AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ; ಏರುತ್ತಲೇ ಇದ್ದ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Rate Today: ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ನೀವು ಆಸೆ ಪಟ್ಟಿದ್ದ ಚಿನ್ನದ ಆಭರಣ ಕೊಳ್ಳಲು ಇದು ಸುಸಮಯವೇ ಎಂಬುದರ ಕುರಿತಾಗಿ ಯೋಚಿಸಲು ಇಂದಿನ ದರ ವಿವರ ಪರಿಶೀಲಿಸಿ. 

Gold Price Today: ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ; ಏರುತ್ತಲೇ ಇದ್ದ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
ಸಂಗ್ರಹ ಚಿತ್ರ
TV9 Web
| Edited By: |

Updated on:Oct 28, 2021 | 7:34 AM

Share

Gold and Silver Price Today | ಬೆಂಗಳೂರು: ಸಾಮಾನ್ಯವಾಗಿ ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಎಲ್ಲರಲ್ಲಿಯೂ ಇರುತ್ತದೆ. ಅಷ್ಟೊಂದು ದೊಡ್ಡ ಮೌಲ್ಯದ ಚಿನ್ನ ಖರೀದಿಸುವ ಸಲುವಾಗಿ ಹಲವು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲಾ ವ್ಯಯಿಸುತ್ತೇವೆ. ಆದ್ದರಿಂದ ಚಿನ್ನ (Gold Price), ಬೆಳ್ಳಿ ದರ ಇಳಿಕೆಯತ್ತ ಸಾಗಿದ್ದಾಗ ಆಭರಣ ಕೊಳ್ಳೋಣ ಎಂಬ ಆಸೆಯೂ ತಪ್ಪಲ್ಲ. ಹಾಗಿರುವಾಗ ಇಂದು ಗುರುವಾರ (ಅ.28) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ? ನೀವು ಆಸೆ ಪಟ್ಟಿದ್ದ ಚಿನ್ನದ ಆಭರಣ ಕೊಳ್ಳಲು ಇದು ಸುಸಮಯವೇ ಎಂಬುದರ ಕುರಿತಾಗಿ ಯೋಚಿಸಲು ಇಂದಿನ ದರ ವಿವರ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿ ಇಳಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ದಾಖಲಾಗಿದೆ. ಸುಮಾರು 1,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,800 ರೂಪಾಯಿ ನಿಗದಿಯಾಗಿದೆ. ಸುಮಾರು 3,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿಯಷ್ಟು ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 1,000 ರೂಪಾಯಿಯಷ್ಟು ಇಳಿಕೆಯಾಗಿದೆ. ಆ ಬಳಿಕ ಕೆಜಿ ಬೆಳ್ಳಿ ಬೆಲೆ 69,200 ರೂಪಾಯಿ ದಾಖಲಾಗಿದೆ.

ದೆಹಲಿಯಲ್ಲಿ ಚಿನ್ನ, ಬೆಳ್ಳಿ ದರ (Delhi Gold Price) ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,11,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿ ಇಳಿಕೆ ಕಂಡಿದೆ. ಇನ್ನು ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಇಳಿಕೆ ಕಂಡಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,400 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,400 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಇಳಿಕೆ

Gold Price Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಪ್ರಮುಖ ನಗರಗಳಲ್ಲಿ ಎಷ್ಟಿದೆ ಗೊತ್ತಾ ಆಭರಣಗಳ ಬೆಲೆ?

Published On - 7:15 am, Thu, 28 October 21

Follow Us
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು