AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ

Gold Rate Today: ಚಿನ್ನ, ಬೆಳ್ಳಿಯ ಆಭರಣ ಕೊಳ್ಳಬೇಕು ಅಂದುಕೊಂಡಿದ್ದರೆ ಇಂದು ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಆಭರಣದ ದರ ಎಷ್ಟಿದೆ ಪರಿಶೀಲಿಸಿ.

Gold Price Today: ಗ್ರಾಹಕರೇ ಗಮನಿಸಿ; ಇಂದು ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ಬೆಲೆ ಕೆಲವೆಡೆ ಏರಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 31, 2021 | 7:44 AM

Share

Gold and Silver Price Today | ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬ ಎದುರು ಬರುತ್ತಿದೆ. ಹಬ್ಬದ ಸಮಯದಲ್ಲಿ ಚಿನ್ನ, ಬೆಳ್ಳಿ ಖರೀದಿಸಬೇಕು ಅಂದುಕೊಂಡವರು ಈ ಕುರಿತಾಗಿ ಯೋಚಿಸುವ ಸಮಯವಿದು. ಚಿನ್ನ, ಬೆಳ್ಳಿಯ ಆಭರಣದ ದರ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸಬೇಕು ಅಂದುಕೊಂಡವರು ಇಂದಿನ ದರ ವಿವರ ಪರಿಶೀಲಿಸಿ. ಇಂದು ಭಾನುವಾರ (ಅ.30) ಗ್ರಾಹಕರಿಗೆ ಸಂತೋಷದ ವಿಷಯವೆಂದರೆ ಚಿನ್ನ (Gold price), ಬೆಳ್ಳಿ ದರದಲ್ಲಿ (Silver Price) ಇಳಿಕೆ ಆಗಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಇಳಿಕೆ ಕಂಡು ಬಂದಿದೆ. ಅದೆಷ್ಟೋ ವರ್ಷಗಳಿಂದ ಹಣ ಕೂಡಿಟ್ಟವರು, ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಬಹುದು ಅಂದುಕೊಂಡವರು ಆ ಕುರಿತಂತೆ ಯೋಚಿಸಿ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ ವಿವರ (Bangalore Gold price) ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,500 ರೂಪಾಯಿ ನಿಗದಿಯಾಗಿದೆ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,770 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,600 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ ವಿವರ (Chennai Gold Price) ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,060 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,160 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,600 ರೂಪಾಯಿ ದಾಖಲಾಗಿದೆ. ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಕೊಂಚ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 68,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ ಮಾಹಿತಿ (Mumbai Gold price) ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 46,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,740 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,77,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,100 ರೂಪಾಯಿ ಇಳಿಕೆ ಆಗಿದೆ. ಮುಂಬೈನಲ್ಲಿ ಚಿನ್ನದ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 64,600 ರೂಪಾಯಿ ನಿಗದಿಯಾಗಿದೆ.

ಚಿನ್ನದ ದರ ಇಳಿಕೆಯತ್ತ ಸಾಗಿರುವಾಗ ಆಭರಣ ಖರೀದಿಸಬೇಕು ಅಂದುಕೊಳ್ಳುವುದು ತಪ್ಪೇನಲ್ಲ. ಅದೇ ರೀತಿ ಚಿನ್ನ ಖರೀದಿಸಲೇ ಬೇಕು ಎಂದು ಹಣವನ್ನು ಕೂಡಿಟ್ಟಿರುವಾಗ ದರ ಇಳಿಕೆಯತ್ತ ಸಾಗಲಿ ಎಂದು ಕಾಯುತ್ತಿರಬಹುದು. ಹೀಗಿರುವಾಗ ಕಳೆದ ಎರಡು ದಿನಗಳಿಂದ ಚಿನ್ನದ ದರ ದೈನಂದಿನ ದರ ಬದಲಾವಣೆಯಲ್ಲಿ ಇಳಿಕೆ ಕಂಡಿದೆ. ಬೆಳ್ಳಿ ಬೆಲೆಯಲ್ಲಿ ಏರಿಳಿತಗಳಾಗಿವೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಅಂದನಿಸಿದರೆ ಆ ಕುರಿತಾಗಿ ಯೋಚಿಸಿ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಇಂದು ಕೆಲವೆಡೆ ಚಿನ್ನದ ದರದಲ್ಲಿ ಏರಿಕೆ, ಬೆಳ್ಳಿ ಬೆಲೆ ಸ್ಥಿರ; ಚಿನ್ನದ ಆಭರಣ ಕೊಳ್ಳುವ ಮನಸ್ಸಿದ್ದರೆ ದರ ವಿವರ ಗಮನಿಸಿ

Published On - 7:31 am, Sun, 31 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ