ಭಾರತದ ಫಾರೆಕ್ಸ್ ಮೀಸಲು ನಿಧಿ 648 ಬಿಲಿಯನ್ ಡಾಲರ್​ಗೆ ಏರಿಕೆ; ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟ

Forex Reserves of India on 2024 April 5th: ಭಾರತದ ಫಾರೆಕ್ಸ್ ಮೀಸಲು ನಿಧಿ ಏಪ್ರಿಲ್ 5ರಂದು ಅಂತ್ಯಗೊಂಡ ವಾರದಲ್ಲಿ 648.56 ಬಿಲಿಯನ್ ಡಾಲರ್​ಗೆ ಏರಿದೆ. ಇದು ಫಾರೆಕ್ಸ್ ನಿಧಿಯಲ್ಲಿ ಆಗಿರುವ ಸತತ ಏಳನೇ ಹೆಚ್ಚಳವಾಗಿದೆ. 2021ರ ಸೆಪ್ಟೆಂಬರ್​ನಲ್ಲಿ 642 ಬಿಲಿಯನ್ ಡಾಲರ್ ಫಾರೆಕ್ಸ್ ಸಂಪತ್ತು ಇತ್ತು. ಮೂರು ವಾರಗಳ ಹಿಂದೆ ಈ ದಾಖಲೆಯನ್ನು ಹಿಂದಿಕ್ಕಲಾಗಿದೆ. ಆರ್​ಬಿಐ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಏ. 5ರ ವಾರದಲ್ಲಿ 2.98 ಬಿಲಿಯನ್ ಡಾಲರ್​ನಷ್ಟು ಫಾರೆಕ್ಸ್ ಮೀಸಲು ಸಂಪತ್ತು ಏರಿಕೆ ಆಗಿದೆ.

ಭಾರತದ ಫಾರೆಕ್ಸ್ ಮೀಸಲು ನಿಧಿ 648 ಬಿಲಿಯನ್ ಡಾಲರ್​ಗೆ ಏರಿಕೆ; ಹೊಸ ಸಾರ್ವಕಾಲಿಕ ಗರಿಷ್ಠ ಮಟ್ಟ
ಫಾರೆಕ್ಸ್ ರಿಸರ್ವ್ಸ್
Follow us
|

Updated on: Apr 14, 2024 | 8:37 AM

ನವದೆಹಲಿ, ಏಪ್ರಿಲ್ 14: ಭಾರತದ ವಿದೇಶ ವಿನಿಮಯ ಮೀಸಲು ನಿಧಿ (Forex Reserves) ಸತತ ಏಳನೇ ವಾರವೂ ಏರಿಕೆ ಆಗಿದೆ. ಏಪ್ರಿಲ್ 5ರಂದು ಅಂತ್ಯಗೊಂಡ ವಾರದಲ್ಲಿ ಫಾರೆಕ್ಸ್ ರಿಸರ್ವ್ಸ್ 2.98 ಬಿಲಿಯನ್ ಡಾಲರ್​ನಷ್ಟು ಹೆಚ್ಚಳವಾಗಿದೆ. ಇದರೊಂದಿಗೆ ಭಾರತದ ಒಟ್ಟು ಫಾರೆಕ್ಸ್ ಮೀಸಲು ನಿಧಿ 648.56 ಕೋಟಿ ರೂಗೆ ಏರಿದೆ. ಸತತ ಮೂರನೇ ಬಾರಿ ಗರಿಷ್ಠ ಮಟ್ಟ ಮೀರಿದ ದಾಖಲೆ ಸ್ಥಾಪಿಸಿದೆ. ಇದು ಹೊಸ ಗರಿಷ್ಠ ಫಾರೆಕ್ಸ್ ಮೀಸಲು ನಿಧಿಯಾಗಿದೆ. ಮಾರ್ಚ್ 29ರಂದು ಅಂತ್ಯಗೊಂಡ ವಾರದಲ್ಲಿ 2.95 ಬಿಲಿಯನ್ ಡಾಲರ್​ನಷ್ಟು ಏರಿತ್ತು.

ಏಪ್ರಿಲ್ 5ರಂದು ಅಂತ್ಯಗೊಂಡ ವಾರದಲ್ಲಿ ಭಾರತದ ಫಾರೀನ್ ಎಕ್ಸ್​ಚೇಂಜ್ ರಿಸರ್ವ್ಸ್​ನ ಎಲ್ಲಾ ಅಂಶಗಳೂ ಏರಿಕೆ ಆಗಿವೆ. ಆದರೆ, ಚಿನ್ನದ ಸಂಗ್ರಹವನ್ನು ಆರ್​ಬಿಐ ಸತತವಾಗಿ ಹೆಚ್ಚಿಸುತ್ತಿದೆ. ಫಾರೆಕ್ಸ್ ರಿಸರ್ವ್ಸ್​ನ ಪ್ರಮುಖ ಭಾಗವಾಗಿರುವ ಫಾರೀನ್ ಕರೆನ್ಸಿ ಆಸ್ತಿಯಲ್ಲಿ 549 ಮಿಲಿಯನ್ ಡಾಲರ್​ನಷ್ಟು ಏರಿದೆ. ಗೋಲ್ಡ್ ರಿಸರ್ವ್ಸ್ 2.4 ಬಿಲಿಯನ್ ಡಾಲರ್​ನಷ್ಟು ಹೆಚ್ಚಾಗಿದೆ.

ಇದನ್ನೂ ಓದಿ: ಟಾಟಾ ಕನ್ಸಲ್ಟನ್ಸಿ ಸರ್ವಿಸ್ ಲಾಭ ಶೇ. 9ರಷ್ಟು ಏರಿಕೆ; ಇಡೀ ವರ್ಷದಲ್ಲಿ 45,908 ಕೋಟಿ ರೂ ನಿವ್ವಳ ಲಾಭ; 28 ರೂ ಡಿವಿಡೆಂಡ್ ಘೋಷಣೆ

ಸ್ಪೆಷಲ್ ಡ್ರಾಯಿಂಗ್ ರೈಟ್ಸ್ ಅಥವಾ ಎಸ್​ಡಿಆರ್​ಗಳು 24 ಮಿಲಿಯನ್ ಡಾಲರ್​ನಷ್ಟು ಏರಿಕೆ ಆಗಿದೆ. ಐಎಂಎಫ್​ನಲ್ಲಿರುವ ಮೀಸಲು ನಿಧಿ 9 ಮಿಲಿಯನ್ ಡಾಲರ್​ಗೆ ಏರಿರುವುದು ಆರ್​​ಬಿಐ ಬಿಡುಗಡೆ ಮಾಡಿದ ದತ್ತಾಂಶದಿಂದ ತಿಳಿದುಬರುತ್ತದೆ.

ಏ. 5ಕ್ಕೆ ಭಾರತದ ಫಾರೆಕ್ಸ್ ರಿಸರ್ವ್ಸ್ ನಿಧಿ

ಒಟ್ಟು ಫಾರೆಕ್ಸ್ ಮೀಸಲು ನಿಧಿ: 648.56 ಬಿಲಿಯನ್ ಡಾಲರ್

  • ಫಾರೀನ್ ಕರೆನ್ಸಿ ಅಸೆಟ್ಸ್: 571.17 ಬಿಲಿಯನ್ ಡಾಲರ್
  • ಗೋಲ್ಡ್ ರಿಸರ್ವ್ಸ್: 54.56 ಬಿಲಿಯನ್ ಡಾಲರ್
  • ಎಸ್​ಡಿಆರ್: 18.17 ಬಿಲಿಯನ್ ಡಾಲರ್
  • ಐಎಂಎಫ್​ನಲ್ಲಿನ ನಿಧಿ: 4.67 ಬಿಲಿಯನ್ ಡಾಲರ್

ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿ ಮುಂದುವರಿದ ಭಾರತ

ಅತಿಹೆಚ್ಚು ಫಾರೆಕ್ಸ್ ರಿಸರ್ವ್ಸ್ ಸಂಪತ್ತು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿ ಮುಂದುವರಿದಿದೆ. ಈ ಹಿಂದೆ ನಾಲ್ಕನೇ ಸ್ಥಾನದಲ್ಲಿದ್ದ ರಷ್ಯಾ ಆರನೇ ಸ್ಥಾನಕ್ಕೆ ಕುಸಿಯುವ ಹಂತದಲ್ಲಿದೆ.

ಇದನ್ನೂ ಓದಿ: ಅಶ್ನೀರ್ ಗ್ರೋವರ್​ರಿಂದ ಹೊಸ ಸ್ಟಾರ್ಟಪ್; ಆಸ್ಪತ್ರೆ ಚಿಕಿತ್ಸೆಗೆ ಸಾಲ ಕೊಡುವ ಝೀರೋ ಪೇ; ಹೇಗೆ ಪಡೆಯುವುದು ಈ ಪ್ರೀ ಅಪ್ರೂವ್ಡ್ ಲೋನ್?

ಚೀನಾ 3.22 ಟ್ರಿಲಿಯನ್ ಡಾಲರ್​ನಷ್ಟು ಫಾರೆಕ್ಸ್ ನಿಧಿಯೊಂದಿಗೆ ಅಗ್ರಸ್ಥಾನದಲ್ಲಿದೆ. ಜಪಾನ್ 1.29 ಟ್ರಿಲಿಯನ್ ಡಾಲರ್, ಸ್ವಿಟ್ಜರ್​ಲ್ಯಾಂಡ್ 868 ಬಿಲಿಯನ್ ಡಾಲರ್​ನೊಂದಿಗೆ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ