AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಚಿನ್ನ, ಬೆಳ್ಳಿ ದರ ಇಂದೂ ಕುಸಿತ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ

Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಇಂದೂ ಕುಸಿತ; ಪ್ರಮುಖ ನಗರಗಳ ದರ ವಿವರ ಇಲ್ಲಿ ನೋಡಿ
ಚಿನ್ನದ ದರ (ಸಾಂದರ್ಭಿಕ ಚಿತ್ರ)Image Credit source: PTI
TV9 Web
| Edited By: |

Updated on: Dec 17, 2022 | 5:10 AM

Share

Gold Silver Price in Bangalore | ಬೆಂಗಳೂರು: ಹಿಂದಿನ ದಿನ ಭಾರೀ ಕುಸಿತ ಕಂಡಿದ್ದ ಬೆಳ್ಳಿ ಹಾಗೂ ಚಿನ್ನದ ದರ ಇಂದೂ ಅದೇ ಹಾದಿಯಲ್ಲಿ ಮುಂದುವರಿದಿವೆ. ದೇಶದ ಬುಲಿಯನ್ ಮಾರುಕಟ್ಟೆಯಲ್ಲಿ ಎರಡೂ ಲೋಹಗಳ ದರ ಸತತ ಎರಡನೇ ದಿನ ಇಳಿಕೆಯಾಗಿದೆ. 1 ಕೆಜಿ ಬೆಳ್ಳಿಯ ಬೆಲೆ 1,000 ರೂ. ಇಳಿಕೆಯಾದರೆ, 22 ಕ್ಯಾರೆಟ್​​ನ 10 ಗ್ರಾಂ ಚಿನ್ನದ ದರ 290 ರೂ. ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ ಬೆಳ್ಳಿ ಬೆಲೆ 1,700 ರೂ. ಕುಸಿದಿದ್ದರೆ ಚಿನ್ನದ ದರ 310 ರೂ. ಇಳಿಕೆಯಾಗಿತ್ತು. ಆದಾಗ್ಯೂ, ದೇಶೀಯ ಮಾರುಕಟ್ಟೆಗೂ ವಿವಿಧ ರಾಜ್ಯಗಳ ನಗರಗಳ ಚಿನ್ನ, ಬೆಳ್ಳಿ ದರಕ್ಕೂ ತುಸು ವ್ಯತ್ಯಾಸ ಇರುತ್ತದೆ. ‘ಪಿಟಿಐ’ ಸುದ್ದಿಸಂಸ್ಥೆ ವರದಿಯ ಪ್ರಕಾರ, ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ದರ 10 ಗ್ರಾಂಗೆ 107 ರೂ. ಹೆಚ್ಚಾಗಿ 54,222 ರೂ. ಆಗಿದೆ. ಬೆಳ್ಳಿಯ ದರ ಕೆಜಿಗೆ 120 ರೂ. ಇಳಿಕೆಯಾಗಿ 68,001 ಆಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 290 ರೂ. ಇಳಿಕೆಯಾಗಿ 49,700 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 310 ರೂ. ಕುಸಿದು 54,220 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 1,000 ರೂ. ಕುಸಿತವಾಗಿ 69,500 ರೂಪಾಯಿ ಆಗಿದೆ.

ಇದನ್ನೂ ಓದಿ: Gold Price Today: ಬೆಳ್ಳಿ ಬೆಲೆ ಭಾರೀ ಕುಸಿತ, ಚಿನ್ನದ ದರವೂ ಇಳಿಕೆ; ಬೆಂಗಳೂರಿನಲ್ಲಿ ಎಷ್ಟಿದೆ?

ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ – 50,450 ರೂ.
  • ಮುಂಬೈ- 49,700 ರೂ.
  • ದೆಹಲಿ- 49,850 ರೂ.
  • ಕೊಲ್ಕತ್ತಾ- 49,700 ರೂ.
  • ಬೆಂಗಳೂರು- 49,750 ರೂ.
  • ಹೈದರಾಬಾದ್- 49,700 ರೂ.
  • ಕೇರಳ- 49,700 ರೂ.
  • ಪುಣೆ- 49,700 ರೂ.
  • ಮಂಗಳೂರು- 49,750 ರೂ.
  • ಮೈಸೂರು- 49,750 ರೂ.

ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

  • ಚೆನ್ನೈ- 55,040 ರೂ.
  • ಮುಂಬೈ- 54,220 ರೂ.
  • ದೆಹಲಿ- 54,380 ರೂ.
  • ಕೊಲ್ಕತ್ತಾ- 54,220 ರೂ.
  • ಬೆಂಗಳೂರು- 54,280 ರೂ.
  • ಹೈದರಾಬಾದ್- 54,220 ರೂ.
  • ಕೇರಳ- 54,220 ರೂ.
  • ಪುಣೆ- 54,220 ರೂ.
  • ಮಂಗಳೂರು- 54,280 ರೂ.
  • ಮೈಸೂರು- 54,280 ರೂ.

ಇಂದಿನ ಬೆಳ್ಳಿಯ ದರ:

ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;

  • ಬೆಂಗಳೂರು- 72,500 ರೂ.
  • ಮೈಸೂರು- 72,500 ರೂ.
  • ಮಂಗಳೂರು- 72,500 ರೂ.
  • ಮುಂಬೈ- 69,500 ರೂ.
  • ಚೆನ್ನೈ- 72,500 ರೂ.
  • ದೆಹಲಿ- 69,500 ರೂ.
  • ಹೈದರಾಬಾದ್- 72,500 ರೂ.
  • ಕೊಲ್ಕತ್ತಾ- 69,500 ರೂ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ