Forbes Most Powerful Women 2024: ಫೋರ್ಬ್ಸ್ ಪ್ರಕಟಿಸಿದ ವಿಶ್ವದ 100 ಅತಿಪ್ರಬಲ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯ ನಾರಿಯರು

ಫೋರ್ಬ್ಸ್‌ನ 2024ರ ಅತ್ಯಂತ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯ ಮಹಿಳೆಯರು ಸ್ಥಾನ ಪಡೆದಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವದಲ್ಲೇ 28ನೇ ಸ್ಥಾನದಲ್ಲಿದ್ದಾರೆ ಮತ್ತು ಭಾರತದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ರೋಶನಿ ನಾದರ್ ಮಲ್ಹೋತ್ರಾ (ಎಚ್‌ಸಿಎಲ್) ಮತ್ತು ಕಿರಣ್ ಮಜುಂದಾರ್-ಶಾ (ಬಯೋಕಾನ್) ಸಹ ಈ ಪಟ್ಟಿಯಲ್ಲಿದ್ದಾರೆ.

Forbes Most Powerful Women 2024: ಫೋರ್ಬ್ಸ್ ಪ್ರಕಟಿಸಿದ ವಿಶ್ವದ 100 ಅತಿಪ್ರಬಲ ಮಹಿಳೆಯರ ಪಟ್ಟಿಯಲ್ಲಿ ನಾಲ್ವರು ಭಾರತೀಯ ನಾರಿಯರು
Forbes' 2024 Most Powerful WomenImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Dec 13, 2024 | 11:50 AM

ಫೋರ್ಬ್ಸ್ ಮೋಸ್ಟ್ ಪವರ್​ಫುಲ್ ವುಮೆನ್ 2024 ರ ಪಟ್ಟಿಯಲ್ಲಿ 100 ಮಂದಿ ಅತ್ಯಂತ ಪ್ರಬಲ ಮಹಿಳೆಯರನ್ನು ಗುರುತಿಸಲಾಗಿದೆ. ಈ ಪಟ್ಟಿಯಲ್ಲಿ ನಾಲ್ವರು ಭಾರತೀಯ ಮಹಿಳೆ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಫೋರ್ಬ್ಸ್ ಪಟ್ಟಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಶ್ವದಲ್ಲೇ 28 ನೇ ಸ್ಥಾನದಲ್ಲಿದ್ದು, ಭಾರತದ ಅತ್ಯಂತ ಪ್ರಬಲ ಮಹಿಳೆಯರ ಸ್ಥಾನದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಇದಲ್ಲದೇ ಎಚ್​ಸಿಎಲ್ ಕಾರ್ಪೊರೇಷನ್​ನ ಸಿಇಒ ರೋಷನಿ ನಾದರ್ ಮಲ್ಹೋತ್ರಾ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಮ್ದಾರ್ ಷಾ ಅವರು ಈ ಪಟ್ಟಿಯಲ್ಲಿ ಇರುವ ಇತರ ಭಾರತೀಯ ಮಹಿಳೆಯರು.

ನಿರ್ಮಲಾ ಸೀತಾರಾಮನ್ (28 ನೇ ಶ್ರೇಯಾಂಕ):

ಈ ಪಟ್ಟಿಯಲ್ಲಿ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ 28 ನೇ ಸ್ಥಾನದಲ್ಲಿದ್ದಾರೆ. 2023ರ ಫೋರ್ಬ್ಸ್ ಮೋಸ್ಟ್ ಪವರ್​ಫುಲ್ ವುಮೆನ್ ಪಟ್ಟಿಯಲ್ಲಿ ನಿರ್ಮಲಾ ಸೀತಾರಾಮನ್ ಅವರು 32ನೇ ಶ್ರೇಯಾಂಕ ಪಡೆದಿದ್ದರು. 2017ರಿಂದ 2019ರ ವರೆಗೆ 28ನೇ ರಕ್ಷಣಾ ಸಚಿವೆಯಾದರು. ಜೂನ್ 2024 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯ ನಂತರ ಅವರನ್ನು ಮರುನೇಮಕ ಮಾಡಲಾಯಿತು. ಭಾರತದ ಸುಮಾರು 4 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನು ನಿರ್ವಹಿಸುವ ಕಾರ್ಯವನ್ನು ಇವರಿಗೆ ವಹಿಸಲಾಗಿದೆ.

ರೋಶನಿ ನಾದರ್ ಮಲ್ಹೋತ್ರಾ (81 ನೇ ಶ್ರೇಯಾಂಕ):

ಫೋರ್ಬ್ಸ್ ಮೋಸ್ಟ್ ಪವರ್​ಫುಲ್ ವುಮೆನ್ 2024 ರ ಪಟ್ಟಿಯಲ್ಲಿರುವ ಎರಡನೇ ಭಾರತೀಯ ಮಹಿಳೆ ಎಚ್​ಸಿಎಲ್ ಕಾರ್ಪೊರೇಷನ್​ನ ಸಿಇಒ ರೋಷನಿ ನಾದರ್ ಮಲ್ಹೋತ್ರಾ. ರೋಶ್ನಿ ನಾಡರ್ ಮಲ್ಹೋತ್ರಾ ಅವರು ಎಚ್‌ಸಿಎಲ್ ಸಂಸ್ಥಾಪಕ ಮತ್ತು ಕೈಗಾರಿಕೋದ್ಯಮಿ ಶಿವ ನಾಡರ್ ಅವರ ಪುತ್ರಿ. 1976 ರಲ್ಲಿ ತನ್ನ ತಂದೆ ಶಿವ ನಾಡಾರ್ ಸ್ಥಾಪಿಸಿದ $12 ಬಿಲಿಯನ್ ಉದ್ಯಮದ ಕಾರ್ಯತಂತ್ರದ ನಿರ್ಧಾರಗಳನ್ನು ಅವರು ನೋಡಿಕೊಳ್ಳುತ್ತಾರೆ. ಅವರ ಸಾಂಸ್ಥಿಕ ಸಾಧನೆಗಳ ಹೊರತಾಗಿ, ಮಲ್ಹೋತ್ರಾ ಅವರು ಶಿವ ನಾಡಾರ್ ಫೌಂಡೇಶನ್‌ನ ಟ್ರಸ್ಟಿಯಾಗಿದ್ದಾರೆ.

ಇದನ್ನೂ ಓದಿ: ಹೊಸ ಪ್ಯಾನ್ ಕಾರ್ಡ್​ನಲ್ಲಿ ಕ್ಯುಆರ್ ಕೋಡ್ ಮಹತ್ವವೇನು? ಆನ್ಲೈನಲ್ಲಿ 50 ರೂ ಶುಲ್ಕದೊಂದಿಗೆ ಕಾರ್ಡ್ ಪಡೆಯುವ ಕ್ರಮ

ಕಿರಣ್ ಮಜುಂದಾರ್-ಶಾ (82 ನೇ ಶ್ರೇಯಾಂಕ):

ಫೋರ್ಬ್ಸ್‌ನ ಪವರ್ ವುಮೆನ್ ಪಟ್ಟಿಯಲ್ಲಿ 82 ನೇ ಸ್ಥಾನ ಮತ್ತು 2024 ರಲ್ಲಿ ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ 91 ನೇ ಸ್ಥಾನವನ್ನು ಪಡೆದಿರುವ ಕಿರಣ್ ಮಜುಂದಾರ್-ಶಾ ಅವರು ಜೈವಿಕ ತಂತ್ರಜ್ಞಾನದಲ್ಲಿ ಟ್ರಯಲ್‌ಬ್ಲೇಜರ್ ಆಗಿ ತಮ್ಮ ಸ್ಥಾನವನ್ನು ಗಳಿಸಿದ್ದಾರೆ. ಕಿರಣ್ ಮಜುಂದಾರ್ ಶಾ ಭಾರತದ ಸೆಲ್ಫ್ ಮೇಡ್ ಮಹಿಳಾ ಶ್ರೀಮಂತ ವ್ಯಕ್ತಿಯಾಗಿದ್ದಾರೆ ಎಂದು ಫೋರ್ಬ್ಸ್ ಬಣ್ಣಿಸಿದೆ. 1978ರಲ್ಲಿ ಅವರು ಬಯೋಫಾರ್ಮಾಸ್ಯುಟಿಕಲ್ ಸಂಸ್ಥೆ ಬಯೋಕಾನ್ ಸ್ಥಾಪಿಸಿದರು. ಈ ಕಂಪನಿಯು ಇದು ಮಲೇಷ್ಯಾದ ಜೋಹೋರ್ ಪ್ರದೇಶದಲ್ಲಿ ಏಷ್ಯಾದ ಅತಿದೊಡ್ಡ ಇನ್ಸುಲಿನ್ ಕಾರ್ಖಾನೆಯನ್ನು ಹೊಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ