AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ ಯೋಜನೆ; ಅದಾನಿ ಗ್ರೂಪ್ ಎಲ್1 ಆಗಿ ಆಯ್ಕೆ; ಕುತೂಹಲ ಮೂಡಿಸಿದ ಅದಾನಿ-ಸಿಎಂ ಭೇಟಿ

Gautam Adani meets CM DK Shivakumar: ಬೆಂಗಳೂರಿನಲ್ಲಿ ಅತಿಹೆಚ್ಚು ಟ್ರಾಫಿಕ್ ಕಿರಿಕಿರಿ ಇರುವ ಪ್ರದೇಶದಲ್ಲಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್​ವರೆಗೆ ಟನಲ್ ರೋಡ್ ನಿರ್ಮಿಸುವ ಯೋಜನೆಗೆ ಅದಾನಿ ಗ್ರೂಪ್ ಅತ್ಯಂತ ಕಡಿಮೆ ಮೊತ್ತದ ಬಿಡ್ಡಿಂಗ್ ಸಲ್ಲಿಸಿದೆ. ಅದಾನಿ ಎಂಟರ್​ಪ್ರೈಸಸ್ ಅನ್ನು ಎಲ್1 ಎಂದು ಘೋಷಿಸಲಾಗಿದೆ. ಆದರೆ, ಗುತ್ತಿಗೆಯನ್ನು ಇನ್ನೂ ನೀಡಲಾಗಿಲ್ಲ. ಇದೇ ವೇಳೆ, ಗೌತಮ್ ಅದಾನಿ ಅವರು ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ ಯೋಜನೆ; ಅದಾನಿ ಗ್ರೂಪ್ ಎಲ್1 ಆಗಿ ಆಯ್ಕೆ; ಕುತೂಹಲ ಮೂಡಿಸಿದ ಅದಾನಿ-ಸಿಎಂ ಭೇಟಿ
ಗೌತಮ್ ಅದಾನಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 23, 2026 | 12:41 PM

Share

ಬೆಂಗಳೂರು, ಆಗಸ್ಟ್ 23: ಸಂಚಾರ ದಟ್ಟಣೆ ನಿಯಂತ್ರಿಸಲು ಉದ್ದೇಶಿಸಲಾಗಿರುವ 16.75 ಕಿ.ಮೀ. ಉದ್ದದ ಉತ್ತರ-ದಕ್ಷಿಣ (ಹೆಬ್ಬಾಳದಿಂದ ಸಿಲ್ಕ್ ಬೋರ್ಡ್) ಸುರಂಗ ರಸ್ತೆ ಯೋಜನೆಗೆ ಅದಾನಿ ಎಂಟರ್‌ಪ್ರೈಸಸ್ (Adani Enterprises) ಅತ್ಯಂತ ಕಡಿಮೆ ಮೊತ್ತದ ಟೆಂಡರ್ (L1 Bidder) ಸಲ್ಲಿಸಿದ ಸಂಸ್ಥೆಯಾಗಿ ಹೊರಹೊಮ್ಮಿದೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಆದರೆ, ಗುತ್ತಿಗೆಯನ್ನು ಇನ್ನೂ ಹಂಚಲಾಗಿಲ್ಲ. ಇದೇ ವೇಳೆ, ಅದಾನಿ ಗ್ರೂಪ್ ಮುಖ್ಯಸ್ಥ ಗೌತಮ್ ಅದಾನಿ ಅವರು ಸಿಎಂ ಡಿಕೆಶಿ (DK Shivakumar) ಅವರನ್ನು ಭೇಟಿ ಮಾಡಿದ್ದಾರೆ.

ಈ ಟನಲ್ ಪ್ರಾಜೆಕ್ಟ್ ಕಾರ್ಯಗತಗೊಳಿಸಲೆಂದು ರಚಿಸಲಾಗಿರುವ ‘ಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್’ (B-SMILE) ಹಾಗೂ ರಾಜ್ಯ ಸರ್ಕಾರ ಈ ಯೋಜನೆಗೆ ಅಂದಾಜಿಸಿದ್ದ ಯೋಜನಾ ವೆಚ್ಚ ₹17,698 ಕೋಟಿ. ಅದಾನಿ ಗ್ರೂಪ್ ಸಲ್ಲಿಸಿರುವ ಬಿಡ್ ಮೊತ್ತ ₹22,267 ಕೋಟಿ. ಇದು ಸರ್ಕಾರದ ಅಂದಾಜಿಗಿಂತ ಸುಮಾರು ₹4,569 ಕೋಟಿ (ಶೇ. 24 ರಿಂದ 28 ರಷ್ಟು) ಹೆಚ್ಚಾಗಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ವಾರ್ಷಿಕ 3,075 ರೂ ಪಾಸ್; ಇದರ ಬಳಕೆ ಹೇಗೆ, ಬಳಕೆಯಾಗದ ಟೋಲ್​ಗಳು ಯಾವುವು?

ಟೆಂಡರ್ ಪ್ರಕ್ರಿಯೆ ಹಾಗೂ ಹಂತಗಳು

ಈ ಸುರಂಗ ರಸ್ತೆ ಯೋಜನೆಯನ್ನು BOT (Build-Operate-Transfer) ಮಾದರಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಶೇ. 40 ರಷ್ಟು ಮೊತ್ತವನ್ನು ಸರ್ಕಾರ (Viability Gap Funding) ಹಾಗೂ ಉಳಿದ ಶೇ. 60 ರಷ್ಟು ಮೊತ್ತವನ್ನು ಖಾಸಗಿ ಸಂಸ್ಥೆ ಭರಿಸಲಿದೆ. ತಾಂತ್ರಿಕ ಮೌಲ್ಯಮಾಪನ ಹಂತದಲ್ಲಿ ಅದಾನಿ ಗ್ರೂಪ್ ಹಾಗೂ ಹೈದರಾಬಾದ್ ಮೂಲದ ವಿಶ್ವ ಸಮುದ್ರ ಇಂಜಿನಿಯರಿಂಗ್ ಲಿಮಿಟೆಡ್ ಮಾತ್ರ ಅರ್ಹತೆ ಪಡೆದಿದ್ದವು. ಅಂತಿಮವಾಗಿ ಅದಾನಿ ಸಂಸ್ಥೆ L1 ಆಗಿ ಹೊರಹೊಮ್ಮಿದೆ.

ಟೆಂಡರ್ ಮೊತ್ತವು ಸರ್ಕಾರದ ಅಂದಾಜಿಗಿಂತ ಗಮನಾರ್ಹವಾಗಿ ಹೆಚ್ಚಿರುವುದರಿಂದ, ಈ ಬಿಡ್ ಅನ್ನು ಅಂಗೀಕರಿಸಬೇಕೇ, ಮಾತುಕತೆ ನಡೆಸಿ ಮೊತ್ತ ಕಡಿಮೆ ಮಾಡಬೇಕೇ ಅಥವಾ ಮರು-ಟೆಂಡರ್ ಕರೆಯಬೇಕೇ ಎಂಬುದರ ಕುರಿತು ರಾಜ್ಯ ಸಚಿವ ಸಂಪುಟದ (Cabinet) ಅಂತಿಮ ನಿರ್ಧಾರ ಬಾಕಿ ಇದೆ.

ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಗೌತಮ್ ಅದಾನಿ

ಅದಾನಿ ಎಂಟರ್​​ಪ್ರೈಸಸ್ ಛೇರ್ಮನ್ ಗೌತಮ್ ಅದಾನಿ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹೋಗಿದ್ದಾರೆ. ಕನಕಪುರದಲ್ಲಿರುವ ಶ್ರೀ ರವಿಶಂಕರ್ ಗುರೂಜಿ ಅವರ ಆಶ್ರಮಕ್ಕೆ ಆಗಮಿಸಿದ್ದ ಅದಾನಿ, ವಾಪಸ್ ಹೋಗುವಾಗ ಸಿಎಂ ನಿವಾಸಕ್ಕೆ ತೆರಳಿ ಡಿಕೆಶಿ ಅವರನ್ನು ಭೇಟಿ ಮಾಡಿದರೆನ್ನಲಾಗಿದೆ. ಆದರೆ, ಏನು ಮಾತುಕತೆ ನಡೆಯಿತು ಎಂಬುದು ಗೊತ್ತಾಗಿಲ್ಲ. ಸಿಎಂ ಮತ್ತು ಅದಾನಿ ವತಿಯಿಂದ ಅಧಿಕೃತ ಹೇಳಿಕೆಗಳು ಬಂದಿಲ್ಲ.

ಇದನ್ನೂ ಓದಿ: ಹಬ್ಬದ ಸೀಸನ್​ನಲ್ಲಿ ಸಕ್ಕರೆ ಲಭ್ಯತೆ ಖಚಿತಪಡಿಸಲು ಮತ್ತು ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರ ಕೈಗೊಂಡ ವಿವಿಧ ಕ್ರಮಗಳೇನು?

ಇದೇ ವೇಳೆ, ಅಂತಿಮ ಗುತ್ತಿಗೆ ಅನುಮೋದನೆಗೆ ಮುನ್ನವೇ ಅದಾನಿ ಎಂಟರ್‌ಪ್ರೈಸಸ್ ನಿಯಮಾವಳಿಗಳ ಪ್ರಕಾರ ಮಾರ್ಗದುದ್ದಕ್ಕೂ ಮಣ್ಣಿನ ಪರೀಕ್ಷೆ (Geotechnical Investigation / Soil Testing) ಮತ್ತು ಪ್ರಾಥಮಿಕ ಸರ್ವೇ ಕಾರ್ಯಗಳನ್ನು ಆರಂಭಿಸಿದೆ.

ಅದಾನಿ ಗ್ರೂಪ್ ದೇಶದ ಹಲವೆಡೆ ವಿವಿಧ ಏರ್​ಪೋರ್ಟ್, ಸೀಪೋರ್ಟ್​ಗಳನ್ನು ನಿರ್ವಹಿಸುತ್ತಿದೆ. ಮಂಗಳೂರು ಏರ್​ಪೋರ್ಟ್ ಕೂಡ ಅದಾನಿ ನಿರ್ವಹಣೆಯಲ್ಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Sun, 23 August 26

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ