Gold And Silver Price Today| ಬೆಂಗಳೂರು: ಸಾಮಾನ್ಯವಾಗಿ ಚಿನ್ನ, ಬೆಳ್ಳಿ ಆಭರಣ ಅಂದ್ರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ? ಕೇವಲ ದುಬಾರಿ ಆಭರಣಗಳನ್ನು ಧರಿಸಿ ಸಂತೋಷ ಪಡುವುದೊಂದೇ ಅಲ್ಲದೇ, ಹೂಡಿಕೆಯ ದೃಷ್ಟಿಯಿಂದಲೂ ಚಿನ್ನ ಖರೀದಿಸುತ್ತಾರೆ. ಹಾಗಾಗಿಯೇ ಚಿನ್ನ (Gold Price), ಬೆಳ್ಳಿ ದರ ಎಷ್ಟಿದೆ? ದೈನಂದಿನ ದರ ಬದಲಾವಣೆಯಲ್ಲಿ ಏರಿದೆಯೋ? ಇಳಿಕೆ ಆಗಿದೆಯೋ? ಎಂಬೆಲ್ಲಾ ಕುತೂಹಲ ಕೆರಳುತ್ತದೆ. ಹೀಗಿರುವಾಗ ನೀವು ಇಂದು (ಅಕ್ಟೋಬರ್ 18, ಸೋಮವಾರ) ಚಿನ್ನ. ಬೆಳ್ಳಿಯ (Silver Price) ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ನಿನ್ನೆ ಕೂಡಾ ಬೆಂಗಳೂರಿನಲ್ಲಿ ಚಿನ್ನದ ದರ ಕೊಂಚ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿತ್ತು. ಆ ಬಳಿಕ ಇಂದು ಸಹ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,41,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 200 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಗಳಿಲ್ಲ. ಕೆಜಿ ಬೆಳ್ಳಿಗೆ 63,600 ರೂಪಾಯಿ ಇದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,630 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,900 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 67,400 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ.
ಇನ್ನು, ಹೈದರಾಬಾದ್ನಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,41,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,000 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಆಗಿದೆ. ಬೆಳ್ಳಿ ದರದಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ. ಕೆಜಿ ಬೆಳ್ಳಿಗೆ 67,400 ರೂಪಾಯಿ ನಿಗದಿಯಾಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿದಂತೆಯೇ ಮುಂಬೈ, ಜೈಪುರ, ಕೇರಳ ಹೀಗೆ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ದರ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಸಾಮಾನ್ಯ ಎಲ್ಲಾ ನಗರಗಳಲ್ಲಿಯೂ ಸಹ ಇಂದು ಬೆಳ್ಳಿ ಬೆಲೆ ಸ್ಥಿರವಾಗಿದೆ. ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನ ಖರೀದಿಸುವ ಆಸೆ ಇದ್ದಾಗ ಬೆಲೆ ಇಳಿಕೆಯತ್ತ ಸಾಗಿರಲಿ ಎಂಬ ಆಸೆ ತಪ್ಪೇನಲ್ಲ. ಹೀಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ನೀವು ಅಂದುಕೊಂಡ ಚಿನ್ನದ ಆಭರಣ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ.
ಇದನ್ನೂ ಓದಿ:
Gold Price Today: ಇಂದು ಬೆಂಗಳೂರಿನಲ್ಲಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ
Published On - 7:15 am, Mon, 18 October 21