Gold Import Duty: ಚಿನ್ನಕ್ಕೆ ಆಮದು ಸುಂಕ ಹೆಚ್ಚಳದ ಬರೆ ಎಳೆದ ಸರ್ಕಾರ; ಹಳದಿ ಲೋಹ ಇನ್ನಷ್ಟು ದುಬಾರಿ

ಚಿನ್ನದ ಮೇಲಿನ ಸುಂಕವನ್ನು ಶೇ 7.5ರಿಂದ 12.5ಕ್ಕೆ ಏರಿಕೆ ಮಾಡಿ, ಕೇಂದ್ರ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ಚಿನ್ನದ ಬೆಲೆ ಏರಿಕೆ ಆಗಲಿದೆ.

Gold Import Duty: ಚಿನ್ನಕ್ಕೆ ಆಮದು ಸುಂಕ ಹೆಚ್ಚಳದ ಬರೆ ಎಳೆದ ಸರ್ಕಾರ; ಹಳದಿ ಲೋಹ ಇನ್ನಷ್ಟು ದುಬಾರಿ
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on:Jul 01, 2022 | 10:46 AM

ಕೇಂದ್ರ ಸರ್ಕಾರವು ಚಿನ್ನದ (Gold) ಮೇಲಿನ ಮೂಲ ಆಮದು ತೆರಿಗೆಯನ್ನು ಶೇಕಡಾ 7.5ರಿಂದ ಶೇಕಡಾ 12.5ಕ್ಕೆ ಏರಿಸಿದೆ. ರೂಪಾಯಿ ಮೌಲ್ಯ ದಾಖಲೆಯ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಆಮದು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ವಿಶ್ವದ ಎರಡನೇ ಅತಿದೊಡ್ಡ ಚಿನ್ನದ ಗ್ರಾಹಕ ದೇಶವಾದ ಭಾರತ ಸದ್ಯಕ್ಕೆ ಅಸ್ಥಿರವಾದ ಜಾಗತಿಕ ಸ್ಥೂಲ ಆರ್ಥಿಕ ಪರಿಸ್ಥಿತಿಗಳ ನಡುವೆ ಹೆಚ್ಚಿನ ವ್ಯಾಪಾರ ಮತ್ತು ಚಾಲ್ತಿ ಖಾತೆ ಕೊರತೆಯನ್ನು ಎದುರು ನೋಡುತ್ತಿದೆ. ಮೇ ತಿಂಗಳಲ್ಲಿ ದೇಶದ ವ್ಯಾಪಾರ ಕೊರತೆಯು ಗರಿಷ್ಠ ಯುಎಸ್​ಡಿ 24.29 ಬಿಲಿಯನ್‌ಗೆ ಏರಿತು. ಭಾರತವು ಮೇ ತಿಂಗಳಲ್ಲಿ ಯುಎಸ್​ಡಿ 6.03 ಶತಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಂಡಿದೆ, ಇದು ಹಿಂದಿನ ವರ್ಷಕ್ಕಿಂತ ಒಂಬತ್ತು ಪಟ್ಟು ಹೆಚ್ಚಾಗಿದೆ.

ಕೊರೊನಾ ಸಾಂಕ್ರಾಮಿಕ ರೋಗದ ನಂತರ ಬೇಡಿಕೆ ಚೇತರಿಸಿಕೊಂಡಿದ್ದರಿಂದ ಭಾರತವು ಕಳೆದ ವರ್ಷ ಒಂದು ದಶಕದಲ್ಲೇ ಅತಿ ಹೆಚ್ಚು ಚಿನ್ನವನ್ನು ಆಮದು ಮಾಡಿಕೊಂಡಿತ್ತು. ಸರಕುಗಳ ಮೇಲಿನ ಆಮದು ಸುಂಕವನ್ನು ಹೆಚ್ಚಿಸುವುದು ಆಮದುಗಳನ್ನು ಕಡಿಮೆ ಮಾಡುವ ಒಂದು ಮಾರ್ಗವಾಗಿದೆ. ಈ ಕ್ರಮವು ಕಳೆದ ವರ್ಷ ಬಜೆಟ್‌ನಲ್ಲಿ ಕೇಂದ್ರವು ತೆರಿಗೆಯನ್ನು ಶೇಕಡಾ 7.5ಕ್ಕೆ ಇಳಿಸಿದಂಥ ಕ್ರಮದ ಉಲ್ಟಾ ಆಗಿದೆ.

ಚಿನ್ನದ ಕಳ್ಳಸಾಗಣೆಯನ್ನು ಕಡಿಮೆ ಮಾಡಲು 2022ರ ಬಜೆಟ್‌ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇಕಡಾ 7.5 ರಿಂದ ಶೇಕಡಾ 4ಕ್ಕೆ ಇಳಿಸುವಂತೆ ಈ ವರ್ಷದ ಆರಂಭದಲ್ಲಿ ದೇಶದ ಪ್ರಮುಖ ಆಭರಣ ವ್ಯಾಪಾರಿಗಳು ಸರ್ಕಾರವನ್ನು ಒತ್ತಾಯಿಸಿದ್ದರು.

ದೇಶೀಯ ಮಾರುಕಟ್ಟೆಯನ್ನು ಬಲಪಡಿಸಲು ಚೀನಾ, ಯುಎಸ್ಎ ಮತ್ತು ಸಿಂಗಾಪೂರದಂತಹ ದೇಶಗಳು ಚಿನ್ನದ ಮೇಲಿನ ಆಮದು ಸುಂಕವನ್ನು ತೆಗೆದಿವೆ.

ಇದನ್ನೂ ಓದಿ: Gold: ವಿದೇಶದಿಂದ ಭಾರತಕ್ಕೆ ಎಷ್ಟು ಚಿನ್ನ ತರಬಹುದು? ಆ ಚಿನ್ನಕ್ಕೆ ಎಷ್ಟು ಸುಂಕ ಕಟ್ಟಬೇಕಾಗುತ್ತದೆ?

Published On - 10:46 am, Fri, 1 July 22

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ