AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ, ಬೆಳ್ಳಿ ದರ ಇನ್ನಷ್ಟು ಏರಿಕೆಯಾಗೋದು ಫಿಕ್ಸ್: ಆಮದು ಸುಂಕ ಭರ್ಜರಿ ಹೆಚ್ಚಿಸಿದ ಕೇಂದ್ರ ಸರ್ಕಾರ

ದೇಶದ ಆರ್ಥಿಕ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ 15 ಕ್ಕೆ ಹೆಚ್ಚಿಸಿದೆ. ಪ್ರಧಾನಿ ಮೋದಿ ಅವರ ಮಿತವ್ಯಯದ ಮನವಿಯ ಬೆನ್ನಲ್ಲೇ ಬಂದ ಈ ನಿರ್ಧಾರವು ಚಿನ್ನದ ಬೆಲೆಯನ್ನು ಮತ್ತಷ್ಟು ಏರಿಸಲಿದ್ದು, ಆಮದು ಕಡಿಮೆ ಮಾಡುವ ಮೂಲಕ ರೂಪಾಯಿ ಮೌಲ್ಯವನ್ನು ಸ್ಥಿರಗೊಳಿಸುವ ಗುರಿ ಹೊಂದಿದೆ.

ಚಿನ್ನ, ಬೆಳ್ಳಿ ದರ ಇನ್ನಷ್ಟು ಏರಿಕೆಯಾಗೋದು ಫಿಕ್ಸ್: ಆಮದು ಸುಂಕ ಭರ್ಜರಿ ಹೆಚ್ಚಿಸಿದ ಕೇಂದ್ರ ಸರ್ಕಾರ
ಸಾಂದರ್ಭಿಕ ಚಿತ್ರImage Credit source: TV9 Network
ಗಣಪತಿ ಶರ್ಮಾ
|

Updated on: May 13, 2026 | 8:15 AM

Share

ನವದೆಹಲಿ, ಮೇ 13: ಜಾಗತಿಕ ಆರ್ಥಿಕ ಅಸ್ಥಿರತೆ ಮತ್ತು ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆಯನ್ನು ರಕ್ಷಿಸುವ ಸಲುವಾಗಿ ಕೇಂದ್ರ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ (Gold and Silver) ಮೇಲಿನ ಆಮದು ಸುಂಕವನ್ನು (Customs Duty) ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮಾಡಿದ ‘ಆರ್ಥಿಕ ಮಿತವ್ಯಯ’ದ ಮನವಿಯ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ. ಇದರಿಂದ ಚಿನ್ನದ ದರ (Gold Rate) ಹಾಗೂ ಬೆಳ್ಳಿಯ ಬೆಲೆ ಹೆಚ್ಚಾಗಲಿದೆ. ಚಿನ್ನ ಖರೀದಿಯನ್ನು ಒಂದು ವರ್ಷ ಮುಂದೂಡುವಂತೆ ಪ್ರಧಾನಿ ಮನವಿ ಮಾಡಿದ್ದರು ಎಂಬುದೂ ಗಮನಾರ್ಹ.

ಮುಖ್ಯಾಂಶಗಳು

  • ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ 6 ರಿಂದ ಶೇ 15 ಕ್ಕೆ ಏರಿಸಿದ ಕೇಂದ್ರ ಸರ್ಕಾರ.
  • ಆಮದು ಸುಂಕದ ಜೊತೆಗೆ ಶೇ 5 ರಷ್ಟು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್ (AIDC) ಅನ್ವಯ.
  • ರೂಪಾಯಿ ಮೌಲ್ಯ ಕುಸಿತ ತಡೆಯಲು ಮತ್ತು ವ್ಯಾಪಾರ ಕೊರತೆ ನೀಗಿಸಲು ಈ ಕಟ್ಟುನಿಟ್ಟಿನ ಕ್ರಮ.

ಬೆಲೆ ಏರಿಕೆಯ ಬಿಸಿ

ಈಗಾಗಲೇ ಗಗನಮುಖಿಯಾಗಿರುವ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು, ಸರ್ಕಾರದ ಈ ಹೊಸ ನಿರ್ಧಾರದಿಂದಾಗಿ ಮತ್ತಷ್ಟು ದುಬಾರಿಯಾಗಲಿವೆ. ಈ ಹಿಂದೆ ಶೇ 6 ರಷ್ಟಿದ್ದ ಒಟ್ಟಾರೆ ಆಮದು ಸುಂಕವನ್ನು ಈಗ ಶೇ 15 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ ಶೇ 10 ರಷ್ಟು ಮೂಲ ಕಸ್ಟಮ್ಸ್ ಸುಂಕ ಮತ್ತು ಶೇ 5 ರಷ್ಟು ಕೃಷಿ ಮೂಲಸೌಕರ್ಯ ಅಭಿವೃದ್ಧಿ ಸೆಸ್ ಸೇರಿದೆ. ಡಾಲರ್ ಎದುರು ರೂಪಾಯಿ ಮೌಲ್ಯವು 95.75 ರ ಸಾರ್ವಕಾಲಿಕ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ, ವಿದೇಶಿ ವಿನಿಮಯ ಮೀಸಲು ರಕ್ಷಿಸಲು ಈ ಕ್ರಮ ಅನಿವಾರ್ಯ ಎಂದು ಸರ್ಕಾರ ಭಾವಿಸಿದೆ.

ಪ್ರಧಾನಿ ಮೋದಿ ಅವರ ಮಿತವ್ಯಯದ ಕರೆ

ಇರಾನ್ ಯುದ್ಧ ಮತ್ತು ಜಾಗತಿಕ ತೈಲ ಬೆಲೆ ಏರಿಕೆಯಿಂದ ಉಂಟಾಗಬಹುದಾದ ಆರ್ಥಿಕ ಆಘಾತವನ್ನು ಎದುರಿಸಲು ಪ್ರಧಾನಿ ಮೋದಿ ಅವರು ನಾಗರಿಕರಲ್ಲಿ ವಿಶೇಷ ಮನವಿ ಮಾಡಿದ್ದರು. ಕನಿಷ್ಠ ಒಂದು ವರ್ಷದವರೆಗೆ ಮದುವೆ ಸಮಾರಂಭಗಳಿಗೆ ಚಿನ್ನ ಖರೀದಿಸುವುದನ್ನು ತಡೆಯಿರಿ, ವಿದೇಶಿ ಪ್ರವಾಸಗಳನ್ನು ಮುಂದೂಡಿ ಮತ್ತು ಸಾರ್ವಜನಿಕ ಸಾರಿಗೆಯನ್ನು ಹೆಚ್ಚಾಗಿ ಬಳಸಿ ಎಂದು ಅವರು ಸಲಹೆ ನೀಡಿದ್ದರು. ಆಮದು ಅವಲಂಬನೆಯನ್ನು ಕಡಿಮೆ ಮಾಡುವ ಮೂಲಕ ದೇಶದ ಆರ್ಥಿಕತೆಯನ್ನು ಸದೃಢಗೊಳಿಸುವುದು ಪ್ರಧಾನಿಯವರ ಈ ಕರೆಯ ಮುಖ್ಯ ಉದ್ದೇಶವಾಗಿದೆ.

ಚಿನ್ನದ ಮಾರುಕಟ್ಟೆ ಮೇಲೆ ಪರಿಣಾಮ

ಭಾರತವು ವಿಶ್ವದಲ್ಲೇ ಚಿನ್ನದ ಎರಡನೇ ಅತಿದೊಡ್ಡ ಗ್ರಾಹಕ ದೇಶವಾಗಿದ್ದು, ಆಮದು ಸುಂಕದ ಏರಿಕೆಯಿಂದಾಗಿ ಬೇಡಿಕೆಯಲ್ಲಿ ಕುಸಿತ ಉಂಟಾಗುವ ಸಾಧ್ಯತೆಯಿದೆ. ಬುಲಿಯನ್ ಮಾರುಕಟ್ಟೆ ತಜ್ಞರ ಪ್ರಕಾರ, ಅಧಿಕ ತೆರಿಗೆಯಿಂದಾಗಿ ಚಿನ್ನದ ಕಳ್ಳಸಾಗಣೆ (Smuggling) ಮತ್ತೆ ಹೆಚ್ಚಾಗುವ ಆತಂಕವಿದೆ.

ಇದನ್ನೂ ಓದಿ: ವರ್ಕ್ ಫ್ರಂ ಹೋಂ, ಆನ್​ಲೈನ್ ಕ್ಲಾಸ್, ಚಿನ್ನ ಬೇಡ, ಇಂಧನದ ಮಿತ ಬಳಕೆ; ಮತ್ತೊಮ್ಮೆ ಪ್ರಧಾನಿ ಮೋದಿ ಮನವಿ

ಈಗಾಗಲೇ ಏಪ್ರಿಲ್ ತಿಂಗಳಲ್ಲಿ ಭಾರತದ ಚಿನ್ನದ ಆಮದು ಕಳೆದ 30 ವರ್ಷಗಳಲ್ಲೇ ಕನಿಷ್ಠ ಮಟ್ಟಕ್ಕೆ ತಲುಪಿತ್ತು, ಈಗಿನ ಸುಂಕ ಏರಿಕೆ ಈ ಪ್ರಮಾಣವನ್ನು ಮತ್ತಷ್ಟು ತಗ್ಗಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ