Dhanteras 2022: ಭಾರತ-ಪಾಕ್ ಪಂದ್ಯದ ವೇಳೆ ಬಿಕೋ ಎಂದ ಆಭರಣ ಮಾರುಕಟ್ಟೆ; ನಂತರ ಚೇತರಿಸಿದ ಮಾರಾಟ

ದೀಪಾವಳಿ ಪ್ರಯುಕ್ತ ದೇಶದಾದ್ಯಂತ ಚಿನ್ನ, ಬೆಳ್ಳಿ, ಆಭರಣ ಮಾರಾಟಲ್ಲಿ ಹೆಚ್ಚಳ

Dhanteras 2022: ಭಾರತ-ಪಾಕ್ ಪಂದ್ಯದ ವೇಳೆ ಬಿಕೋ ಎಂದ ಆಭರಣ ಮಾರುಕಟ್ಟೆ; ನಂತರ ಚೇತರಿಸಿದ ಮಾರಾಟ
ಸಾಂದರ್ಭಿಕ ಚಿತ್ರImage Credit source: News18
Follow us
TV9 Web
| Updated By: Ganapathi Sharma

Updated on: Oct 24, 2022 | 10:25 AM

ಮುಂಬೈ: ದೀಪಾವಳಿಯ (Diwali) ಹಬ್ಬದ ಧನತ್ರಯೋದಶಿ ಅಥವಾ ಧನ್​ತೇರಸ್ (Dhanteras) ಪ್ರಯುಕ್ತ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ (gold), ಬೆಳ್ಳಿ ಮತ್ತು ಆಭರಣ (jewellery) ಮಾರಾಟದಲ್ಲಿ ಹೆಚ್ಚಳ ಕಂಡುಬಂದಿದೆ. ಕಳೆದ ವರ್ಷದ ದೀಪಾವಳಿ ಸಂದರ್ಭದ ಮಾರಾಟಕ್ಕೆ ಹೋಲಿಸಿದರೆ ಈ ಬಾರಿ ಮಾರಾಟದಲ್ಲಿ ಶೇಕಡಾ 35ರಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ.

ಮಾರುಕಟ್ಟೆ ಮಂಕಾಗಿಸಿದ ಭಾರತ-ಪಾಕ್ ಟಿ20 ಪಂದ್ಯ:

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಆಸ್ಟ್ರೇಲಿಯಾದ ಮೆಲ್ಬೋರ್ನ್​​ನಲ್ಲಿ ನಡೆದ ಟಿ20 ವಿಶ್ವಕಪ್ ಪಂದ್ಯದ ಸಂದರ್ಭದಲ್ಲಿ ಆಭರಣ ಮಳಿಗೆಗಳು ಬಿಕೋ ಎನ್ನುತ್ತಿದ್ದವು. ದೇಶದಾದ್ಯಂತ ಪಂದ್ಯ ನಡೆಯುತ್ತಿದ್ದ ವೇಳೆ ಮಳಿಗೆಗಳು ಖಾಲಿಯಾಗಿದ್ದರೆ, ನಂತರ ಜನ ಚಿನ್ನ, ಆಭರಣ ಖರೀದಿಗೆ ಮಾಮೂಲಿಯಂತೆ ಆಗಮಿಸತೊಡಗಿದರು ಎಂದು ಆಭರಣ ವ್ಯಾಪಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ
Image
Petrol Price on October 24: ದೀಪಾವಳಿಗೆ ಗ್ರಾಹಕರಿಗೆ ಗುಡ್​ ನ್ಯೂಸ್; ಈ ರಾಜ್ಯದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಕುಸಿತ
Image
Share Market Predictions: ಷೇರುಪೇಟೆ ಮೇಲೆ ಪರಿಣಾಮ ಬೀರಲಿವೆ ರಜೆ, ತ್ರೈಮಾಸಿಕ ಫಲಿತಾಂಶ, ಮಾಸಾಂತ್ಯ…
Image
ICICI Bank Q2 Result: ತ್ರೈಮಾಸಿಕ ಫಲಿತಾಂಶ; ಐಸಿಐಸಿಐ ಬ್ಯಾಂಕ್ ನಿವ್ವಳ ಲಾಭದಲ್ಲಿ ಭಾರೀ ಜಿಗಿತ
Image
Dhanteras 2022: ದೀಪಾವಳಿಯ ಎರಡು ದಿನ 40 ಸಾವಿರ ಕೋಟಿ ರೂ. ವಹಿವಾಟು ನಿರೀಕ್ಷೆ; ಸಿಎಐಟಿ

ಚಿನ್ನದ ದರದಲ್ಲಿ ತುಸು ಮಟ್ಟಿನ ಹೆಚ್ಚಳವಾಗಿದ್ದರೂ ಗ್ರಾಹಕರು ಆ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಧನ್​ತೇರಸ್ ಮುಹೂರ್ತ ಇರುವ ಶನಿವಾರ ಹಾಗೂ ಭಾನುವಾರಗಳಂದು ಮಾರಾಟದಲ್ಲಿ ಏರಿಕೆ ಕಾಣಿಸಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಧರ್ಮದಲ್ಲಿ ಧನ್​ತೇರಸ್ ಅನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗಿದ್ದು, ಆ ದಿನಗಳಲ್ಲಿ ಖರೀದಿ ಮಾಡುವುದರಿಂದ ಶುಭವಾಗಲಿದೆ ಎಂಬ ನಂಬಿಕೆ ಜನರಲ್ಲಿದೆ.

ಇದನ್ನೂ ಓದಿ: Petrol Price on October 24: ದೀಪಾವಳಿಗೆ ಗ್ರಾಹಕರಿಗೆ ಗುಡ್​ ನ್ಯೂಸ್; ಈ ರಾಜ್ಯದಲ್ಲಿ ಪೆಟ್ರೋಲ್- ಡೀಸೆಲ್ ಬೆಲೆ ಕುಸಿತ

ದೆಹಲಿಯಲ್ಲಿ ಭಾನುವಾರ 10 ಗ್ರಾಂ ಚಿನ್ನದ ದರ, ತೆರಿಗೆಗಳನ್ನು ಹೊರತುಪಡಿಸಿ 50,139 ರೂ. ಆಗಿತ್ತು. 2021ರ ಧನ್​ತೇರಸ್ ದಿನ ಇದು 47,644 ರೂ. ಆಗಿತ್ತು.

ಸಾಮಾನ್ಯವಾಗಿ ಧನ್​ತೇರಸ್ ದಿನ ದೇಶದಲ್ಲಿ 20ರಿಂದ 30 ಟನ್ ಮಾರಾಟವಾಗುತ್ತದೆ. ಚಿನ್ನ, ಆಭರಣ ಮಾತ್ರವಲ್ಲದೆ ವಾಹನ ಹಾಗೂ ಇತರ ಉಪಕರಣಗಳ ಖರೀದಿ ಭರಾಟೆಯೂ ಜೋರಾಗಿರುತ್ತದೆ.

ಧನ್​ತೇರಸ್ ದಿನ ಮಾರುತಿ ಸುಜುಕಿ ಅಂದಾಜು 21,000 ವಾಹನಗಳ ಮಾರಾಟ ಮಾಡಿದೆ ಎಂದು ಕಂಪನಿಯ ಮಾರುಕಟ್ಟೆ ಮತ್ತು ಮಾರಾಟ ವಿಭಾಗದ ಹಿರಿಯ ಕಾರ್ಯನಿರ್ವಾಹಕ ಶಶಾಂಕ್ ಶ್ರೀವಾಸ್ತವ ತಿಳಿಸಿದ್ದಾರೆ.

ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 10ರಷ್ಟು ಹೆಚ್ಚು. ಆದರೆ, 2018 ಹಾಗೂ 2019ಕ್ಕಿಂತ ಕಡಿಮೆ. ಅತಿಯಾದ ಬೇಡಿಕೆ, ಪೂರೈಕೆ ಸಮಸ್ಯೆ, ಕಾಯುವಿಕೆ ಅವಧಿ ಇತ್ಯಾದಿಗಳೂ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್