AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ಆರ್ಥಿಕ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆ; ಶೇ. 2.6 ಬೆಳವಣಿಗೆ ಎಂದು ವಿಶ್ವಸಂಸ್ಥೆ ಏಜೆನ್ಸಿಯ ಅಂದಾಜು

ಪಶ್ಚಿಮ ಏಷ್ಯಾ ಬಿಕ್ಕಟ್ಟು, ಬ್ರೆಂಟ್ ಕಚ್ಚಾ ತೈಲ ದರ ಏರಿಕೆ ಹಾಗೂ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ 2026ರಲ್ಲಿ ಜಾಗತಿಕ ಆರ್ಥಿಕ ಅಭಿವೃದ್ಧಿ ದರ ಶೇ. 2.6ಕ್ಕೆ ಕುಸಿಯಲಿದೆ ಎಂದು ವಿಶ್ವಸಂಸ್ಥೆ ವರದಿ (UNCTAD) ಅಂದಾಜಿಸಿದೆ. ಅಭಿವೃದ್ಧಿಶೀಲ ದೇಶಗಳಿಗೆ ಬಂಡವಾಳ ಕ್ರೋಢೀಕರಣ ಕಷ್ಟಗೊಳ್ಳಲಿರುವುದು ಜಾಗತಿಕ ಆರ್ಥಿಕ ಹಿನ್ನಡೆಗೆ ಇರುವ ಕಾರಣಗಳಲ್ಲಿ ಒಂದು.

ಜಾಗತಿಕ ಆರ್ಥಿಕ ಪ್ರಗತಿಯಲ್ಲಿ ಕುಂಠಿತ ಸಾಧ್ಯತೆ; ಶೇ. 2.6 ಬೆಳವಣಿಗೆ ಎಂದು ವಿಶ್ವಸಂಸ್ಥೆ ಏಜೆನ್ಸಿಯ ಅಂದಾಜು
ಜಾಗತಿಕ ಆರ್ಥಿಕತೆImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 09, 2026 | 7:39 PM

Share

ನವದೆಹಲಿ, ಅಕ್ಟೋಬರ್ 9: ಜಾಗತಿಕವಾಗಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಬಿಕ್ಕಟ್ಟುಗಳು, ಮಧ್ಯಪ್ರಾಚ್ಯದಲ್ಲಿನ ಅಸ್ಥಿರತೆ ಹಾಗೂ ತೈಲ ದರಗಳ ಏರಿಕೆಯ ಹಿನ್ನೆಲೆಯಲ್ಲಿ 2026 ರಲ್ಲಿ ಜಾಗತಿಕ ಆರ್ಥಿಕ ಪ್ರಗತಿಯ ವೇಗ (Global Economic Growth) ಮಂದಗೊಳ್ಳಬಹುದು ಎಂದು ವಿಶ್ವಸಂಸ್ಥೆಯ ವಾಣಿಜ್ಯ ಮತ್ತು ಅಭಿವೃದ್ಧಿ ಸಂಸ್ಥೆ (UNCTAD) ಅಂದಾಜಿಸಿದೆ. ಈ ಗ್ಲೋಬಲ್ ಏಜೆನ್ಸಿ ಪ್ರಕಾರ, ಜಾಗತಿಕವಾಗಿ ಈ ಕ್ಯಾಲೆಂಡರ್ ವರ್ಷ (ಜನವರಿಯಿಂದ ಡಿಸೆಂಬರ್) ಜಿಡಿಪಿ ಶೇ. 2.6 ರಷ್ಟು ಮಾತ್ರ ಬೆಳವಣಿಗೆ ಹೊಂದಬಹುದು.

ವಿಶ್ವ ಆರ್ಥಿಕತೆ ನಿಧಾನಗೊಳ್ಳಲು ಯುಎನ್​ಸಿಟಿಎಡಿ ಕೆಲ ಪ್ರಮುಖ ಕಾರಣಗಳನ್ನು ಪ್ರಸ್ತಾಪಿಸಿದೆ. ಮಧ್ಯಪ್ರಾಚ್ಯದಲ್ಲಿ ಎದುರಾಗಿರುವ ಯುದ್ಧ ಸನ್ನಿವೇಶದಿಂದಾಗಿ ಬ್ರೆಂಟ್ ಕಚ್ಚಾ ತೈಲ (Brent Crude) ಬೆಲೆಯು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂಧನ ಆಮದು ಮಾಡಿಕೊಳ್ಳುವ ದೇಶಗಳ ಮೇಲೆ ತೀವ್ರ ಹಣದುಬ್ಬರ ಹಾಗೂ ವೆಚ್ಚದ ಒತ್ತಡವನ್ನು ಹೇರಿರುವುದು ಒಂದು ಕಾರಣವಾಗಿದೆ.

ಜಾಗತಿಕ ಬಡ್ಡಿದರಗಳು ಉನ್ನತ ಮಟ್ಟದಲ್ಲೇ ಮುಂದುವರಿದಿರುವುದು ಮತ್ತು ಬಂಡವಾಳ ಹರಿವಿನ ಅಸ್ಥಿರತೆಯು ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೂಡಿಕೆ ನಿಧಿ ಕ್ರೋಡೀಕರಿಸುವುದನ್ನು ಕಷ್ಟಕರವಾಗಿಸಿದೆ. ಇದು ಆರ್ಥಿಕತೆಗೆ ಹಿನ್ನಡೆ ತರಬಹುದು ಎಂದು ಈ ಏಜೆನ್ಸಿ ಶಂಕಿಸಿದೆ.

ಇದನ್ನೂ ಓದಿ: ಭಾರತಕ್ಕೆ ಅಂಬಾನಿ ಬಾಸಾ? ಇಲಾನ್ ಪ್ರಶ್ನೆಗೆ, ಮತ್ತೊಬ್ಬರಿದ್ದಾರೆ ನೋಡಿ ಎಂದ ರಾಹುಲ್; ಕಾಂಗ್ರೆಸ್ ದಿಕ್ಕೆಟ್ಟಿದೆ ಎಂದ ಸಚಿವ ಸಿಂದಿಯಾ

ಜಾಗತಿಕವಾಗಿ ಮಂದಗತಿ ಕಂಡುಬಂದರೂ, 2026 ರ ಒಟ್ಟು ಜಾಗತಿಕ ಆರ್ಥಿಕ ಬೆಳವಣಿಗೆಯಲ್ಲಿ ಏಷ್ಯಾ ಖಂಡವೇ ಶೇ. 59 ರಷ್ಟು ಪ್ರಮುಖ ಕೊಡುಗೆ ನೀಡಲಿದೆ ಎಂದು ವರದಿ ಹೇಳಿದೆ.

ಭಾರತೀಯ ಆರ್ಥಿಕತೆಯ ಮಿಂಚು: ಪ್ರಮುಖ ಪ್ರಗತಿಪರ ದೇಶಗಳಲ್ಲಿ ಭಾರತವು ಶೇ. 7.3 ರಷ್ಟು ಆರ್ಥಿಕ ಪ್ರಗತಿ ಸಾಧಿಸುವ ಮೂಲಕ ಜಾಗತಿಕ ಮಟ್ಟದಲ್ಲೇ ಮುಂಚೂಣಿಯಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.

ಇತರೆ ಪ್ರಮುಖ ದೇಶಗಳಲ್ಲಿ ಇಂಡೋನೇಷ್ಯಾ ಶೇ. 5.2 ಹಾಗೂ ಚೀನಾ ಶೇ. 4.5 ರಷ್ಟು ಪ್ರಗತಿ ದಾಖಲಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: ಅಮೆರಿಕದ ಪರ್ಮ್ ನಿರ್ಬಂಧಕ್ಕೆ ಭಾರತ ತೀಕ್ಷ್ಣ ಪ್ರತಿಕ್ರಿಯೆ; ಈ ಕ್ರಮದಿಂದ ಎರಡೂ ದೇಶಕ್ಕೆ ಒಳಿತಲ್ಲ- ಕೇಂದ್ರ ವಿದೇಶಾಂಗ ಸಚಿವಾಲಯ ಹೇಳಿಕೆ

ಜಾಗತಿಕ ವ್ಯಾಪಾರ ಮೌಲ್ಯದ ಮೇಲಿನ ಪ್ರಭಾವ

ಸರಕುಗಳ ನಿಜವಾದ ಮಾರಾಟದ ಪ್ರಮಾಣಕ್ಕಿಂತಲೂ (Trade Volume) ಇಂಧನ ಬೆಲೆ ಏರಿಕೆಯಿಂದಾಗಿ ಆಮದು-ರಫ್ತುಗಳ ಸರಾಸರಿ ಮೌಲ್ಯದ ಸೂಚ್ಯಂಕ (Trade Value Index) ತೀವ್ರವಾಗಿ ಹೆಚ್ಚಾಗಿದೆ. ಇದು ನೈಜ ವಹಿವಾಟು ಹೆಚ್ಚಾಗುವುದಕ್ಕಿಂತಲೂ ಹಣದುಬ್ಬರದ ಕಾರಣದಿಂದಾಗಿ ವ್ಯಾಪಾರ ವೆಚ್ಚ ಹೆಚ್ಚಿರುವುದನ್ನು ಸೂಚಿಸುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ