ನಾಮಿನಿ ಸಂಖ್ಯೆ ಹೆಚ್ಚಳ ಸೇರಿ ಬ್ಯಾಂಕಿಂಗ್ ಕಾನೂನುಗಳಲ್ಲಿ ತರಲಾಗುತ್ತಿರುವ ಕೆಲ ಬದಲಾವಣೆಗಳಿವು…

Banking laws (Amendment) Bill 2024: ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಇಂದು ಲೋಕಸಭೆಯಲ್ಲಿ ಮಸೂದೆ ಮಂಡನೆ ಆಗುತ್ತಿದೆ. ಬ್ಯಾಂಕ್ ಖಾತೆಗೆ ಹೆಸರಿಸಬಹುದಾದ ನಾಮಿನಿಗಳ ಸಂಖ್ಯೆಯನ್ನು ಒಂದರಿಂದ ನಾಲ್ಕಕ್ಕೆ ಏರಿಸಲು ಪ್ರಸ್ತಾಪಿಸಲಾಗಿದೆ. ಸಬ್​ಸ್ಟಾನ್ಷಿಯಲ್ ಇಂಟರೆಸ್ಟ್ ಎಂದು ನಿರ್ದೇಶಕರನ್ನು ವ್ಯಾಖ್ಯಾನಿಸಲು ನಿಯಮ ಬದಲಾವಣೆ ಮಾಡಲಾಗಿದೆ. ಷೇರು ಮಾಲಕತ್ವ ಐದು ಲಕ್ಷ ರೂನಿಂದ ಎರಡು ಕೋಟಿ ರೂಗೆ ಏರಿಸಲಾಗಿದೆ.

ನಾಮಿನಿ ಸಂಖ್ಯೆ ಹೆಚ್ಚಳ ಸೇರಿ ಬ್ಯಾಂಕಿಂಗ್ ಕಾನೂನುಗಳಲ್ಲಿ ತರಲಾಗುತ್ತಿರುವ ಕೆಲ ಬದಲಾವಣೆಗಳಿವು...
ಬ್ಯಾಂಕು
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 09, 2024 | 12:54 PM

ನವದೆಹಲಿ, ಆಗಸ್ಟ್ 9: ಬ್ಯಾಂಕಿಂಗ್ ಕಾನೂನು ತಿದ್ದುಪಡಿ ಮಸೂದೆ 2024 ಅನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡನೆ ಮಾಡಲಿದೆ. ಬ್ಯಾಂಕ್ ಖಾತೆಗೆ ಹೆಚ್ಚು ನಾಮಿನಿಗಳನ್ನು ಹೆಸರಿಸುವುದರಿಂದ ಹಿಡಿದು ಆಡಿಟರ್​ಗಳಿಗೆ ಸಂಭಾವನೆ ನಿಗದಿ ಮಾಡುವ ಸ್ವಾತಂತ್ರ್ಯದವರೆಗೆ ಕೆಲ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ಎರಡು ರಾಷ್ಟ್ರೀಕೃತ ಬ್ಯಾಂಕುಗಳನ್ನು ಖಾಸಗಿಕರಣಗೊಳಿಸುವ ಪ್ರಸ್ತಾಪವನ್ನು ತಿದ್ದುಪಡಿ ಮಸೂದೆಯಲ್ಲಿ ಒಳಗೊಂಡಿಲ್ಲ. ಸಹಕಾರಿ ಬ್ಯಾಂಕುಗಳ ನಿಯಮಗಳಲ್ಲಿ ಕೆಲ ಬದಲಾವಣೆ ತರಲಾಗಿರುವುದು ತಿಳಿದುಬಂದಿದೆ.

ನಾಮಿನಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆ

ಒಂದು ಬ್ಯಾಂಕ್ ಖಾತೆಗೆ ಒಬ್ಬರು ನಾಮಿನಿಯನ್ನಷ್ಟೇ ಹೆಸರಿಸಲು ಸದ್ಯಕ್ಕೆ ಇರುವ ಅವಕಾಶ. ತಿದ್ದುಪಡಿ ಮಸೂದೆಯಲ್ಲಿ ಈ ಸಂಖ್ಯೆಯನ್ನು ನಾಲ್ಕಕ್ಕೆ ಏರಿಸುವ ಪ್ರಸ್ತಾಪ ಇದೆ. ಅಂದರೆ, ನಿಮ್ಮ ಬ್ಯಾಂಕ್ ಖಾತೆಗೆ ನೀವು ನಾಲ್ವರು ವಾರಸುದಾರರನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಫೋನ್​ನ ಬಯೋಮೆಟ್ರಿಕ್ ಅಥವಾ ಫೇಸ್ ಐಡಿ ಮೂಲಕ ಯುಪಿಐ ಪಾವತಿ; ಎನ್​ಪಿಸಿಐ ಯೋಜನೆ

ನಿರ್ದೇಶಕರ ಆಸ್ತಿಮೌಲ್ಯ ಮಿತಿ ಹೆಚ್ಚಳ

ಒಂದು ಕಂಪನಿಯಲ್ಲಿ ನಿರ್ದೇಶಕರು 5 ಲಕ್ಷ ರೂಗಿಂತ ಹೆಚ್ಚು ಮೌಲ್ಯದ ಆಸ್ತಿ ಹೊಂದಿದ್ದರೆ ಅದನ್ನು ಸಬ್​ಸ್ಟಾನ್ಷಿಯಲ್ ಇಂಟರೆಸ್ಟ್ ಎಂದು ಪರಿಗಣಿಸಲಾಗುತ್ತದೆ. ಇಂಥವರಿಗೆ ಸಾಲ ಕೊಡಲು ಮಂಡಳಿ ಅನುಮೋದನೆ ಪಡೆಯಬೇಕಿರುವುದು ಸೇರಿದ ಕೆಲ ನಿರ್ಬಂಧಗಳಿವೆ. ಈಗ ತಿದ್ದುಪಡಿ ಮಸೂದೆಯಲ್ಲಿರುವ ಹೊಸ ನಿಯಮದ ಪ್ರಕಾರ, ನಿರ್ದೇಶಕರದ್ದು ಸಬ್​ಸ್ಟಾನ್ಷಿಯಲ್ ಇಂಟರೆಸ್ಟ್ ಎಂದು ಪರಿಗಣಿತವಾಗಬೇಕಾದರೆ ಎರಡು ಕೋಟಿ ರೂ ಮೊತ್ತದ ಷೇರುದಾರಿಕೆ ಅಥವಾ ಮಾಲಿಕತ್ವ ಇರಬೇಕು.

ಆಡಿಟರ್​ಗಳಿಗೆ ಸಂಭಾವನೆ

ಸರ್ಕಾರದಿಂದ ನೇಮಿಸಲಾದ ಆಡಿಟರ್​ಗಳಿಗೆ ಬ್ಯಾಂಕುಗಳೇ ಸಂಭಾವನೆ ನೀಡಬೇಕು. ಎಷ್ಟು ಸಂಭಾವನೆ ನೀಡಬೇಕೆಂದು ಬ್ಯಾಂಕುಗಳೇ ನಿರ್ಧರಿಸುವ ಸ್ವಾತಂತ್ರ್ಯವನ್ನು ತಿದ್ದುಪಡಿ ಮಸೂದೆಯಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ: ಯೂನಿಯನ್ ಬ್ಯಾಂಕ್​ನಲ್ಲಿ ಎಫ್​ ಡಿ ದರ ಹೆಚ್ಚಳ; ಫಿಕ್ಸೆಡ್ ಇಟ್ಟರೆ ಶೇ. 8.15ರವರೆಗೆ ಬಡ್ಡಿ

ಇನ್ನು, ಬ್ಯಾಂಕುಗಳು ನಿಯಮಾವಳಿ ಅನುಸರಿಸಿರುವ ಬಗ್ಗೆ ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಶುಕ್ರವಾರಗಳಂದು ವರದಿ ಸಲ್ಲಿಸಬೇಕು. ತಿದ್ದುಪಡಿ ಮಾಡಲಾದ ನಿಯಮದ ಪ್ರಕಾರ ತಿಂಗಳ 15ನೇ ತಾರೀಖು ಮತ್ತು ಕೊನೆಯ ತಾರೀಖಿನಂದು ಈ ವರದಿ ಸಲ್ಲಿಕೆ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ