Gold Silver Price in Bangalore | ಬೆಂಗಳೂರು: ಸತತ ಎರಡು ದಿನಗಳಿಂದ ಭಾರೀ ಏರಿಕೆ ದಾಖಲಿಸಿದ್ದ ಚಿನ್ನ ಹಾಗೂ ಬೆಳ್ಳಿ ದರ ಇಂದು ತುಸು ಇಳಿಕೆಯಾಗಿದ್ದು, ಆಭರಣ ಪ್ರಿಯರಿಗೆ, ಚಿನ್ನದ ಮೇಲಿನ ಹೂಡಿಕೆದಾರರಿಗೆ ಸ್ವಲ್ಪ ಮಟ್ಟಿನ ರಿಲೀಫ್ ನೀಡಿದೆ. ದೇಶದ ಕೆಲವು ನಗರಗಳಲ್ಲಿ ಹಿಂದಿನ ದಿನದ ವಹಿವಾಟಿನಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 60,000 ರೂ. ಗಡಿ ದಾಟಿತ್ತು. ಬೆಂಗಳೂರಿನಲ್ಲೂ ದರ ಹೆಚ್ಚಳವಾಗಿತ್ತು. ಇಂದು 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 500 ರೂ. ಇಳಿಕೆಯಾದರೆ, 24 ಕ್ಯಾರೆಟ್ ಚಿನ್ನದ ಬೆಲೆ 540 ರೂ. ಇಳಿಕೆಯಾಗಿದೆ. 1 ಕೆಜಿ ಬೆಳ್ಳಿ ಬೆಲೆ 900 ರೂ. ಇಳಿಕೆಯಾಗಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿ ನೀಡಲಾಗಿದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, 22 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 500 ರೂ. ಇಳಿಕೆಯಾಗಿ 53,100 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 540 ರೂ. ಕುಸಿದು 57,930 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 900 ರೂ. ಇಳಿಕೆಯಾಗಿ 73,800 ರೂ. ಆಗಿದೆ.
ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.
ಪ್ರಮುಖ ನಗರಗಳ 1 ಕೆಜಿ ಬೆಳ್ಳಿ ದರ ಹೀಗಿದೆ;