Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ

G20 Culture Working Group Meeting in Hampi: ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಜಿ20 ಶೃಂಗಸಭೆ ನಿಮಿತ್ತ ಹಂಪಿಯಲ್ಲಿ 3ನೇ ಕಲ್ಚರ್ ವರ್ಕಿಂಗ್ ಗ್ರೂಪ್ ಸಭೆ ಜುಲೈ 9ರಿಂದ 12ರವರೆಗೂ ನಡೆಯಲಿದೆ. 29 ದೇಶಗಳಿಂದ 50 ಪ್ರತಿನಿಧಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ
ಹಂಪಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 09, 2023 | 5:43 PM

ಬಳ್ಳಾರಿ: ಐತಿಹಾಸಿಕ ಹಂಪಿಯಲ್ಲಿ ಜಿ20 ಶೃಂಗಸಭೆ (G20 Summit) ನಿಮಿತ್ತ ಇಂದಿನಿಂದ ಜುಲೈ 12ರವರೆಗೆ ಸಂಸ್ಕೃತಿ ಕಾರ್ಯಕಾರಿ ಗುಂಪಿನ (Culture Working Group) 3ನೇ ಸಭೆ ನಡೆಯಲಿದೆ. ಜಿ20 ಗುಂಪಿನ ಸದಸ್ಯ ದೇಶಗಳು, ಅತಿಥಿ ದೇಶಗಳು ಹಾಗೂ ಅಂತಾರಾಷ್ಟ್ರೀಯ ಸಂಘಟನೆಗಳ ಪ್ರತಿನಿಧಿಗಳು ಮತ್ತು ನಿಯೋಗಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಒಟ್ಟು 29 ದೇಶಗಳಿಂದ 50 ಪ್ರತಿನಿಧಿಗಳು ಇದರಲ್ಲಿ ಇರಲಿದ್ದಾರೆ. ಇಂದು ನಡೆಯುವ ಉದ್ಘಾಟನೆಯಲ್ಲಿ ಕೇಂದ್ರ ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ, ಸಂಸ್ಕೃತಿ ಖಾತೆಯ ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಮತ್ತು ಮೀನಾಕ್ಷಿ ಲೇಖಿ ಅವರು ಅತಿಥಿಗಳಾಗಿ ಭಾಗವಹಿಸಿದ್ದಾರೆ.

ಸಂಸ್ಕೃತಿ ಕಾರ್ಯಕಾರಿ ಗುಂಪಿನ ಹಿಂದಿನ ಎರಡು ಸಭೆಗಳು ಕಜುರಾವೋ ಮತ್ತು ಭುವನೇಶ್ವರದಲ್ಲಿ ನಡೆದಿದ್ದವು. ವಾರಾಣಸಿಯಲ್ಲಿ ನಾಲ್ಕನೇ ಸಿಡಬ್ಲ್ಯುಜಿ ಸಭೆ ನಡೆಯುತ್ತದೆ. ಸೆಪ್ಟಂಬರ್​ನಲ್ಲಿ ಜಿ20 ಶೃಂಗಸಭೆ ನಡೆಯುತ್ತಿದ್ದು ಅದರ ನಿಮಿತ್ತ ಕಳೆದ ಕೆಲ ತಿಂಗಳಿಂದ ದೇಶದ ವಿವಿಧ ಭಾಗಗಳಲ್ಲಿ ವಿವಿಧ ಪೂರಕ ಸಭೆಗಳು ನಡೆಯುತ್ತಾ ಬಂದಿವೆ. ಬೆಂಗಳೂರಿನಲ್ಲೂ ಸಭೆಗಳು ನಡೆದಿದ್ದವು.

ಇದನ್ನೂ ಓದಿPMLA: ಜಿಎಸ್​ಟಿ ವಂಚನೆ ಎಸಗುವವರಿಗೆ ಕಾದಿದೆ ಇಡಿ ಕುಣಿಕೆ; ಪಿಎಂಎಲ್​ಎ ವ್ಯಾಪ್ತಿಗೆ ಜಿಎಸ್​ಟಿಎನ್ ಸೇರಿಸಿದ ಸರ್ಕಾರ

ಕಲ್ಚರ್ ವರ್ಕಿಂಗ್ ಗ್ರೂಪ್​ಗೆ ನಾಲ್ಕು ಆದ್ಯತೆಗಳನ್ನು ಕೊಡಲಾಗಿದೆ. ಸಾಂಸ್ಕೃತಿಕ ಆಸ್ತಿಗಳ ರಕ್ಷಣೆ, ಪರಂಪರೆ ಮುಂದುವರಿಕೆ, ಸಾಂಸ್ಕೃತಿಕ ಮತ್ತು ಸೃಜನಶೀಲ ಉದ್ಯಮಗಳ ಬೆಳವಣಿಗೆ, ಸಂಸ್ಕೃತಿಯ ರಕ್ಷಣೆ ಮತ್ತು ಪ್ರಚಾರಕ್ಕೆ ತಂತ್ರಜ್ಞಾನದ ಬಳಕೆ ಈ ನಾಲ್ಕು ವಿಚಾರಗಳನ್ನು ಆದ್ಯತೆಯಾಗಿ ಪರಿಗಣಿಸುವಂತೆ ಜಿ20ಯ ಸಂಸ್ಕೃತಿ ಕಾರ್ಯಕಾರಿ ಗುಂಪಿಗೆ ತಿಳಿಸಲಾಗಿದೆ.

ಜಿ20 ಸಿಡಬ್ಲ್ಯುಜಿ ಸಭೆಯ ಪ್ರತಿನಿಧಿಗಳಿಗೆ ಹಂಪಿ ಪರಿಚಯ

ಭಾರತದ ಶ್ರೇಷ್ಠ ಸಾಮ್ರಾಜ್ಯಗಳಲ್ಲಿ ಒಂದೆಂದು ಪರಿಗಣಿಸಲಾಗುವ ವಿಜಯನಗರ ಅರಸರಿಗೆ ರಾಜಧಾನಿಯಾದ ಹಂಪಿಯನ್ನು ಯುನೆಸ್ಕೋ ವಿಶ್ವ ಪಾರಂಪರಿಕ ಸ್ಥಳ ಎಂದು ಘೋಷಿಸಿದೆ. ಹಂಪಿಯ ಅಂದಿನ ವೈಭವ ಸ್ಥಿತಿ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ವಿವಿಧ ದೇಶಗಳ ಪ್ರತಿನಿಧಿಗಳಿಗೆ ತಿಳಿಸಲಾಗುತ್ತದೆ. ಹಂಪಿಯಲ್ಲಿರುವ ಡಿಜಿಟಲ್ ಮ್ಯೂಸಿಯಂಗೆ ಭೇಟಿ, ಗಂಜೀಫ ಕಲೆ, ಬಿದರಿ ಕಲೆ, ಕಿನ್ಹಾಳ ಕರಕುಶಲ ತಜ್ಞರ ಜೊತೆ ಈ ಪ್ರತಿನಿಧಿಗಳು ಸಂವಾದಿಸಲಿದ್ದಾರೆ. ಹಾಗೆಯೇ, ಲಂಬಾಣಿ ಸಮುದಾಯದ ಕುಶಲಕರ್ಮಿಗಳ ಭೇಟಿಯೂ ಆಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ