Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಏರಿಕೆ; ನಿಮ್ಮೂರಿನಲ್ಲಿ ಆಭರಣದ ಬೆಲೆ ಎಷ್ಟಿದೆ?

Gold Price Today: ದೈನಂದಿನ ದರ ಬದಲಾವಣೆಯಲ್ಲಿ ಬಂಗಾರದ ಬೆಲೆ ಎಷ್ಟು ಇಳಿಕೆಯಾಗಿದೆ ಎಂಬ ಕುತೂಹಲ ಇದ್ದೇ ಇರುತ್ತದೆ ಅಲ್ಲವೇ? ಇಂದಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದ ಸಂಪೂರ್ಣ ಮಾಹಿತಿ ಇಲ್ಲಿದೆ ಪರಿಶೀಲಿಸಿ.

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆಯಲ್ಲಿ ಏರಿಕೆ; ನಿಮ್ಮೂರಿನಲ್ಲಿ ಆಭರಣದ ಬೆಲೆ ಎಷ್ಟಿದೆ?
ಕನಿಷ್ಠ ಹೂಡಿಕೆ 1 ಗ್ರಾಂ ಚಿನ್ನ. ಚಂದಾದಾರಿಕೆಯ ಗರಿಷ್ಠ ಮಿತಿಯು ವಯಕ್ತಿಕ ಹೂಡಿಕೆದಾರರಿಗೆ 4 ಕೇಜಿ, ಹಿಂದೂ ಅವಿಭಜಿತ ಕುಟುಂಬಗಳಿಗೆ 4 ಕೇಜಿ, ಮತ್ತು ಟ್ರಸ್ಟ್‌ಗಳು ಹಾಗೂ ಅದೇ ರೀತಿಯ ಸಂಸ್ಥೆಗಳಿಗೆ ಒಂದು ಹಣಕಾಸು ವರ್ಷದಲ್ಲಿ (ಏಪ್ರಿಲ್-ಮಾರ್ಚ್) ಗರಿಷ್ಠ 20 ಕೇಜಿ.
Edited By:

Updated on: Aug 03, 2021 | 8:54 AM

Gold Silver Price Today | ಬೆಂಗಳೂರು: ನಿನ್ನೆ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಆಭರಣಗಳ ಬೆಲೆ ಸ್ಥಿರತೆಯಲ್ಲಿದ್ದವು. ಇಂದು ( ಆಗಸ್ಟ್ 3, ಮಂಗಳವಾರ) ಚಿನ್ನದ ದರ (Gold Price) ಕೆಲವೆಡೆ ಸ್ಥಿರತೆಯಲ್ಲಿದೆ. ಇನ್ನು ಕೆಲವೆಡೆ ಏರಿಕೆಯತ್ತ ಸಾಗಿದೆ. ಬೆಳ್ಳಿ ದರ (Silver Price) ಸಾಮಾನ್ಯ ಎಲ್ಲಾ ನಗರಗಳಲ್ಲಿಯೂ ಇಂದು ಹೆಚ್ಚಳವಾಗಿದೆ. ಹಾಗಿರುವಾಗ ದೈನಂದಿನ ದರ ಬದಲಾವಣೆಯಲ್ಲಿ ಬಂಗಾರದ ಬೆಲೆ ಎಷ್ಟು ಇಳಿಕೆಯಾಗಿದೆ ಎಂಬ ಕುತೂಹಲ ಇದ್ದೇ ಇರುತ್ತದೆ ಅಲ್ಲವೇ? ಇಂದಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರದ ಸಂಪೂರ್ಣ ಮಾಹಿತಿ ಇಲ್ಲಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ಇಂದು ಚಿನ್ನದ ದರ ಸ್ಥಿರವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,990 ರೂಪಾಯಿ ಹೊಂದಿದೆ. 100 ಗ್ರಾಂ ಚಿನ್ನದ ದರ 4,49,900 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,090 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,90,900 ರೂಪಾಯಿ ಇದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವುದಾದರೆ ಯೋಚಿಸಬಹುದು. ಅದೇ ರೀತಿ ಬೆಳ್ಳಿ ದರದಲ್ಲಿ ಅಲ್ಪವೇ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿಯಲ್ಲಿ 50 ರೂಪಾಯಿ ಏರಿಕೆ ಬಳಿಕ 67,900 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,350 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,53,500 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,490 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,94,900 ರೂಪಾಯಿ ಇದೆ. ಸರಿ ಸುಮಾರು 100 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿಯೂ ಇಳಿಕೆ ಕಂಡು ಬಂದಿದ್ದು, 200 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿಗೆ 72,900 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ 47,150 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,71,500 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,430 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,14,300 ರೂಪಾಯಿ ಇದೆ. ದೆಹಲಿಯ ಮಾರುಕಟ್ಟೆಯಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 50 ರೂಪಾಯಿ ಹೆಚ್ಚಳವಾಗಿ 67,900 ರೂಪಾಯಿಗೆ ಏರಿಕೆಯಾಗಿದೆ.

ಮುಂಬೈನಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,380 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,73,800 ರೂಪಾಯಿ ಇದೆ. ಜತೆಗೆ ಬೆಳ್ಳಿ ದರ ಕೊಂಚ ಏರಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 50 ರೂಪಾಯಿ ಏರಿಕೆ ಕಂಡು ಬಂದಿದೆ. ಆ ಮೂಲಕ 67,900 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ: 

Gold Rate Today: ಇಂದು ಚಿನ್ನದ ದರ ಅಲ್ಪ ಏರಿಕೆ, ಬೆಳ್ಳಿ ಬೆಲೆ ಇಳಿಕೆ! ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವುದಾದರೆ ಯೋಚಿಸಿ

Gold Rate Today: ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ! ಆಭರಣ ಕೊಳ್ಳುವ ವಿಚಾರವಿದ್ದರೆ ದರ ವಿವರ ಒಮ್ಮೆ ಗಮನಿಸಿ