Global Recession: ಆರ್ಥಿಕ ಹಿಂಜರಿತದಿಂದ ಭಾರತಕ್ಕೆ ಹೆಚ್ಚಿನ ತೊಂದರೆಯಾಗದೆಂದ ಎಸ್​ಬಿಐ ಅಧ್ಯಕ್ಷ, ಕಾರಣವೇನು?

ಅಂತರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವಾರ್ಷಿಕ ಮಹಾಸಭೆಯ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ದಿನೇಶ್ ಖರಾ, ಶೇಕಡಾ 6.8ರ ಆರ್ಥಿಕ ಬೆಳವಣಿಗೆ ದರದ ಮುನ್ಸೂಚನೆಯೊಂದಿಗೆ ಭಾರತದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

Global Recession: ಆರ್ಥಿಕ ಹಿಂಜರಿತದಿಂದ ಭಾರತಕ್ಕೆ ಹೆಚ್ಚಿನ ತೊಂದರೆಯಾಗದೆಂದ ಎಸ್​ಬಿಐ ಅಧ್ಯಕ್ಷ, ಕಾರಣವೇನು?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧ್ಯಕ್ಷ ದಿನೇಶ್ ಖರಾImage Credit source: LiveMint
Follow us
TV9 Web
| Updated By: Ganapathi Sharma

Updated on:Oct 15, 2022 | 1:22 PM

ನವದೆಹಲಿ: ಜಾಗತಿಕ ಆರ್ಥಿಕ ಹಿಂಜರಿತದಿಂದ (Global recession) ಭಾರತಕ್ಕೆ ಹೆಚ್ಚಿನ ತೊಂದರೆಯಾಗುವ ಸಾಧ್ಯತೆಯಿಲ್ಲ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧ್ಯಕ್ಷ ದಿನೇಶ್ ಖರಾ (Dinesh Khara) ಅಭಿಪ್ರಾಯಪಟ್ಟಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆ ಮನ್ಸೂಚಿ ದರ ಶೇಕಡಾ 6.8ರಷ್ಟಿದ್ದು, ಇತರ ದೇಶಗಳಿಗೆ ಹೋಲಿಸಿದರೆ ಆರ್ಥಿಕ ಹಿಂಜರಿತ ಹೆಚ್ಚಿನ ಪರಿಣಾಮ ಬೀರದು ಎಂದು ಅವರು ಹೇಳಿದ್ದಾರೆ.

ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ವಾರ್ಷಿಕ ಮಹಾಸಭೆಯ ಹಿನ್ನೆಲೆಯಲ್ಲಿ ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಶೇಕಡಾ 6.8ರ ಆರ್ಥಿಕ ಬೆಳವಣಿಗೆ ದರದ ಮುನ್ಸೂಚನೆಯೊಂದಿಗೆ ದೇಶದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ನಮ್ಮದು ಮುಖ್ಯವಾಗಿ ಬೇಡಿಕೆ ಆಧಾರಿತ ಆರ್ಥಿಕತೆಯಾಗಿದ್ದು ಜಿಡಿಪಿಯೂ ದೇಶದ ಆರ್ಥಿಕತೆಗೆ ಪೂರಕವಾಗಿದೆ. ಈ ಅಂಶದ ಆಧಾರದಲ್ಲಿ ನೋಡಿದರೆ ಜಾಗತಿಕ ಆರ್ಥಿಕ ಹಿಂಜರಿತವು ಭಾರತದ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎಂದು ಅನಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ
Image
Inflation: ಬೆಲೆ ನಿಯಂತ್ರಣಕ್ಕೆ ಲಗಾಮ್ ಹಾಕಲು ಆರ್​ಬಿಐ ವಿಫಲ; ಹಣದುಬ್ಬರ 7.41ಕ್ಕೆ ಏರಿಕೆ
Image
ಎಸ್​ಬಿಐ ಸೇರಿದಂತೆ 9 ಮಿಲಿಯನ್ ಕಾರ್ಡುದಾರರ ಹಣಕಾಸು ಮಾಹಿತಿ ಸೋರಿಕೆ
Image
GDP Growth: ಭಾರತದ ಆರ್ಥಿಕ ಬೆಳವಣಿಗೆಯ ಮುನ್ಸೂಚನೆಯು ಶೇಕಡಾ 6.8 ಕ್ಕೆ ಇರಲಿದೆ: ಐಎಂಎಫ್ ವರದಿ

ಸದ್ಯ ದೇಶದಲ್ಲಿ ಏರಿಕೆಯ ಹಾದಿಯಲ್ಲಿರುವ ಹಣದುಬ್ಬರವು ಬೇಡಿಕೆಯಿಂದ ಸೃಷ್ಟಿಯಾಗಿರುವುದಲ್ಲ. ಬದಲಿಗೆ ಪೂರೈಕೆಯಿಂದ ಉದ್ಭವಿಸಿರುವುದು ಎಂದು ಅವರು ತಿಳಿಸಿದ್ದಾರೆ. ಪೂರೈಕೆ ಸರಪಳಿಗೆ ಅಡ್ಡಿಯಾಗಿರುವುದು ಜಾಗತಿಕ ಮಟ್ಟದಲ್ಲಿ ತಲೆನೋವಿಗೆ ಕಾರಣವಾಗಿದೆ. ಇದು ಕಚ್ಚಾ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರಿದೆ. ವಿಶ್ವದಾದ್ಯಂತ ಎಲ್ಲ ಆರ್ಥಿಕತೆಗಳೂ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಸಮಸ್ಯೆ ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಭಾರತದ ಆರ್ಥಿಕ ಬೆಳವಣಿಗೆ ಆಶಾದಾಯಕವಾಗಿದೆ ಎಂದು ದಿನೇಶ್ ಹೇಳಿದ್ದಾರೆ.

23ನೇ ಹಣಕಾಸು ವರ್ಷದಲ್ಲಿ ಶೇಕಡ 7ರ ಆರ್ಥಿಕ ಬೆಳವಣಿಗೆಯೊಂದಿಗೆ ಭಾರತವು ಉತ್ತಮ ಬೆಳವಣಿಗೆ ಸಾಧಿಸಲಿದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಅಕ್ಟೋಬರ್ 9ರಂದು ಹೇಳಿತ್ತು. ಜಾಗತಿಕ ಆರ್ಥಿಕ ಹಿಂಜರಿತದ ಹೊರತಾಗಿಯೂ ಭಾರತ ಉತ್ತಮ ಸಾಧನೆ ಮಾಡಲಿದೆ ಎಂದು ಮಂಡಳಿ ಹೇಳಿತ್ತು. ಆದರೆ, 2022-23ರಲ್ಲಿ ಭಾರತ ಶೇಕಡ 6.5ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಎಂದು ವಿಶ್ವಬ್ಯಾಂಕ್ ಹೇಳಿತ್ತು.

SBI Home Loans: ನಿಮ್ಮ CIBIL ಸ್ಕೋರ್ ಆಧರಿಸಿ ಈ ಹಬ್ಬದ ಋತುವಿನಲ್ಲಿ SBI ಅಗ್ಗದ ಗೃಹ ಸಾಲ ನೀಡುತ್ತಿದೆ

ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡಾ 7.2ರ ಆರ್ಥಿಕ ಬೆಳವಣಿಗೆ ದರದ ಬಗ್ಗೆ ಮುನ್ಸೂಚನೆ ನೀಡಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್​ಬಿಐ) ಇತ್ತೀಚೆಗೆ ಅದನ್ನು ಪರಿಷ್ಕರಿಸಿತ್ತು. ದೇಶವು ಶೇಕಡಾ 7ರ ಆರ್ಥಿಕ ಬೆಳವಣಿಗೆ ಸಾಧಿಸಲಿದೆ ಎಂದು ಹೇಳಿತ್ತು.

ಏರುತ್ತಿರುವ ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ಸಲುವಾಗಿ ಆರ್​ಬಿಐ ಕಳೆದ ಹಣಕಾಸು ನೀತಿಯಲ್ಲಿ ರೆಪೊ ದರವನ್ನು ಶೇಕಡಾ 5.90ಕ್ಕೆ ಹೆಚ್ಚಿಸಿತ್ತು. ಮುಂದಿನ ಹಣಕಾಸು ನೀತಿಯಲ್ಲಿ ಮತ್ತೆ ರೆಪೊ ದರ ಹೆಚ್ಚಿಸುವ ಸಾಧ್ಯತೆಗಳ ಬಗ್ಗೆ ಮಾರುಕಟ್ಟೆ ವಲಯದಲ್ಲಿ ಚರ್ಚೆಯಾಗುತ್ತಿದೆ. ಈ ಮಧ್ಯೆ, ರೆಪೊ ದರ ಪರಿಷ್ಕರಣೆ ವಿಚಾರದಲ್ಲಿ ಆರ್​ಬಿಐ ಹಣಕಾಸು ನೀತಿ ಸಮಿತಿ (ಎಂಪಿಸಿ) ಸದಸ್ಯರಲ್ಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದೂ ವರದಿಯಾಗಿದೆ.

Published On - 1:13 pm, Sat, 15 October 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ