Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್; ದೀಪಾವಳಿ ಹಬ್ಬಕ್ಕೆ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
Gold Rate Today: ಇಂದು ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನ, ಬೆಳ್ಳಿ ದರ ಇಳಿಕೆಯಾಗಿದೆ. ಚಿನ್ನ ಖರೀದಿಸುವುದಾದರೆ ದರ ವಿವರ ಪರಿಶೀಲಿಸಿ.
Gold and Silver Price Today | ಬೆಂಗಳೂರು: ದೀಪಾವಳಿ ಹಬ್ಬದಂದು ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ದರ ವಿವರ ಎಷ್ಟಿದೆ ಎಂದು ಯೋಚಿಸುತ್ತಿದ್ದೀರಾ? ಇಂದು ಗುರುವಾರ (ನವೆಂಬರ್ 4) ಚಿನ್ನ (Gold Price), ಬೆಳ್ಳಿ ದರದಲ್ಲಿ (Silver Price) ಇಳಿಕೆಯಾಗಿದೆ. ಇದು ಆಭರಣ ಪ್ರಿಯರಿಗೆ ಸಂತೋಷ ನೀಡುವ ವಿಚಾರ. ಬೆಂಗಳೂರು ಸೇರಿ ಚೆನ್ನೈ, ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ದೈನಂದಿನ ದರ ಬದಲಾವಣೆಯಲ್ಲಿ ಎಷ್ಟು ಇಳಿಕೆ ಆಗಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
ಹಬ್ಬದ ದಿನ ಚಿನ್ನಾಭರಣ ಖರೀದಿಸುವುದು ಸಂಪ್ರದಾಯವೂ ಕೆಲವೆಡೆ ಇದೆ. ಇದರ ಜೊತೆ ಹಬ್ಬದ ಶುಭ ಸಂದರ್ಭದಲ್ಲಿ ಚಿನ್ನ ಖರೀದಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ ನೆಮ್ಮದಿದ ಜೊತೆಗೆ ಸಮೃದ್ಧಿ ಲಭಿಸುತ್ತದೆ ಎಂಬ ನಂಬಿಕೆಯೂ ಇದೆ. ಹಾಗಿರುವಾಗ ಚಿನ್ನಾಭರಣ ಖರೀದಿಸಲು ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಹಜ. ಹೀಗಿರುವಾಗ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿಯಷ್ಟು ಇಳಿಕೆ ಆಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,700 ರೂಪಾಯಿ ಇಳಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆಯಲ್ಲಿ 2,300 ರೂಪಾಯಿ ಇಳಿಕೆ ಬಳಿಕ 62,400 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,690 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,900 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ಸುಮಾರು 4,200 ರೂಪಾಯಿ ಇಳಿಕೆ ಆಗಿದೆ. ಇನ್ನು, ಬೆಳ್ಳಿ ದರದಲ್ಲಿಯೂ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 67,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,300 ರೂಪಾಯಿ ಇಳಿಕೆ ಆಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,45,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,86,000 ರೂಪಾಯಿ ನಿಗದಿಯಾಗಿದೆ. ಸುಮಾರು 2,700 ರೂಪಾಯಿ ಇಳಿಕೆ ಆಗಿದೆ. ಇನ್ನು, ಕೆಜಿ ಬೆಳ್ಳಿ ಬೆಲೆಯಲ್ಲಿ 1,300 ರೂಪಾಯಿ ಇಳಿಕೆ ಬಳಿಕ 67,600 ರೂಪಾಯಿ ನಿಗದಿಯಾಗಿದೆ.
ಇದನ್ನೂ ಓದಿ:
Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ
Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ
Published On - 8:08 am, Thu, 4 November 21