Gold Price Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಆಭರಣ ಖರೀದಿಗಾಗಿ ಯೋಚಿಸುತ್ತಿದ್ದರೆ ಇಂದಿನ ಬೆಲೆ ವಿವರ ಇಲ್ಲಿದೆ

Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ.

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ; ಆಭರಣ ಖರೀದಿಗಾಗಿ ಯೋಚಿಸುತ್ತಿದ್ದರೆ ಇಂದಿನ ಬೆಲೆ ವಿವರ ಇಲ್ಲಿದೆ
ಚಿನ್ನ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: preethi shettigar

Updated on:Oct 30, 2021 | 7:36 AM

Gold and Silver Price Today | ಬೆಂಗಳೂರು: ಸಾಮಾನ್ಯವಾಗಿ ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಎಲ್ಲರಲ್ಲಿಯೂ ಇರುತ್ತದೆ. ದೊಡ್ಡ ಮೌಲ್ಯದ ಚಿನ್ನ ಖರೀದಿಸುವ ಸಲುವಾಗಿ ಹಲವು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲಾ ವ್ಯಯಿಸುತ್ತೇವೆ. ಆದ್ದರಿಂದ ಚಿನ್ನ (Gold Price), ಬೆಳ್ಳಿ ದರ ಇಳಿಕೆಯತ್ತ ಸಾಗಿದ್ದಾಗ ಆಭರಣ ಕೊಳ್ಳೋಣ ಎಂಬ ಆಸೆಯೂ ತಪ್ಪಲ್ಲ. ಹಾಗಿರುವಾಗ ಇಂದು ಶನಿವಾರ (ಅಕ್ಟೋಬರ್ 30) ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ? ನೀವು ಆಸೆ ಪಟ್ಟಿದ್ದ ಚಿನ್ನದ ಆಭರಣ ಕೊಳ್ಳಲು ಇದು ಸುಸಮಯವೇ ಎಂಬುವುದರ ಕುರಿತಾಗಿ ಯೋಚಿಸಲು ಇಂದಿನ ದರ ವಿವರ ಪರಿಶೀಲಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,850 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,48,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,930 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆಯಾಗಿದೆ. ಇನ್ನು ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ದಾಖಲಾಗಿದೆ. ಸುಮಾರು 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,200 ರೂಪಾಯಿ ನಿಗದಿಯಾಗಿದೆ. ಸುಮಾರು 1,300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,400 ರೂಪಾಯಿಯಷ್ಟು ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿಯಷ್ಟು ಇಳಿಕೆಯಾಗಿದೆ. ಆ ಬಳಿಕ ಕೆಜಿ ಬೆಳ್ಳಿ ಬೆಲೆ 68,800 ರೂಪಾಯಿ ದಾಖಲಾಗಿದೆ.

ದೆಹಲಿಯಲ್ಲಿ ಚಿನ್ನ, ಬೆಳ್ಳಿ ದರ (Delhi Gold Price) ದೆಹಲಿಯಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,000 ರೂಪಾಯಿ ಇಳಿಕೆಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 51,270 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,12,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,100 ರೂಪಾಯಿ ಇಳಿಕೆ ಕಂಡಿದೆ. ಇನ್ನು ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಕಂಡಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,70,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕೆಜಿ ಬೆಳ್ಳಿ ಬೆಲೆ 64,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 400 ರೂಪಾಯಿ ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ: Gold Price Today: ಚಿನ್ನಾಭರಣ ಪ್ರಿಯರಿಗೆ ಶುಭ ಸುದ್ದಿ; ಏರುತ್ತಲೇ ಇದ್ದ ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ

Gold Price Today: ಇಂದು ಏರಿಕೆಯಾದ ಚಿನ್ನದ ದರ; ಕೆಲವೆಡೆ ಬೆಳ್ಳಿ ಬೆಲೆ ಇಳಿಕೆ

Published On - 7:26 am, Sat, 30 October 21

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್