AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಸಹ ಇಳಿಕೆಯಾದ ಚಿನ್ನ, ಬೆಳ್ಳಿ ದರ; ಚಿನ್ನಾಭರಣ ಖರೀದಿಸುವುದಾದರೆ ಯೋಚಿಸಬಹುದು

Gold Rate Today: ಅದೆಷ್ಟೋ ವರ್ಷಗಳಿಂದ ಆಭರಣ ಖರೀದಿಸಬೇಕು ಅಂದುಕೊಂಡು ಹಣ ಕೂಡಿಟ್ಟಿದ್ದರೆ, ಇಂದಿನ ಆಭರಣಗಳ ರೇಟ್​ ತಿಳಿದು, ಆ ಕುರಿತಾಗಿ ಯೋಚಿಸಬಹುದು. ಪ್ರಮುಖ ನಗರಗಳಲ್ಲಿ ಎಷ್ಟಿದೆ ಇಂದಿನ ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಇಂದು ಸಹ ಇಳಿಕೆಯಾದ ಚಿನ್ನ, ಬೆಳ್ಳಿ ದರ; ಚಿನ್ನಾಭರಣ ಖರೀದಿಸುವುದಾದರೆ ಯೋಚಿಸಬಹುದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 24, 2021 | 8:58 AM

Share

Gold Silver Price Today | ಬೆಂಗಳೂರು: ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಚಿನ್ನ, ಬೆಳ್ಳಿ ದರ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಇಂದು ಗ್ರಾಹಕರಿಗೆ ಖುಷಿಯ ವಿಚಾರವೆಂದರೆ, ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ( ಸೆಪ್ಟೆಂಬರ್​ 24, ಶುಕ್ರವಾರ) ಚಿನ್ನ (Gold Price), ಬೆಳ್ಳಿ ದರ (Silver Price) ಇಳಿಕೆ ಆಗಿದೆ. ಅದೆಷ್ಟೋ ವರ್ಷಗಳಿಂದ ಆಭರಣ ಖರೀದಿಸಬೇಕು ಅಂದುಕೊಂಡು ಹಣ ಕೂಡಿಟ್ಟಿದ್ದರೆ, ಇಂದಿನ ಆಭರಣಗಳ ರೇಟ್​ ತಿಳಿದು, ಆ ಕುರಿತಾಗಿ ಯೋಚಿಸಬಹುದು. ಪ್ರಮುಖ ನಗರಗಳಲ್ಲಿ ಎಷ್ಟಿದೆ ಇಂದಿನ ಚಿನ್ನ, ಬೆಳ್ಳಿ ದರ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,600 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನದ ದರ 2,500 ರೂಪಾಯಿ ಇಳಿಕೆ ಕಂಡಿದ್ದು, 4,36,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,560 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,75,600 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,800 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಇಂದು ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 60,600 ರೂಪಾಯಿ ನಿಗದಿ ಆಗಿದೆ. ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 43,880 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,38,800 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,870 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,78,700 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,400 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿಯೂ ಸಹ ಇಳಿಕೆ ಆಗಿದ್ದು, 300 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 64,800 ರೂಪಾಯಿ ನಿಗದಿ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,750 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,500 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,500 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,900 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,99,000 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,800 ರೂಪಾಯಿ ಇಳಿಕೆ ಕಂಡು ಬಂದಿದೆ.

ಕಳೆದ ಒಂದು ವಾರದಿಂದ ಗಮನಿಸಿದಾಗ ಚಿನ್ನ, ಬೆಳ್ಳಿ ದರ ಇಳಿಕೆಯ ಹಾದಿ ಹಿಡಿದಿದೆ. ಇಂದು ಸಹ ಚಿನ್ನ, ಬೆಳ್ಳಿ ದರ ಇಳಿಕೆ ಆಗಿದ್ದು, ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆಯೇ, ಚೆನ್ನೈ, ಜೈಪುರ ಹೀಗೆ ಪ್ರಮುಖ ನಗರಗಳಲ್ಲಿ ಇಂದು ಆಭರಣದ ದರ ಇಳಿಕೆ ಆಗಿದೆ. ಅದೆಷ್ಟೋ ವರ್ಷಗಳಿಂದ ಚಿನ್ನಾಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಆ ಕುರಿತಾಗಿ ಯೋಚಿಸಬಹುದು.

ಇದನ್ನೂ ಓದಿ:

Gold Price Today: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್; ಮತ್ತಷ್ಟು ಇಳಿಕೆ ಕಂಡ ಚಿನ್ನ, ಬೆಳ್ಳಿ ದರ

Gold Price Today: 6 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದಿದೆ ಚಿನ್ನದ ದರ; ಆಭರಣ ಖರೀದಿಸಲು ಸೂಕ್ತ ಸಮಯವೇ?

(Gold price go down today on 2021 September 24 check silver price in Bangalore Delhi Mumbai and minor city)

Published On - 8:46 am, Fri, 24 September 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್