ಮೋದಿ ನಾಯಕತ್ವದಲ್ಲಿ ಭಾರತದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ: ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ ಅನಿಸಿಕೆ

Jim Rogers on Indian economy: ಭಾರತಕ್ಕೆ ಆರ್ಥಿಕತೆ ಅರ್ಥ ಆಗುವುದಿಲ್ಲ. ಹೇಳುವುದೊಂದು ಮಾಡುವುದೊಂದು ಅಂತ ಅಂದುಕೊಂಡಿದ್ದೆ. ಆದರೆ, ಕಳೆದ 10 ವರ್ಷದ ಕೆಲಸಗಳನ್ನು ನೋಡಿದ ಮೇಲೆ ನನ್ನ ಅಭಿಪ್ರಾಯ ಬದಲಾಗಿದೆ. ಮೋದಿ ನಾಯಕತ್ವದಲ್ಲಿ ಭಾರತದಲ್ಲಿ ಕೆಲ ಒಳ್ಳೆಯ ಕೆಲಸಗಳಾಗಿವೆ ಎಂದು ಅಮೆರಿಕ ಮೂಲದ ಹೂಡಿಕೆದಾರ ಜಿಮ್ ರೋಜರ್ಸ್ ಹೇಳಿದ್ದಾರೆ.

ಮೋದಿ ನಾಯಕತ್ವದಲ್ಲಿ ಭಾರತದಲ್ಲಿ ಒಳ್ಳೆಯ ಕೆಲಸಗಳಾಗುತ್ತಿವೆ: ಜಾಗತಿಕ ಹೂಡಿಕೆದಾರ ಜಿಮ್ ರೋಜರ್ಸ್ ಅನಿಸಿಕೆ
ಜಿಮ್ ರೋಜರ್ಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 29, 2024 | 3:09 PM

ನವದೆಹಲಿ, ನವೆಂಬರ್ 29: ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಅಮೆರಿಕ ಮೂಲದ ಹೂಡಿಕೆದಾರ ಜಿಮ್ ರೋಜರ್ಸ್ ಆಶಾಭಾವನೆ ವ್ಯಕ್ತಪಡಿಸಿದ್ದಾರೆ. ಕಳೆದ ಒಂದು ವರ್ಷದಲ್ಲಿ ಭಾರತದ ಆರ್ಥಿಕತೆಗೆ ಪುಷ್ಟಿ ಕೊಡಲು ಸರ್ಕಾರ ಮಾಡುತ್ತಿರುವ ಪ್ರಯತ್ನಗಳನ್ನು ಅವರು ಶ್ಲಾಘಿಸಿದ್ದಾರೆ. ಐಎಎನ್​ಎಸ್​ಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದ ಈ ಜಾಗತಿಕ ಹೂಡಿಕೆದಾರ, ಮೋದಿ ನೇತೃತ್ವದಲ್ಲಿ ಕೆಲ ಉತ್ತಮ ಕೆಲಸಗಳಾಗಿವೆ ಎಂದಿದ್ದಾರೆ.

‘ಮೋದಿ ಅವರು ಸಾಕಷ್ಟು ಒಳ್ಳೆಯ ವಿಷಯಗಳನ್ನು ಮಾತನಾಡಿದ್ದಾರೆ. ಮೋದಿಯವರು ಕೆಲ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ’ ಎಂದು ಜಿಮ್ ರೋಜರ್ಸ್ ಅಭಿಪ್ರಾಯಪಟ್ಟಿದ್ದಾರೆ. ಕಳೆದ ಹತ್ತು ವರ್ಷದಲ್ಲಿ ಭಾರತದ ಆರ್ಥಿಕ ನೀತಿ, ಧೋರಣೆಗಳಲ್ಲಿ ಗಮನಾರ್ಹ ಬದಲಾವಣೆಗಳಾಗಿರುವುದನ್ನು ರೋಜರ್ಸ್ ಗುರುತಿಸಿದ್ದಾರೆ.

ಇದನ್ನೂ ಓದಿ: ವಾಟ್ಸ್​ಆ್ಯಪ್ ಕೂಡ ಹ್ಯಾಕ್ ಆಗುತ್ತೆ ಎಚ್ಚರ! ಆ್ಯಕ್ಸಿಸ್ ಬ್ಯಾಂಕ್ ಹೆಸರಲ್ಲಿ ಈ ರೀತಿಯ ಮೆಸೇಜ್ ಬಂದರೆ ಕ್ಲಿಕ್ ಮಾಡಬೇಡಿ

‘ಹಲವು ದಶಕಗಳ ಕಾಲ ಭಾರತದಲ್ಲಿರುವ ಸರ್ಕಾರಗಳು ಸಾಕಷ್ಟು ಒಳ್ಳೆಯ ವಿಚಾರಗಳನ್ನು ಮಾತನಾಡಿವೆ. ಆದರೆ, ಬಾಯಿ ಮಾತಿನಲ್ಲೇ ಅವು ಉಳಿದುಕೊಂಡು ಕಾರ್ಯರೂಪಕ್ಕೆ ಬರಲೇ ಇಲ್ಲ. ಭಾರತಕ್ಕೆ ಆರ್ಥಿಕತೆ ಏನು, ಏನಾಗಬೇಕು ಎಂಬುದು ಅರ್ಥ ಆಗಿದೆ ಎಂದು ಯಾವತ್ತೂ ನನಗೆ ಅನಿಸಿಲ್ಲ. ಈಗಿರುವ ಸರ್ಕಾರ ಬಂದ ಬಳಿಕ ಸಾಕಷ್ಟು ಬದಲಾವಣೆ ಆಗಿರುವುದು ಗಮನಕ್ಕೆ ಬಂದಿದೆ’ ಎಂದು ಜಿಮ್ ರೋಜರ್ಸ್ ಹೇಳಿದ್ದಾರೆ.

‘ಭಾರತಕ್ಕೆ ಆರ್ಥಿಕತೆ ಅರ್ಥ ಆಗುತ್ತದೆ, ಹೇಳಿದ್ದನ್ನು ಮಾಡಿ ತೋರಿಸುತ್ತದೆ ಎಂದು ನನ್ನ ಜೀವನದಲ್ಲಿ ಮೊದಲ ಬಾರಿಗೆ ಅನಿಸುತ್ತಿದೆ. ಆರ್ಥಿಕ ಸುಧಾರಣೆಗಳು ಮತ್ತು ಬೆಳವಣಿಗೆಯ ಕಾರ್ಯತಂತ್ರಗಳ ಬಗ್ಗೆ ಭಾರತಕ್ಕಿರುವ ಬದ್ಧತೆ ಬಗ್ಗೆ ಆತ್ಮವಿಶ್ವಾಸ ಮೂಡಿದೆ’ ಎಂದು ಅಮೆರಿಕ ಮೂಲದ ಈ ಹೂಡಿಕೆದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಯುವಜನರ ನಿರುದ್ಯೋಗ ದರ ಜಾಗತಿಕ ಸರಾಸರಿಗಿಂತಲೂ ಕಡಿಮೆ: ಸರ್ಕಾರದಿಂದ ಮಾಹಿತಿ

ಕಳೆದ 10 ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಗೆ ಪೂರಕವಾಗಿ ಹಲವು ಸುಧಾರಣಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ. ಜಿಎಸ್​ಟಿ, ದಿವಾಳಿ ತಡೆ ಸಂಹಿತೆ (ಐಬಿಸಿ) ಕೆಲ ಉದಾಹರಣೆಗಳು. ಹಾಗೆಯೇ, ಪಿಎಲ್​ಐ ಸ್ಕೀಮ್, ಸ್ಟಾರ್ಟಪ್ ಫಂಡಿಂಗ್, ವಿವಿಧ ಸಾಲ ಯೋಜನೆಗಳು ಹೀಗೆ ನಾನಾ ಯೋಜನೆಗಳನ್ನು ಆರ್ಥಿಕತೆಯ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರ ಜಾರಿಗೆ ತಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಆಂತರಿಕ ವಿಷಯಗಳ ಬಗ್ಗೆ ಮಾತಾಡಬಾರದೆಂದು ಸಮಿತಿ ಹೇಳಿದೆ: ಬಸನಗೌಡ ಯತ್ನಾಳ್
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!
ಶಿವಕುಮಾರ್ ಧೋರಣೆ ಬೇರೆ ಪಕ್ಷಗಳ ನಾಯಕರಿಗೆ ಮಾದರಿಯಾಗಬಹುದು!