Gold Silver Price in Bangalore | ಬೆಂಗಳೂರು: ಹಿಂದಿನ ದಿನದ ವಹಿವಾಟಿನಲ್ಲಿ ಕುಸಿತ ಕಂಡಿದ್ದ ಚಿನ್ನ (Gold Rate) ಮತ್ತು ಬೆಳ್ಳಿಯ ದರ (Silver Price) ಇಂದು ಏರಿಕೆಯಾಗಿದೆ. ಈ ಮಧ್ಯೆ, ಮಲ್ಟಿ ಕಮಾಡಿಟಿ ಮಾರುಕಟ್ಟೆಯಲ್ಲಿ (MCX) ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, 10 ಗ್ರಾಂಗೆ 58,060 ರೂ. ಆಗಿದೆ. ಕೇಂದ್ರ ಸರ್ಕಾರವು ಬಜೆಟ್ನಲ್ಲಿ ಚಿನ್ನ ಹಾಗೂ ಬೆಳ್ಳಿ ಮೇಲಿನ ಆಮದು ಸುಂಕವನ್ನು ಹೆಚ್ಚಿಸಿರುವುದರಿಂದ ಮುಂದಿನ ಹಣಕಾಸು ವರ್ಷದಲ್ಲಿ ಉಭಯ ಲೋಹಗಳ ದರದಲ್ಲಿ ತುಸು ಹೆಚ್ಚಳವಾಗುವ ಸಾಧ್ಯತೆ ಇದೆ. ಇಂದು 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 250 ರೂ. ಹೆಚ್ಚಾದರೆ, 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 280 ರೂ. ಏರಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 1000 ರೂ. ಏರಿಕೆಯಾಗಿದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 250 ರೂ. ಹೆಚ್ಚಾಗಿ 52,750 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 280 ರೂ. ಏರಿಕೆಯಾಗಿ 57,550 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 100 ರೂ. ಏರಿಕೆಯಾಗಿ 73,300 ರೂ. ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;