Gold and Silver Price Today | ಬೆಂಗಳೂರು: ಸಾಮಾನ್ಯವಾಗಿ ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಎಲ್ಲರಲ್ಲಿಯೂ ಇರುತ್ತದೆ. ಅಷ್ಟೊಂದು ದೊಡ್ಡ ಮೌಲ್ಯದ ಚಿನ್ನ ಖರೀದಿಸುವ ಸಲುವಾಗಿ ಹಲವು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲಾ ವ್ಯಯಿಸುತ್ತೇವೆ. ಆದ್ದರಿಂದ ಚಿನ್ನ (Gold Price), ಬೆಳ್ಳಿ ದರ ಇಳಿಕೆಯತ್ತ ಸಾಗಿದ್ದಾಗ ಆಭರಣ ಕೊಳ್ಳೋಣ ಎಂಬ ಆಸೆಯೂ ತಪ್ಪಲ್ಲ. ಹಾಗಿರುವಾಗ ಇಂದು ಗುರುವಾರ (ಅ.28) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ? ನೀವು ಆಸೆ ಪಟ್ಟಿದ್ದ ಚಿನ್ನದ ಆಭರಣ ಕೊಳ್ಳಲು ಇದು ಸುಸಮಯವೇ ಎಂಬುದರ ಕುರಿತಾಗಿ ಯೋಚಿಸಲು ಇಂದಿನ ದರ ವಿವರ ಪರಿಶೀಲಿಸಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,820 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,88,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿ ಇಳಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ದಾಖಲಾಗಿದೆ. ಸುಮಾರು 1,200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,080 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,800 ರೂಪಾಯಿ ನಿಗದಿಯಾಗಿದೆ. ಸುಮಾರು 3,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,180 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿಯಷ್ಟು ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 1,000 ರೂಪಾಯಿಯಷ್ಟು ಇಳಿಕೆಯಾಗಿದೆ. ಆ ಬಳಿಕ ಕೆಜಿ ಬೆಳ್ಳಿ ಬೆಲೆ 69,200 ರೂಪಾಯಿ ದಾಖಲಾಗಿದೆ.
ದೆಹಲಿಯಲ್ಲಿ ಚಿನ್ನ, ಬೆಳ್ಳಿ ದರ (Delhi Gold Price)
ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,69,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,11,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿ ಇಳಿಕೆ ಕಂಡಿದೆ. ಇನ್ನು ಕೆಜಿ ಬೆಳ್ಳಿಗೆ 64,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಇಳಿಕೆ ಕಂಡಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,71,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,400 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,130 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,81,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,400 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,200 ರೂಪಾಯಿ ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ; ಬೆಳ್ಳಿ ಬೆಲೆಯಲ್ಲಿ ಇಳಿಕೆ
Published On - 7:15 am, Thu, 28 October 21