Gold Rate Today: ಚಿನ್ನಾಭರಣ ಪ್ರಿಯರಿಗೆ ಖುಷಿ ಸುದ್ದಿ; ಇಂದು ಸಹ ಇಳಿಕೆಯಾದ ಚಿನ್ನ, ಬೆಳ್ಳಿ ದರ

| Updated By: shruti hegde

Updated on: Sep 01, 2021 | 8:13 AM

Gold Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಇಳಿಕೆ ಕಂಡು ಬಂದಿದೆ.

Gold Rate Today: ಚಿನ್ನಾಭರಣ ಪ್ರಿಯರಿಗೆ ಖುಷಿ ಸುದ್ದಿ; ಇಂದು ಸಹ ಇಳಿಕೆಯಾದ ಚಿನ್ನ, ಬೆಳ್ಳಿ ದರ
ಸಾಂದರ್ಭಿಕ ಚಿತ್ರ
Follow us on

Gold Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಇರಬಹುದು. ಆದರೆ ಬೆಲೆ ಕೂಡಾ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆ ಇದ್ದೇ ಇರುತ್ತದೆ ಅಲ್ವೇ? ಇಂದು ಬಂಗಾರದ ಪ್ರಿಯರಿಗೆ ಖುಷಿ ಸುದ್ದಿ. ಚಿನ್ನ (Gold Price), ಬೆಳ್ಳಿ ದರದಲ್ಲಿ (Silver Price) ಇಳಿಕೆ ಕಂಡು ಬಂದಿದೆ. ನಿನ್ನೆ ಕೂಡ ಆಭರಣದ ಬೆಲೆ ಇಳಿಕೆಯಾಗಿತ್ತು, ಇಂದು  ಸಹ ( ಸೆಪ್ಟೆಂಬರ್ 1, ಬುಧವಾರ) ಆಭರಣದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,300 ರೂಪಾಯಿ ನಿಗದಿ ಆಗಿದೆ. ಸುಮಾರು 1,600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 63,500 ರೂಪಾಯಿ ನಿಗದಿ ಆಗಿದೆ. ನಿನ್ನೆಯ ದರಕ್ಕಿಂತ 100 ರೂಪಾಯಿ ಇಳಿಕೆ ಕಂಡಿದೆ.

ಚಿನ್ನದ ಆಭರಣದ ಮೇಲೆ ಭಾರತೀಯರಿಗೆ ಕೊಂಚ ಮೋಹ ಜಾಸ್ತಿಯೇ ಎಂದು ಹೇಳಿದರೆ ತಪ್ಪಾಗಲಾರದು. ಕೇವಲ ಚಿನ್ನದ ಆಭರಣಗಳನ್ನು ತೊಟ್ಟು ಖುಷಿ ಪಡುವುದೊಂದೇ ಸಲ್ಲ, ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನದ ಬೆಲೆ ಇಂದು ಎಷ್ಟಿದೆ? ಇಂದು ಚಿನ್ನ ಕೊಳ್ಳಲು ಸುಸಮಯವೇ? ಎಂಬ ಕುತೂಹಲ ಇದ್ದೇ ಇರುತ್ತದೆ. ಹಾಗಾಗಿಯೇ ಪ್ರತಿನಿತ್ಯದ ಚಿನ್ನದ ದರವನ್ನು ತಿಳಿದುಕೊಳ್ಳುವ ಕುತೂಹಲ ಕಾಡುವುದು.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 220 ರೂಪಾಯಿ ಇಳಿಕೆ ಕಂಡಿದ್ದು, 44,660 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನದ ದರ 4,46,600 ರೂಪಾಯಿ ನಿಗದಿ ಆಗಿದ್ದು ಸುಮಾರು ದೈನಂದಿನ ದರ ಬದಲಾವಣೆಯಲ್ಲಿ 2,200 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,720 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,87,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,400 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿಗೆ 68,400 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,200 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,380 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,73,800 ರೂಪಾಯಿಗೆ ಇಳಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,200 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ದರದಲ್ಲಿ 100 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 63,500 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್; ವರಮಹಾಲಕ್ಷ್ಮೀ ವಿಶೇಷದಂದು ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ

Gold Price decrease today 2021 september 1 check silver price in bangalore delhi mumbai and major city

Published On - 7:21 am, Wed, 1 September 21