AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಕಸ ಹೊಟ್ಟೆಗೆ ಅರೆಕಾಸು ಮಜ್ಜಿಗೆ; ದಿನಕ್ಕೆ 1,600 ಕೋಟಿ ನಷ್ಟವಿರುವ ತೈಲ ಕಂಪನಿಗಳಿಗೆ 3 ರೂ ಪೆಟ್ರೋಲ್ ಬೆಲೆ ಏರಿಕೆ ಸಾಲುತ್ತಾ?

Indian Oil PSUs Losing Billions, Future Hikes Inevitable: ಜಾಗತಿಕ ಕಚ್ಚಾ ತೈಲ ಬೆಲೆ ಏರಿದರೂ, ಭಾರತದಲ್ಲಿ ಪೆಟ್ರೋಲ್-ಡೀಸೆಲ್ ದರ ಸ್ಥಿರವಾಗಿಟ್ಟಿದ್ದರಿಂದ ಸರ್ಕಾರಿ ತೈಲ ಕಂಪನಿಗಳು (HPCL, BPCL, IOCL) ದಿನಕ್ಕೆ ₹1,600 ಕೋಟಿ ನಷ್ಟ ಅನುಭವಿಸುತ್ತಿವೆ. ಇತ್ತೀಚಿನ ₹3 ಏರಿಕೆ ಅಲ್ಪವಾಗಿದ್ದು, ಒಟ್ಟು ನಷ್ಟ ಭರಿಸಲು ಪ್ರತಿ ಲೀಟರ್‌ಗೆ ₹32ರವರೆಗೆ ಹೆಚ್ಚಳ ಬೇಕಿದೆ. ಇದು ಜನಸಾಮಾನ್ಯರಿಗೆ ಹಣದುಬ್ಬರ ಮತ್ತು ಸರಕು ಸಾಗಣೆ ವೆಚ್ಚ ಹೆಚ್ಚಳದಿಂದ ಮತ್ತಷ್ಟು ಹೊರೆಯಾಗಲಿದೆ.

ರಕ್ಕಸ ಹೊಟ್ಟೆಗೆ ಅರೆಕಾಸು ಮಜ್ಜಿಗೆ; ದಿನಕ್ಕೆ 1,600 ಕೋಟಿ ನಷ್ಟವಿರುವ ತೈಲ ಕಂಪನಿಗಳಿಗೆ 3 ರೂ ಪೆಟ್ರೋಲ್ ಬೆಲೆ ಏರಿಕೆ ಸಾಲುತ್ತಾ?
ಪೆಟ್ರೋಲ್Image Credit source: Shutterstock
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 15, 2026 | 1:45 PM

Share

ನವದೆಹಲಿ, ಮೇ 15: ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರುತ್ತಿದ್ದರೂ, ಭಾರತದಲ್ಲಿ ಪೆಟ್ರೋಲ್ (Petrol) ಮತ್ತು ಡೀಸೆಲ್ ಬೆಲೆಗಳನ್ನು ಸ್ಥಿರವಾಗಿಟ್ಟಿರುವುದರಿಂದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು (HPCL, BPCL, IOCL) ಭಾರಿ ನಷ್ಟ ಅನುಭವಿಸುತ್ತಿವೆ ಎಂದು ವರದಿಯೊಂದು ತಿಳಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಾಗಿದ್ದರೂ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಮಾಡದ ಕಾರಣ ತೈಲ ಕಂಪನಿಗಳು ಪ್ರತಿದಿನ ಸುಮಾರು 1,600 ಕೋಟಿ ರೂಗಳಿಗೂ ಹೆಚ್ಚು ನಷ್ಟ ಅನುಭವಿಸುತ್ತಿವೆ.

ಈ ನಷ್ಟವನ್ನು ಸರಿದೂಗಿಸಲು ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ ಹೆಚ್ಚಿಸಲಾಗಿದೆ. ಆದರೆ, ತಜ್ಞರ ಪ್ರಕಾರ ಕಂಪನಿಗಳು ಅನುಭವಿಸುತ್ತಿರುವ ಒಟ್ಟಾರೆ ನಷ್ಟಕ್ಕೆ ಹೋಲಿಸಿದರೆ ಈ ಏರಿಕೆ ತುಂಬಾ ಸಣ್ಣದು.

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಪರಿಣಾಮದಿಂದ ತೈಲ ಬೆಲೆ ಏರಿಕೆ

ಇರಾನ್ ಮತ್ತು ಇಸ್ರೇಲ್/ಅಮೆರಿಕ ನಡುವಿನ ಯುದ್ಧದಂತಹ ಪರಿಸ್ಥಿತಿಯಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ವಿಶೇಷವಾಗಿ ‘ಹಾರ್ಮುಜ್ ಜಲಸಂಧಿ’ (Strait of Hormuz) ಮೂಲಕ ನಡೆಯುವ ತೈಲ ಸಾಗಾಟಕ್ಕೆ ಅಡ್ಡಿಯಾಗಿರುವುದು ಕಚ್ಚಾ ತೈಲದ ಬೆಲೆ ಏರಿಕೆಗೆ ಮುಖ್ಯ ಕಾರಣವಾಗಿದೆ.

ಇದನ್ನೂ ಓದಿ: ಅನಿಲ್ ಅಂಬಾನಿ ಕಂಪನಿಗಳಿಗೆ ಸಿಬಿಐ ಶಾಕ್: 27 ಸಾವಿರ ಕೋಟಿ ರೂ. ವಂಚನೆ ಪ್ರಕರಣ, ಬೆಂಗಳೂರು ಸೇರಿ ಹಲವೆಡೆ ದಾಳಿ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಕಾರಣದಿಂದಾಗಿ ತೈಲ ಬೆಲೆ ಏರಿಕೆಯನ್ನು ತಡೆಹಿಡಿಯಲಾಗಿತ್ತು ಎಂದು ಹೇಳಲಾಗುತ್ತಿತ್ತು. ಕಾಕತಾಳೀಯವೆಂಬಂತೆ, ಚುನಾವಣೆ ಮುಗಿದ ಬೆನ್ನಲ್ಲೇ ಈಗ ಬೆಲೆ ಏರಿಕೆಯ ಪ್ರಕ್ರಿಯೆ ಆರಂಭವಾಗಿದೆ.

ಈಗಾಗಲೇ ಹಣದುಬ್ಬರದಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಈ ಬೆಲೆ ಏರಿಕೆ ಮತ್ತಷ್ಟು ಹೊರೆಯಾಗಲಿದೆ. ಸರಕು ಸಾಗಣೆ ವೆಚ್ಚ ಹೆಚ್ಚಾಗುವುದರಿಂದ ದಿನಬಳಕೆ ವಸ್ತುಗಳ ಬೆಲೆಯೂ ಏರುವ ಸಾಧ್ಯತೆಯಿದೆ.

ಮುಂದಿನ ದಿನಗಳಲ್ಲಿ 32 ರೂ ಬೆಲೆ ಏರಿಕೆ ಸಾಧ್ಯತೆ?

ತೈಲ ಕಂಪನಿಗಳ ನಷ್ಟವನ್ನು ಸಂಪೂರ್ಣವಾಗಿ ನೀಗಿಸಲು ಪೆಟ್ರೋಲ್ ಮೇಲೆ ಸುಮಾರು 28 ರೂ. ಮತ್ತು ಡೀಸೆಲ್ ಮೇಲೆ 32 ರೂ. ಗಳಷ್ಟು ಬೆಲೆ ಏರಿಕೆಯ ಅಗತ್ಯವಿದೆ ಎಂದು ಕೆಲವು ವರದಿಗಳು ಹೇಳಿವೆ. ಹೀಗಾಗಿ ಮುಂಬರುವ ದಿನಗಳಲ್ಲಿ ಹಂತ ಹಂತವಾಗಿ ಬೆಲೆ ಏರಿಕೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ ಭರ್ಜರಿ ಏರಿಕೆ; ಜನಸಾಮಾನ್ಯರಿಗೆ ಬೆಲೆ ಏರಿಕೆಯ ಆಘಾತ

ಒಟ್ಟಾರೆಯಾಗಿ, ಜಾಗತಿಕ ರಾಜಕೀಯ ಬೆಳವಣಿಗೆಗಳು ಮತ್ತು ತೈಲ ಕಂಪನಿಗಳ ಆರ್ಥಿಕ ಸ್ಥಿತಿಯನ್ನು ಸರಿದೂಗಿಸಲು ಸರ್ಕಾರವು ಬೆಲೆ ಏರಿಕೆಯ ಕಠಿಣ ನಿರ್ಧಾರಕ್ಕೆ ಮುಂದಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ