Gold Price Today: ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ!

Gold Rate Today: ಇಂದು ಚಿನ್ನ ಖರೀದಿಸುವ ಕುರಿತಾಗಿ ನೀವು ಯೋಚಿಸಿದ್ದರೆ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ!
ಸಾಂದರ್ಭಿಕ ಚಿತ್ರ
Edited By:

Updated on: Oct 04, 2021 | 10:23 AM

Gold Silver Rate Today: ಬೆಂಗಳೂರು: ಚಿನ್ನಾಭರಣಗಳನ್ನು ಖರೀದಿಸಬೇಕು ಎಂದು ಅದೆಷ್ಟೋ ವರ್ಷಗಳಿಂದ ಹಣವನ್ನು ಕೂಡಿಡುತ್ತಾ ಬಂದಿರುತ್ತೀರಿ. ಮನೆಯಲ್ಲಿ ಸಭೆ- ಸಮಾರಂಭಗಳು ಎದುರಿದ್ದಾಗ ಚಿನ್ನ (Gold Price) ಖರೀದಿಸಬೇಕು ಎಂಬ ಆಲೋಚನೆ ಮಾಡಿರುತ್ತೀರಿ. ಹಾಗಿರುವಾಗ ಇಂದು (ಅಕ್ಟೋಬರ್​ 4, ಸೋಮವಾರ) ಚಿನ್ನ ಖರೀದಿಸುವ ಕುರಿತಾಗಿ ನೀವು ಯೋಚಿಸಿದ್ದರೆ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ. ನೀವು ಕೂಡಿಟ್ಟ ಹಣದಲ್ಲಿ ಇಂದು ಚಿನ್ನ ಖರೀದಿಸಲು ಸರಿ ಹೊಂದಬಹುದು ಎಂದೆನಿಸಿದರೆ ಯೋಚಿಸಬಹುದು. 

ಇಂದು ಸಹ ಚಿನ್ನದ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಚಿನ್ನದ ಆಭರಣದ ಬೆಲೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,510 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,35,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,470 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,74,700 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಇಂದು ಯಾವುದೇ ಏರಿಳಿತಗಳಿಲ್ಲ. ಕೆಜಿ ಬೆಳ್ಳಿಗೆ 60,500 ರೂಪಾಯಿ ಇದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,880 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,38,800 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,870 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,78,700 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಹೆಚ್ಚಳವಾಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,500 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,55,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,500 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,65,000 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಏರಿಳಿ ಕಂಡು ಬಂದಿಲ್ಲ, ಕೆಜಿ ಬೆಳ್ಳಿಗೆ 60,500 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಇಂದು ಚಿನ್ನ, ಬೆಳ್ಳಿ ಖರೀದಿಸುವ ಪ್ಲ್ಯಾನ್ ಇದೆಯಾ? ಆಭರಣಗಳ ಬೆಲೆ ಇಳಿಕೆಯಾಗಿದೆ!

Gold Price Today: ಕೆಲವೆಡೆ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ!

Published On - 7:39 am, Mon, 4 October 21