AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gautam Adani: ಷೇರು ಮೌಲ್ಯದ ಮಹಾ ಕುಸಿತದ ಬೆನ್ನಲ್ಲೇ ಕೇಂದ್ರ ಸಚಿವ ಆರ್​ಕೆ ಸಿಂಗ್ ಭೇಟಿಯಾದ ಗೌತಮ್ ಅದಾನಿ

ಹಿಂಡನ್​ಬರ್ಗ್ ರಿಸರ್ಚ್​ ಆರೋಪದಿಂದಾಗಿ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗುತ್ತಿರುವ ಮಧ್ಯೆಯೇ ಕಂಪನಿಯ ಮಾಲೀಕ ಗೌತಮ್ ಅದಾನಿ ಕೇಂದ್ರ ವಿದ್ಯುತ್ ಸಚಿವ ಆರ್​ಕೆ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

Gautam Adani: ಷೇರು ಮೌಲ್ಯದ ಮಹಾ ಕುಸಿತದ ಬೆನ್ನಲ್ಲೇ ಕೇಂದ್ರ ಸಚಿವ ಆರ್​ಕೆ ಸಿಂಗ್ ಭೇಟಿಯಾದ ಗೌತಮ್ ಅದಾನಿ
ಗೌತಮ್ ಅದಾನಿImage Credit source: Reuters
ಗಣಪತಿ ಶರ್ಮಾ
|

Updated on:Jan 27, 2023 | 2:50 PM

Share

ನವದೆಹಲಿ: ಹಿಂಡನ್​ಬರ್ಗ್ ರಿಸರ್ಚ್​ (Hindenburg Research) ಆರೋಪದಿಂದಾಗಿ ಅದಾನಿ ಸಮೂಹದ (Adani Group) ಕಂಪನಿಗಳ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗುತ್ತಿರುವ ಮಧ್ಯೆಯೇ ಕಂಪನಿಯ ಮಾಲೀಕ ಗೌತಮ್ ಅದಾನಿ (Gautam Adani) ಕೇಂದ್ರ ವಿದ್ಯುತ್ ಸಚಿವ ಆರ್​ಕೆ ಸಿಂಗ್ (RK Singh) ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶುಕ್ರವಾರ ಮಧ್ಯಾಹ್ನ ಇಬ್ಬರೂ ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ರಾಯಿಟರ್ಸ್’ ಸುದ್ದಿಸಂಸ್ಥೆ ವರದಿ ಮಾಡಿದೆ. ಯಾವ ವಿಚಾರವಾಗಿ ಮಾತುಕತೆ ನಡೆದಿದೆ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಈ ಮಧ್ಯೆ, ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್​ಬರ್ಗ್ ರಿಸರ್ಚ್ ಮಾಡಿರುವ ಆರೋಪಗಳ ಬಗ್ಗೆ ಮಾರುಕಟ್ಟೆ ನಿಯಂತ್ರಕ ಸೆಬಿಯಿಂದ ತನಿಖೆಯಾಗಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. ಲೆಕ್ಕಪತ್ರ ವಂಚನೆ ಮತ್ತು ಷೇರು ಬೆಲೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಅದಾನಿ ಸಮೂಹದ ವಿರುದ್ಧ ಹಿಂಡನ್​ಬರ್ಗ್ ರಿಸರ್ಚ್ ಆರೋಪ ಮಾಡಿತ್ತು.

ಈ ಮಧ್ಯೆ, ಷೇರು ಮಾರುಕಟ್ಟೆಯಲ್ಲಿ ಅದಾನಿ ಸಮೂಹದ ಒಡೆತನದಲ್ಲಿರುವ ಕಂಪನಿಗಳ ಷೇರು ಮೌಲ್ಯದಲ್ಲಿ ಕುಸಿತ ಮುಂದುವರಿದಿದೆ. ಶುಕ್ರವಾರ ಬೆಳಗ್ಗಿನ ವಹಿವಾಟಿನಲ್ಲಿ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಶೇ 20ರಷ್ಟು ಕುಸಿತವಾಗಿದೆ. ಅದಾನಿ ಟೋಟಲ್ ಗ್ಯಾಸ್ ಷೇರು ಮೌಲ್ಯ ಶೇ 19.65, ಅದಾನಿ ಟ್ರಾನ್ಸ್​​ಮಿಷನ್ ಷೇರು ಮೌಲ್ಯ ಶೇ 19, ಅದಾನಿ ಗ್ರೀನ್​ ಎನರ್ಜಿ ಷೇರು ಮೌಲ್ಯ ಶೇ 15.50ರಷ್ಟು ಕುಸಿದಿದೆ.

ಇದನ್ನೂ ಓದಿ: Adani Stocks: ಹಿಂಡನ್​ಬರ್ಗ್ ಹೊಡೆತದಿಂದ ಇನ್ನೂ ಚೇತರಿಸದ ಅದಾನಿ ಸಮೂಹ; ಷೇರು ಮೌಲ್ಯ ಶೇ 20 ಕುಸಿತ

ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್ ಷೇರು ಮೌಲ್ಯ ಶೇ 5.31, ಅದಾನಿ ವಿಲ್ಮರ್ ಷೇರು ಮೌಲ್ಯ ಶೇ 5 ಹಾಗೂ ಅದಾನಿ ಪವರ್ ಷೇರು ಮೌಲ್ಯ ಶೇ 4.99ರಷ್ಟು ಕುಸಿದಿದೆ. 2020ರ ಮಾರ್ಚ್​ ನಂತರ ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಕಂಡುಬಂದಿರುವ ಅತಿದೊಡ್ಡ ಪ್ರಮಾಣದ ಕುಸಿತ ಇದು ಎನ್ನಲಾಗಿದೆ.

ಅದಾನಿ ಎಂಟರ್​ಪ್ರೈಸಸ್ ಷೇರು ಮೌಲ್ಯ ಶೇ 6.19ರಷ್ಟು ಕುಸಿದಿದೆ. ಕಂಪನಿಯು ಎಫ್​​ಪಿಒ ಆರಂಭಿಸಿರುವ ಸಂದರ್ಭದಲ್ಲೇ ಷೇರು ಮೌಲ್ಯದಲ್ಲಿ ಭಾರೀ ಕುಸಿತವಾಗಿದ್ದು, ದೊಡ್ಡ ಮೊತ್ತದ ಬಂಡವಾಳ ಸಂಗ್ರಹಕ್ಕೆ ಮುಂದಾಗಿರುವ ಕಂಪನಿಗೆ ಹಿನ್ನಡೆ ಎಂದೇ ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:47 pm, Fri, 27 January 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ