (ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ) ಪ್ರಮುಖ ರೂಪಾಂತರ ಬದಲಾವಣೆಗಳನ್ನು ಕೈಗೊಂಡಿದೆ ಮತ್ತು ಈ ವರ್ಷ ಎಥೆನಾಲ್ ಮಿಶ್ರಣ ಕಾರ್ಯಕ್ರಮದಲ್ಲಿ ಶೇ 62ರಷ್ಟು ಬೆಳವಣಿಗೆಯಾಗಿದೆ. ಪೆಟ್ರೋಲ್‌ನೊಂದಿಗೆ ಎಥೆನಾಲ್ ಮಿಶ್ರಣವು ಒಂದು ವರ್ಷದಲ್ಲಿ ಶೇ 5ರಿಂದ ಶೇ 8.1ಕ್ಕೆ ಏರಿಕೆಯಾಗಿದೆ. ಇದು ಇದುವರೆಗಿನ ಅತ್ಯಧಿಕವಾಗಿದೆ ಎಂದು ಅವರು ಹೇಳಿದ್ದಾರೆ.

‘ಒನ್ ನೇಷನ್, ಒನ್ ರೇಷನ್ ಕಾರ್ಡ್’ (ONORC) ಅಡಿಯಲ್ಲಿ 50 ಕೋಟಿಗೂ ಹೆಚ್ಚು ಪೋರ್ಟಬಲ್ ವಹಿವಾಟುಗಳು ನಡೆದಿವೆ. ಇದು ಆಹಾರ ಧಾನ್ಯಗಳ ಮೂಲಕ 33,000 ಕೋಟಿ ರೂಪಾಯಿಗೂ ಹೆಚ್ಚು ಸಬ್ಸಿಡಿಯನ್ನು ತಲುಪಿಸಿದೆ. “ಸಾಂಕ್ರಾಮಿಕ ಅವಧಿಯಲ್ಲಿ ಮಾತ್ರ 43 ಕೋಟಿಗೂ ಹೆಚ್ಚು ವಹಿವಾಟುಗಳು 29,000 ಕೋಟಿ ರೂಪಾಯಿಗಿಂತ ಸ್ವಲ್ಪ ಹೆಚ್ಚು ವಿತರಿಸಲಾದ ಆಹಾರ ಸಬ್ಸಿಡಿಗಳೊಂದಿಗೆ ನಡೆದಿವೆ ಎಂದು ತಿಳಿದುಕೊಳ್ಳಲು ನಿಮಗೆ ಸಂತೋಷವಾಗುತ್ತದೆ. ಇದು ಅಸಾಧಾರಣವಾಗಿದೆ,” ಎಂದು ಅವರು ಹೇಳಿದ್ದಾರೆ. ಈ ತಿಂಗಳೊಂದರಲ್ಲೇ ಅಂತರರಾಜ್ಯ ವಹಿವಾಟು 2 ಲಕ್ಷ ದಾಟಿದ್ದು, ದೆಹಲಿಯೊಂದರಲ್ಲೇ 1.5 ಲಕ್ಷ ವಹಿವಾಟು ನಡೆದಿದೆ.

“ದೆಹಲಿ ಬಹಳ ತಡವಾಗಿ ಪ್ರಾರಂಭವಾಯಿತು. ಆದರೆ ONORC ಮೂಲಕ ಅತಿ ಹೆಚ್ಚು ಅಂತರರಾಜ್ಯ ಪೋರ್ಟಬಲ್ ವಹಿವಾಟುಗಳಲ್ಲಿ ಒಂದನ್ನು ನೋಂದಾಯಿಸುತ್ತಿದೆ,” ಎಂದು ಅವರು ಹೇಳಿದ್ದಾರೆ. ವರ್ಷದಲ್ಲಿ ಪಿಎಂಜಿಕೆಎವೈ ಒಂದು ಅಸಾಧಾರಣ ಕಾರ್ಯಕ್ರಮವಾಗಿದ್ದು, ಅದರ ಅಡಿಯಲ್ಲಿ ಆಹಾರ ಧಾನ್ಯಗಳ ವಿತರಣೆಯು ಸುಮಾರು ಶೇ 93ರ ವ್ಯಾಪ್ತಿಯಲ್ಲಿದ್ದು, ಇದು ದೇಶಾದ್ಯಂತ ಬಡವರಿಗೆ ಹೆಚ್ಚು ಅಗತ್ಯವಿರುವ ಸಹಾಯವನ್ನು ಒದಗಿಸಿದೆ ಎಂದು ಕಾರ್ಯದರ್ಶಿ ಹೇಳಿದ್ದಾರೆ.

ಇದನ್ನೂ ಓದಿ: LPG Subsidy: ಮತ್ತೆ ಎಲ್​ಪಿಜಿ ಸಬ್ಸಿಡಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ; ನಿಮಿಷಗಳಲ್ಲಿ ಪರಿಶೀಲನೆ ಮಾಡುವುದು ಹೇಗೆ?

ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ಬಾಗಲಕೋಟೆಯಲ್ಲಿ ರಸ್ತೆ ಮೇಲೆ ಅಡುಗೆ ಮಾಡಿ ನೇಕಾರರಿಂದ ಪ್ರತಿಭಟನೆ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
ಮೋಕ್ಷಿತಾ ಅಸಲಿ ಆಟ ಶುರು ಮಾಡಿದ್ದಕ್ಕೆ ಉಗ್ರಂ ಮಂಜು ಬ್ಯಾಟರಿ ಡೌನ್?
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
6,6,6,6,4... ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಹಾರ್ದಿಕ್
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ಇನ್ಮೇಲೆ ಸೆಂಟಿಮೆಂಟ್ ಇಲ್ಲ: ಉಗ್ರಂ ಮಂಜು ವಿರುದ್ಧ ತಿರುಗಿ ಬಿದ್ದ ಮೋಕ್ಷಿತಾ
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ನಿಗಮ ಹಗರಣದಲ್ಲಿ ಕ್ಲೀನ್ ಚಿಟ್; ನಾಗೇಂದ್ರ ಪುನಃ ಆಗುವರೇ ಮಂತ್ರಿ?
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ವಾಲ್ಮೀಕಿ ಹಗರಣ ವಿರುದ್ಧ ಪಾದಾಯಾತ್ರೆಗೆ ಅನುಮತಿ ಸಿಗಲಿಲ್ಲ: ಯತ್ನಾಳ್
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ತಿರುಮಲದಲ್ಲಿ 8 ಅಡಿಯ ದೈತ ನಾಗರಹಾವು ಪತ್ತೆ: ವೈರಲ್ ವಿಡಿಯೋ
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ನಿನ್ನದು ನರಿ ಕಣ್ಣೀರು: ಮಹಾರಾಣಿ ಮೋಕ್ಷಿತಾ ಮೇಲೆ ಉರಿದು ಬಿದ್ದ ಮಂಜು
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್
ಅಭಿನಂದನಾ ಕಾರ್ಯಕ್ರಮಕ್ಕೆ ಸಿಎಂರ ಡೇಟ್ ಕೇಳಲು ಬಂದಿದ್ದು ಎಂದ ಯೋಗೇಶ್ವರ್