Gold Silver Price in Bangalore | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ ಹಿಂದಿನ ದಿನದ ವಹಿವಾಟಿನಲ್ಲಿ ಕುಸಿದಿದ್ದ ಚಿನ್ನದ ದರ ಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ಹಿಂದಿನ ದಿನ ತುಸು ಏರಿಕೆ ದಾಖಲಿಸಿದ್ದ ಬೆಳ್ಳಿ ದರ ಇಂದು ತುಸು ಇಳಿಕೆಯಾಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿಯಲ್ಲಿದ್ದರೆ, 1 ಕೆಜಿ ಬೆಳ್ಳಿಯ ಬೆಲೆ 200 ರೂ. ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 350 ರೂ. ಇಳಿಕೆಯಾದರೆ, 1 ಕೆಜಿ ಬೆಳ್ಳಿಯ ಬೆಲೆ 500 ರೂ. ಹೆಚ್ಚಾಗಿತ್ತು. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡು 49,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡು 54,110 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 200 ರೂ. ಕುಸಿದು 69,300 ರೂಪಾಯಿ ಆಗಿದೆ.
ಇದನ್ನೂ ಓದಿ: Gold Bonds: ಸಾವರಿನ್ ಗೋಲ್ಡ್ ಬಾಂಡ್ ಬಿಡುಗಡೆ ಮಾಡಿದ ಆರ್ಬಿಐ; ಆನ್ಲೈನ್ನಲ್ಲಿ ಹೀಗೆ ಖರೀದಿಸಿ
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ