Gold and Silver Price Today | ಬೆಂಗಳೂರು: ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬೇಕು ಅಂದುಕೊಂಡಿದ್ದರೆ ಈ ಕುರಿತಾಗಿ ಯೋಚಿಸುವ ಸಮಯವಿದು. ಚಿನ್ನ, ಬೆಳ್ಳಿಯ ಆಭರಣದ ದರ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸಬೇಕು ಎನ್ನುವವರು ಇಂದಿನ ದರ ವಿವರ ಪರಿಶೀಲಿಸಿ. ಇಂದು ಬುಧವಾರ (ನ.10) ಗ್ರಾಹಕರಿಗೆ ಸಂತೋಷದ ವಿಷಯವೆಂದರೆ ಚಿನ್ನದ ದರದಲ್ಲಿ (Gold price) ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ (Silver Price) ಯಾವುದೇ ಬದಲಾವಣೆಯಾಗಿಲ್ಲ. ಅಂದರೆ ಬೆಳ್ಳಿ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಇಳಿಕೆ ಕಂಡು ಬಂದಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ವಿವರ (Bangalore Gold price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,100 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ವಿವರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,52,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,93,900 ರೂಪಾಯಿ ದಾಖಲಾಗಿದೆ. ಸುಮಾರು 1,800 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಮಾಹಿತಿ (Mumbai Gold price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,79,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಆಗಿದೆ. ಮುಂಬೈನಲ್ಲಿ ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ