AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ದರ ಕಡಿಮೆಗೊಂಡಿರುವುದು ತಾತ್ಕಾಲಿಕ ಹಿನ್ನಡೆ ಮಾತ್ರ: ನಿರ್ಮಲಾ ಸೀತಾರಾಮನ್

Nirmala Sitharaman speaks in Lok Sabha debate: 2024ರ ಜುಲೈನಿಂದ ಸೆಪ್ಟೆಂಬರ್​ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಬೆಳವಣಿಗೆ ನಿರೀಕ್ಷೆಗಿಂತ ಕಡಿಮೆ ಇದೆ. ಈ ಬೆಳವಣಿಗೆಯು ತಾತ್ಕಾಲಿಕ ಹಿನ್ನಡೆ ಮಾತ್ರವೇ ಆಗಿದ್ದು ಮುಂದಿನ ದಿನಗಳಲ್ಲಿ ಹೆಚ್ಚಿನ ಮಟ್ಟದ ಆರ್ಥಿಕ ಬೆಳವಣಿಗೆ ನಿರೀಕ್ಷಿಸಬಹುದು ಎಂದಿದ್ದಾರೆ ನಿರ್ಮಲಾ ಸೀತಾರಾಮನ್. ಹಣದುಬ್ಬರವೂ ಕೂಡ ಎನ್​ಡಿಎ ಆಡಳಿತದಲ್ಲಿ ಹೆಚ್ಚು ನಿಯಂತ್ರಣದಲ್ಲಿದೆ ಎಂದಿದ್ದಾರೆ.

ಎರಡನೇ ಕ್ವಾರ್ಟರ್​ನಲ್ಲಿ ಜಿಡಿಪಿ ದರ ಕಡಿಮೆಗೊಂಡಿರುವುದು ತಾತ್ಕಾಲಿಕ ಹಿನ್ನಡೆ ಮಾತ್ರ: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 17, 2024 | 8:43 PM

Share

ನವದೆಹಲಿ, ಡಿಸೆಂಬರ್ 17: ಜುಲೈನಿಂದ ಸೆಪ್ಟೆಂಬರ್​ವರೆಗಿನ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 5.4ರಷ್ಟು ಬೆಳೆದಿರಿವುದು ನಿರೀಕ್ಷೆಗಿಂತ ಬಹಳ ಕಡಿಮೆ ಮಟ್ಟದ್ದಾಗಿದೆ. ಈ ಬಗ್ಗೆ ಲೋಕಸಭೆಯಲ್ಲಿ ನಡೆದ ಚರ್ಚೆಯ ವೇಳೆ ಪ್ರತಿಕ್ರಿಯಿಸಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎರಡನೇ ಕ್ವಾರ್ಟರ್​ನ ಜಿಡಿಪಿ ಬೆಳವಣಿಗೆ ಕುಂಠಿತಗೊಂಡಿರುವುದು ತಾತ್ಕಾಲಿಕ ಹಿನ್ನಡೆ ಮಾತ್ರ. ಮುಂಬರುವ ತ್ರೈಮಾಸಿಕ ಅವಧಿಗಳಲ್ಲಿ ಆರ್ಥಿಕತೆ ಉತ್ತಮ ರೀತಿಯಲ್ಲಿ ಬೆಳೆಯುತ್ತದೆ ಎಂದಿದ್ದಾರೆ.

ಭಾರತದ ಬೆಳವಣಿಗೆಯಲ್ಲಿ ಸ್ಥಿರತೆ ಇದೆ. ಕಳೆದ ಮೂರು ವರ್ಷದಲ್ಲಿ ಜಿಡಿಪಿ ದರ ಸರಾಸರಿಯಾಗಿ ಶೇ. 8.3ರಷ್ಟಿದೆ. ವಿಶ್ವದ ಪ್ರಮುಖ ಆರ್ಥಿಕತೆಗಳ ಪೈಕಿ ಭಾರತವೇ ಅತಿವೇಗ ಹೊಂದಿರುವುದು ಎಂದು ಹೇಳಿದ ಅವರು, ಎರಡನೇ ತ್ರೈಮಾಸಿಕ ಅವಧಿಯಲ್ಲಿನ ಆರ್ಥಿಕ ಬೆಳವಣಿಗೆ ದರ ತಾತ್ಕಾಲಿಕ ಹಿನ್ನಡೆ ಮಾತ್ರವೇ ಆಗಿದೆ ಎಂದು ವಾದಿಸಿದ್ದಾರೆ.

ಇದನ್ನೂ ಓದಿ: ಭಾರತದ ಮರುಬಳಕೆ ಉದ್ಯಮದ ಮಾರುಕಟ್ಟೆ ಮೌಲ್ಯ 2 ಟ್ರಿಲಿಯನ್ ಡಾಲರ್ ಆಗಬಲ್ಲುದು: ಅಮಿತಾಭ್ ಕಾಂತ್

ಸ್ಥೂಲ ದೃಷ್ಟಿಯಲ್ಲಿ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿನ ಪ್ರಗತಿ ಕುಂಠಿತಗೊಂಡಿಲ್ಲ. ಒಟ್ಟಾರೆ ಮ್ಯಾನುಫ್ಯಾಕ್ಚರಿಂಗ್ ಗುಂಪಿನಲ್ಲಿ ಅರ್ಧದಷ್ಟು ಸೆಕ್ಟರ್​ಗಳು ಇನ್ನೂ ಪ್ರಬಲವಾಗಿ ಮುಂದಡಿ ಇಡುತ್ತಿವೆ ಎಂದು ಕೇಂದ್ರ ಹಣಕಾಸು ಸಚಿವೆ ಅಭಿಪ್ರಾಯಪಟ್ಟಿದ್ದಾರೆ.

ಭಾರತದ ಆರ್ಥಿಕತೆ ಮೊದಲ ಕ್ವಾರ್ಟರ್​ನಲ್ಲಿ (2024ರ ಏಪ್ರಿಲ್​ನಿಂದ ಜೂನ್) ಶೇ. 6.7ರಷ್ಟು ಹೆಚ್ಚಿತ್ತು. ಎರಡನೇ ಕ್ವಾರ್ಟರ್ ಆದ ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇ. 5.4ರಷ್ಟು ಮಾತ್ರವೇ ಹೆಚ್ಚಾಗಿದೆ. ಕಳೆದ ಹಲವು ಕ್ವಾರ್ಟರ್​ಗಳಲ್ಲಿ ಇದು ಅತ್ಯಂತ ಕಡಿಮೆ ಜಿಡಿಪಿ ದರಗಳಲ್ಲಿ ಒಂದು. ಇದಾದ ಬಳಿಕ ಈ ಹಣಕಾಸು ವರ್ಷದ ಅಂದಾಜಿ ಜಿಡಿಪಿ ದರವನ್ನು ಎಲ್ಲಾ ಏಜೆನ್ಸಿಗಳು ಇಳಿಸಿವೆ.

ಇನ್ನು, ಹಣದುಬ್ಬರದ ಬಗ್ಗೆ ಮಾತನಾಡಿದ ನಿರ್ಮಲಾ ಸೀತಾರಾಮನ್, ಯುಪಿಎ ಅವಧಿಗಿಂತ ಎನ್​ಡಿಎ ಆಡಳಿತದ ಅವಧಿಯಲ್ಲಿ ಬೆಲೆ ಏರಿಕೆಯು ಹೆಚ್ಚು ನಿಯಂತ್ರಣದಲ್ಲಿದೆ ಎಂದಿದ್ದಾರೆ.

ಇದನ್ನೂ ಓದಿ: ನವೆಂಬರ್​ನಲ್ಲಿ ಭಾರತದಿಂದ 20,000 ಕೋಟಿ ರೂ ಮೌಲ್ಯದ ಸ್ಮಾರ್ಟ್​ಫೋನ್ ರಫ್ತು

2024-25ರ ಏಪ್ರಿಲ್​ನಿಂದ ಅಕ್ಟೋಬರ್​ವರೆಗಿನ ಅವಧಿಯಲ್ಲಿ ರೀಟೇಲ್ ಹಣದುಬ್ಬರವು ಶೇ. 4.8ರಷ್ಟಿದೆ ಎಂದಿರುವ ಅವರು, ಇದು ಕೋವಿಡ್ ನಂತರದ ಅವಧಿಯಲ್ಲಿ ಕಂಡ ಕನಿಷ್ಠ ಹಣದುಬ್ಬರ ದರ ಎನ್ನುವ ಸಂಗತಿಯನ್ನು ಎತ್ತಿತೋರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ