Petrol Price Today: ದೇಶದೆಲ್ಲೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ದುಬಾರಿ

|

Updated on: Oct 24, 2024 | 7:27 AM

ಸರ್ಕಾರಿ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ದೆಹಲಿ-ಮುಂಬೈನಂತಹ ದೇಶದ 4 ಮಹಾನಗರಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಕಚ್ಚಾ ತೈಲದ ಬೆಲೆಗಳು ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 75.41 ಡಾಲರ್‌ಗೆ ಕುಸಿದಿದೆ. WTI ದರವು ಪ್ರತಿ ಬ್ಯಾರೆಲ್‌ಗೆ 71.25 ಡಾಲರ್​​ಗೆ ಕುಸಿದಿದೆ.

Petrol Price Today: ದೇಶದೆಲ್ಲೆಡೆ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಕೊಂಚ ದುಬಾರಿ
ಪೆಟ್ರೋಲ್‌, ಡೀಸೆಲ್‌ ಬೆಲೆ
Follow us on

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕುಸಿದಿದ್ದರೂ, ಇಂದು ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆ ಏರಿಕೆಯಾಗಿದೆ. ಉತ್ತರ ಪ್ರದೇಶದ ನಗರಗಳಿಂದ ಹಿಡಿದು ರಾಜಸ್ಥಾನದವರೆಗೆ ಇಂದು ತೈಲ ಬೆಲೆಯಲ್ಲಿ ಬದಲಾವಣೆಯಾಗಿದೆ. ಸರ್ಕಾರಿ ತೈಲ ಕಂಪನಿಗಳು ಗುರುವಾರ ಬೆಳಗ್ಗೆ ಪೆಟ್ರೋಲ್ ಮತ್ತು ಡೀಸೆಲ್‌ನ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ದೆಹಲಿ-ಮುಂಬೈನಂತಹ ದೇಶದ 4 ಮಹಾನಗರಗಳಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಸರ್ಕಾರಿ ತೈಲ ಕಂಪನಿಗಳ ಪ್ರಕಾರ, ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದಲ್ಲಿ (ನೋಯ್ಡಾ ಮತ್ತು ಗ್ರೇಟರ್ ನೋಯ್ಡಾ) ಪೆಟ್ರೋಲ್ 18 ಪೈಸೆಗಳಷ್ಟು ದುಬಾರಿಯಾಗಿದೆ ಮತ್ತು ಪ್ರತಿ ಲೀಟರ್‌ಗೆ 95.01 ರೂ.ಗೆ ಮಾರಾಟವಾಗುತ್ತಿದೆ. ಡೀಸೆಲ್ ಕೂಡ 18 ಪೈಸೆ ಏರಿಕೆಯಾಗಿದ್ದು, ಲೀಟರ್ ಗೆ 88.14 ರೂ.ಗೆ ತಲುಪಿದೆ. ಗಾಜಿಯಾಬಾದ್ ಜಿಲ್ಲೆಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 6 ಪೈಸೆ ಇಳಿಕೆಯಾಗಿ 94.65 ರೂ. ಆಗಿದೆ. ಡೀಸೆಲ್ ಲೀಟರ್ ಗೆ 7 ಪೈಸೆ ಇಳಿಕೆಯಾಗಿ 87.75 ರೂ.ಗೆ ತಲುಪಿದೆ. ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 82 ಪೈಸೆಯಷ್ಟು ಹೆಚ್ಚಾಗಿದೆ ಮತ್ತು ಲೀಟರ್‌ಗೆ 106.17 ರೂ.ಗೆ ಮಾರಾಟವಾಗುತ್ತಿದೆ. ಡೀಸೆಲ್ ಲೀಟರ್‌ಗೆ 74 ಪೈಸೆ ಏರಿಕೆಯಾಗಿ 91.52 ರೂ.ಗೆ ಮಾರಾಟವಾಗುತ್ತಿದೆ.

ಇದನ್ನೂ ಓದಿ: Bengaluru Rains: ಬೆಂಗಳೂರಲ್ಲಿ ಮಳೆಯಿಂದ ಇಂದು ಹಳದಿ ಅಲರ್ಟ್​ ಘೋಷಣೆ; ಶಾಲೆಗಳಿಗೆ ರಜೆ, ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ

ಕಚ್ಚಾ ತೈಲದ ಬೆಲೆಗಳು ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 75.41 ಡಾಲರ್‌ಗೆ ಕುಸಿದಿದೆ. WTI ದರವು ಪ್ರತಿ ಬ್ಯಾರೆಲ್‌ಗೆ 71.25 ಡಾಲರ್​​ಗೆ ಕುಸಿದಿದೆ.

4 ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು:

– ದೆಹಲಿಯಲ್ಲಿ ಪೆಟ್ರೋಲ್ 96.65 ರೂ ಮತ್ತು ಡೀಸೆಲ್ ಲೀಟರ್‌ಗೆ 89.82 ರೂ.

– ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ ಲೀಟರ್‌ಗೆ 94.27 ರೂ.

– ಚೆನ್ನೈನಲ್ಲಿ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್‌ಗೆ 94.24 ರೂ.

– ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್‌ಗೆ 92.76 ರೂ.

ಇದನ್ನೂ ಓದಿ: ಗಡಿಯಲ್ಲಿ ಶಾಂತಿಗೆ ಆದ್ಯತೆ ನೀಡಬೇಕು; ರಷ್ಯಾದಲ್ಲಿ ಚೀನಾ ಅಧ್ಯಕ್ಷರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ಹಾಗೇ, ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 1 ಲೀಟರ್​​ಗೆ 102.86 ರೂ. ಆಗಿದೆ. ಡೀಸೆಲ್ ಬೆಲೆ ಲೀಟರ್​ಗೆ 88.94 ರೂ. ಆಗಿದೆ. ನೋಯ್ಡಾದಲ್ಲಿ ಪ್ರತಿ ಲೀಟರ್ ಪೆಟ್ರೋಲ್ 95.01 ರೂ ಮತ್ತು ಡೀಸೆಲ್ 88.14 ರೂ. ಆಗಿದೆ. ಗಾಜಿಯಾಬಾದ್‌ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ 94.65 ರೂ ಮತ್ತು ಡೀಸೆಲ್ 87.75 ರೂ ಆಗಿದೆ. ಸಿಕಾರ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 106.17 ರೂ ಮತ್ತು ಡೀಸೆಲ್ 91.52 ರೂ ಆಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಬದಲಾಗುತ್ತದೆ. ಹೊಸ ದರಗಳು ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕ, ಡೀಲರ್ ಕಮಿಷನ್, ವ್ಯಾಟ್ ಮತ್ತು ಇತರ ವಸ್ತುಗಳನ್ನು ಸೇರಿಸಿದ ನಂತರ, ಅದರ ಬೆಲೆ ಮೂಲ ಬೆಲೆಗಿಂತ ಸುಮಾರು ಎರಡು ಪಟ್ಟು ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ