AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

G20 FCBD Meet: ಬೆಂಗಳೂರಿನಲ್ಲಿ 2ನೇ ಜಿ20 ಸಭೆ; ವಸುದೈವ ಕುಟುಂಬದ ಮಹತ್ವ ಸಾರಿದ ಅನುರಾಗ್ ಠಾಕೂರ್

Anurag Thakur In Bengaluru: ಬೆಂಗಳೂರಿನಲ್ಲಿ ಜಿ20 ದೇಶಗಳ ಹಣಕಾಸು ಮತ್ತು ಕೇಂದ್ರೀಯ ಬ್ಯಾಂಕ್ ಉಪಮುಖ್ಯಸ್ಥರ ಸಭೆ ನಡೆಯಿತು. ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್, ಆರ್​ಬಿಐ ಡೆಪ್ಯುಟಿ ಗವರ್ನರ್ ಮೈಕೇಲ್ ಪಾತ್ರಾ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾತನಾಡಿದರು.

G20 FCBD Meet: ಬೆಂಗಳೂರಿನಲ್ಲಿ 2ನೇ ಜಿ20 ಸಭೆ; ವಸುದೈವ ಕುಟುಂಬದ ಮಹತ್ವ ಸಾರಿದ ಅನುರಾಗ್ ಠಾಕೂರ್
ಜಿ20 ದೇಶಗಳ ಹಣಕಾಸು ಮತ್ತು ಸೆಂಟ್ರಲ್ ಬ್ಯಾಂಕ್ ಉಪಮುಖ್ಯಸ್ಥರ ಸಭೆ Image Credit source: Anurag Thakur Twitter
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 22, 2023 | 1:40 PM

Share

ಬೆಂಗಳೂರು: ಜಿ20 ದೇಶಗಳ ಹಣಕಾಸು ಮತ್ತು ಸೆಂಟ್ರಲ್ ಬ್ಯಾಂಕ್ ಉಪಮುಖ್ಯಸ್ಥರ ಸಭೆ (G20 FCBD) ಬೆಂಗಳೂರಿನಲ್ಲಿ ಬುಧವಾರ ನಡೆಯಿತು. 20 ದೇಶಗಳ ಹಣಕಾಸು ಇಲಾಖೆ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು, ಸೆಂಟ್ರಲ್ ಬ್ಯಾಂಕುಗಳ ಉಪಗವರ್ನರುಗಳ ಸಭೆ ಇದಾಗಿದ್ದು, ಕೇಂದ್ರ ಆರ್ಥಿಕ ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅಜಯ್ ಸೇಠ್ ಮತ್ತು ಆರ್​ಬಿಐ ಉಪಗವರ್ನರ್ ಮೈಕೇಲ್ ಡಿ ಪಾತ್ರ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಚಿವ ಅನುರಾಗ್ ಠಾಕೂರ್ ಪಾಲ್ಗೊಂಡಿದ್ದರು.

ಈ ವೇಳೆ ಮಾತನಾಡಿದ ಅನುರಾಗ್ ಠಾಕೂರ್, ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಜಿ20 ಸಭೆಯಲ್ಲಿ ವಸುದೈವ ಕುಟುಂಬಂ ಎಂಬ ಸಂದೇಶ ಅಡಕವಾಗಿರುವುದನ್ನು ಒತ್ತಿಹೇಳಿದರು. “ಕೋವಿಡ್​ನ ಕಾಲಘಟ್ಟದಲ್ಲಿ ವಿವಿಧ ದೇಶಗಳು ತೀವ್ರ ಸಂಕಷ್ಟ ಎದುರಿಸುತ್ತಿವೆ. ಹವಾಮಾನ ಬದಲಾವಣೆಯ ದುಷ್ಪರಿಣಾಮಗಳು ಕಾಡುತ್ತಿವೆ. ಜಾಗತಿಕ ರಾಜಕೀಯ ಬಿಕ್ಕಟ್ಟು ಕಾಡುತ್ತಿವೆ. ಇವು ಅಭಿವೃದ್ಧಿಯ ಲಯಕ್ಕೆ ಭಂಗ ತರಬಹುದು. ಈ ಸಂದರ್ಭದಲ್ಲಿ ವಸುದೈವ ಕುಟುಂಬಕಂ ತತ್ವ ಬಹಳ ಉಪಯುಕ್ತವಾಗಿದೆ. ಪರಸ್ಪರ ಸಂವಾದ, ಸಮಾಲೋಚನೆಗಳಿಂದ ಸಂಕಷ್ಟಗಳನ್ನು ಎದುರಿಸಬಹುದುಎಂದು ಅನುರಾಗ್ ಠಾಕೂರ್ ಹೇಳಿದರು.

ಇವತ್ತಿನದ್ದು ಯುದ್ಧದ ಕಾಲಘಟ್ಟವಲ್ಲ. ರಾಜತಾಂತ್ರಿಕತೆ ಮತ್ತು ಸಂವಾದಗಳು ದಾರಿದೀಪ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದನ್ನು ಈಗ ಪುನರುಚ್ಚರಿಸಬಯಸುತ್ತೇನೆ. ಉಕ್ರೇನ್ ಯುದ್ಧದಲ್ಲಿ ಭಾರತದ ನಿಲುವೇನು ಎಂಬುದು ಪ್ರಧಾನಿಗಳ ಈ ಮಾತು ಸೂಚಿಸುತ್ತದೆಎಂದೂ ಕೇಂದ್ರ ಮಾಹಿತಿ ಮತ್ತು ಪ್ರಸರಣ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.

ಇದನ್ನೂ ಓದಿUPI: ಬೆಂಗಳೂರು ಮತ್ತಿತರ ಕಡೆ ಜಿ20 ದೇಶಗಳ ನಾಗರಿಕರಿಗೆ ಯುಪಿಐ ಸೌಲಭ್ಯ

ಫೆಬ್ರುವರಿ 24 ಮತ್ತು 25ರಂದು ಬೆಂಗಳೂರಿನಲ್ಲೇ ಜಿ20 ಹಣಕಾಸು ಮತ್ತು ಸೆಂಟ್ರಲ್ ಬ್ಯಾಂಕ್ ಮುಖ್ಯಸ್ಥರ ಮೊದಲ ಸಭೆ ನಡೆಯಲಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. 20 ದೇಶಗಳ ಹಣಕಾಸು ಸಚಿವರು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರುಗಳು ಸೇರಿ 72 ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾಗತಿಕವಾಗಿ ಸಾಮಾನ್ಯವಾಗಿರುವ ಸಮಸ್ಯೆಗಳನ್ನು ಎದುರಿಸುವ ನಿಟ್ಟಿನಲ್ಲಿ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ಕಾರ್ಯದಿಂದ ಹಿಡಿದು ವಿವಿಧ ವಿಚಾರಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆಯಾಗಲಿದೆ.

ಇಲ್ಲಿ ಜಿ20 ಗುಂಪಿನಲ್ಲಿ ಭಾರತದ ಜೊತೆ ಅಮೆರಿಕ, ಚೀನಾ, ರಷ್ಯಾ, ಬ್ರಿಟನ್, ಯೂರೋಪ್, ಸೌತ್ ಆಫ್ರಿಕಾ ಮೊದಲಾದ ಪ್ರಮುಖ 20 ದೇಶಗಳಿವೆ. ವಿಶ್ವದ ಬಹುತೇಕ ಆರ್ಥಿಕ ಶಕ್ತಿ ಈ 20 ದೇಶಗಳಲ್ಲಿ ಕೇಂದ್ರಿತವಾಗಿವೆ. ಹೀಗಾಗಿ, ಜಿ20 ಗುಂಪಿಗೆ ಅದರದ್ದೇ ಪ್ರಾಮುಖ್ಯತೆ ಇದೆ. ಕಳೆದ ಬಾರಿಯ ಜಿ20 ಸಭೆಯು ಚೀನಾ ನಾಯಕತ್ವದಲ್ಲಿ ನಡೆದಿತ್ತು. ಈ ಬಾರಿ ಭಾರತಕ್ಕೆ ಅಧ್ಯಕ್ಷತೆಯ ಅವಕಾಶ ಸಿಕ್ಕಿದೆ. ಜಿ20 ಶೃಂಗ ಸಭೆ ದೆಹಲಿಯಲ್ಲಿ ಸೆಪ್ಟಂಬರ್ ತಿಂಗಳಲ್ಲಿ ನಡೆಯಲಿದೆ. ಅಲ್ಲಿಯವರೆಗೆ ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧೆಡೆ ವಿವಿಧ ಜಿ20 ಸಭೆಗಳು ನಡೆಯುತ್ತಿರುತ್ತವೆ.

ಇನ್ನಷ್ಟು ವ್ಯವಹಾರಗಳ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Wed, 22 February 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​