AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಇಂದು ಸಹ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿದೆ; ಆಭರಣ ಕೊಳ್ಳುವ ಆಸೆ ಇದ್ದರೆ ದರ ವಿವರ ಪರಿಶೀಲಿಸಿ

Gold Price Today: ವಿವಿಧ ನಗರಗಳಲ್ಲಿ ಚಿನ್ನಾಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳಬಹುದು ಎಂದೆನಿಸಿದರೆ ಆ ಕುರಿತಂತೆ ಯೋಚಿಸಿ.

Gold Rate Today: ಇಂದು ಸಹ ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿದೆ; ಆಭರಣ ಕೊಳ್ಳುವ ಆಸೆ ಇದ್ದರೆ ದರ ವಿವರ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 03, 2021 | 7:40 AM

Share

Gold Silver Price Today | ಬೆಂಗಳೂರು: ಆಭರಣ ಖರೀದಿಸಬೇಕು ಎಂಬ ಆಸೆಯಿಂದ ಕಷ್ಟ ಪಟ್ಟು ದುಡಿದ ಹಣವನ್ನೆಲ್ಲಾ ಕೂಡಿಡುತ್ತಾ ಬಂದಿರುತ್ತೀರಿ. ಅಷ್ಟೊಂದು ಹಣವನ್ನು ಕೊಟ್ಟು ಖರೀದಿಸವ ಚಿನ್ನಾಭರಣದ ಬೆಲೆ ಇಳಿಕೆಯಾದಾಗಲೇ ಆಭರಣ ಕೊಳ್ಳುವುದು ಉತ್ತಮ ಎಂಬ ಆಸೆ ತಪ್ಪೇನಲ್ಲ. ಕಳೆದ ಎರಡು ದಿನಗಳಿಂದ ಚಿನ್ನ (Gold Price), ಬೆಳ್ಳಿ ದರ (Silver Price) ಇಳಿಕೆಯತ್ತ ಸಾಗಿದೆ. ಇಂದು (ಸೆಪ್ಟೆಂಬರ್​ 2, ಗುರುವಾರ) ಚಿನ್ನ, ಬೆಳ್ಳಿ ಬೆಲೆ ಇಳಿಕೆಯಾಗಿದೆ. ಹಾಗಿರುವಾಗ ಚಿನ್ನ ಖರೀದಿಸುವ ಕುರಿತಾಗಿ ನೀವು ಯೋಚಿಸಬಹುದು. ವಿವಿಧ ನಗರಗಳಲ್ಲಿ ಚಿನ್ನಾಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳಬಹುದು ಎಂದೆನಿಸಿದರೆ ಆ ಕುರಿತಂತೆ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,300 ರೂಪಾಯಿ ಇದೆ. ದೈನಂದಿನ ದರ ಏರಿಳತದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಇಂದು ಸಹ ಕೊಂಚ ಇಳಿಕೆ ಕಂಡು ಬಂದಿದ್ದು, 500 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 63,000 ರೂಪಾಯಿ ನಿಗದಿ ಆಗಿದೆ.

ಇಂದು ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡು ಬಂದಿದೆ. ಇನ್ನು ಕೆಲವೆಡೆ ಸ್ಥಿರತೆ ಕಾಯ್ದುಕೊಂಡಿದೆ. ಬೆಳ್ಳಿ ದರದಲ್ಲಿಯೂ ಸಹ ದರ ಕೊಂಚ ಇಳಿಕೆ ಆಗಿದ್ದು ಇದು ಗ್ರಾಹಕರಿಗೆ ಖುಷಿ ನೀಡುವ ವಿಚಾರ. ಬೆಂಗಳೂರು, ಮುಂಬೈ, ಚೆನ್ನೈ ಸೇರಿದಂತೆ ಜೈಪುರ, ಕೇರಳ, ಹೈದರಾಬಾದ್, ದೆಹಲಿಯಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಇಳಿಕೆಯ ಹಾದಿ ಹಿಡಿದಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,63,800 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,380 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,73,800 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಇಳಿಕೆಯಾಗಿದ್ದು, 500 ರೂಪಾಯಿ ಇಳಿಕೆ ಕಂಡ ಕೆಜಿ ಬೆಳ್ಳಿ ಬೆಲೆಗೆ 63,000 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,610 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4, 86,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 110 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾ ಚಿನ್ನಕ್ಕೆ 4,86,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 1,100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,700 ರೂಪಾಯಿ ನಿಗದಿ ಆಗಿದೆ. ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಏರಿಕೆಯತ್ತ ಮುಖ ಮಾಡಿದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿ ದರ ವಿವರ ಪರಿಶೀಲಿಸಿ

(Gold Price decrease today 2021 september 2 check silver price in bangalore delhi mumbai and major city)

Published On - 7:52 am, Thu, 2 September 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ