Gold Silver Rate Today | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನಾಭರಣದ ಬೆಲೆ ಏರುತ್ತಲೇ ಇದೆ. ಇಂದು ಸಹ ಆಭರಣದ ಬೆಲೆ ಕೊಂಚ ಏರಿಕೆ ಕಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನ (Gold Price) ಏರಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನಕ್ಕೆ 100 ರೂಪಾಯಿ ಏರಿಕೆ ಕಂಡು ಬಂದಿದೆ. ಆ ಮೂಲಕ 4,40,100 ರೂಪಾಯಿ ಆಗಿದೆ. ಬೆಂಗಳೂರು ನಗರದಲ್ಲಿ ಬೆಳ್ಳಿ ದರ (Silver Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಕೆಜಿ ಬೆಳ್ಳಿಗೆ 63,200 ರೂಪಾಯಿ ನಿಗದಿಯಾಗಿದೆ.
ಆಭರಣ ಅಂದ್ರೆ ಎಲ್ಲರಿಗೂ ಇಷ್ಟ. ಅದೇ ರೀತಿ ಆಭರಣ ತೊಟ್ಟು ಸಂತೋಷ ಪಡುವುದೊಂದೇ ಅಲ್ಲ. ಚಿನ್ನ ಖರೀದಿಸಿ ಕಷ್ಟ ಕಾಲದಲ್ಲಿ ನೆರವಾಗುತ್ತದೆ ಎಂಬ ನಂಬಿಕೆಯ ಆಚರಣೆ ಇಂದಿಗೂ ಇದೆ. ಅದರಲ್ಲಿಯೂ ಭಾರತೀಯರಿಗೆ ಚಿನ್ನದ ಮೇಲೆ ಒಲವು ಕೊಂಚ ಜಾಸ್ತಿ. ಹಾಗಾಗಿಯೇ ಭಾರತದಲ್ಲಿ ಆಭರಣಕ್ಕೆ ಬೇಡಿಕೆ ಹೆಚ್ಚಾಗಿದೆ.
ಚಿನ್ನ, ಬೆಳ್ಳಿ ದರ ವಿವರ
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,010 ರೂಪಾಯಿ ಹಾಗೂ 100 ಗ್ರಾ ಚಿನ್ನದ ದರ 4,40,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,010 ರೂಪಾಯಿ ಹಾಗೂ 100 ಗ್ರಾಂ ಚಿನ್ನ 4,80,100 ರೂಪಾಯಿಗೆ ಏರಿಕೆ ಆಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,360 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,43,600 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಏರಿಕೆಯಲ್ಲಿ 100 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,390 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,83,900 ರೂಪಾಯಿ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 68,200 ರೂಪಾಯಿ ಇದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,160 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,61,600 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,360 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರದಲ್ಲಿ 100 ರೂಪಾಯಿ ಏರಿಕೆ ಬಳಿಕ 5,03,600 ರೂಪಾಯಿ ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?
Gold Rate Today: ಗ್ರಾಹಕರಿಗೆ ಗುಡ್ ನ್ಯೂಸ್; ಸತತ ನಾಲ್ಕು ದಿನಗಳಿಂದ ಇಳಿಕೆಯತ್ತ ಸಾಗಿದ ಚಿನ್ನದ ದರ!
Published On - 8:35 am, Mon, 16 August 21