Gold Rate Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ವಿವರ ಮಾಹಿತಿ ಇಲ್ಲಿದೆ

Gold Price Today: ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ

Gold Rate Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ವಿವರ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Digi Tech Desk

Updated on:Aug 17, 2021 | 9:01 AM

Gold Silver Rate Today | ಬೆಂಗಳೂರು: ಕಳೆದ ಐದು ದಿನಗಳಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಲೇ ಇತ್ತು. ಇಂದು ( ಆಗಸ್ಟ್ 17, ಮಂಗಳವಾರ) ಚಿನ್ನದ ದರ (Gold Price) ಸ್ಥಿರತೆಯನ್ನು ಕಾಯ್ದುಕೊಂಡಿದೆ. ಬೆಳ್ಳಿ ದರ (Silver Price) ಕೊಂಚ ಇಳಿಕೆಯತ್ತ ಸಾಗಿದೆ. ನೀವು ಕೂಡಿಟ್ಟ ಹಣದಲ್ಲಿ ಆಭರಣ ಕೊಳ್ಳುವ ಕುರಿತಾದ ಯೋಚನೆ ಇದ್ದರೆ ಇಂದು ಖರೀದಿಸಬಹುದು. ಪ್ರಮುಖ ನಗರಗಳ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಚಿನ್ನ ಅಂದ್ರೆ ಭಾರತೀಯರಿಗೆ ಕೊಂಚ ಜಾಸ್ತಿಯೇ ಪ್ರೀತಿ. ಮನೆಯಲ್ಲಿ ಹಬ್ಬ-ಹರಿದಿನಗಳ ಸಾಲು ಬಂದ್ರೆ ಮೊದಲು ಯೋಚಿಸುವುದೇ ಚಿನ್ನಾಭರಣ ಖರೀದಿಸುವ ಕುರಿತು. ಹಾಗಿರುವಾಗ ಚಿನ್ನದ ಬೆಲೆ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆಯೂ ತಪ್ಪಲ್ಲ. ಆದರೆ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನಾಭರಣ ಬೆಲೆ ಏರಿಳಿತ ಕಾಣುತ್ತಿರುವುದು ಸಹಜ. ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ತಿಳಿಯಿರಿ. ಬಳಿಕ ಆಭರಣ ಕೊಳ್ಳುವತ್ತ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,010 ರೂಪಾಯಿ ಇದೆ. ಅದೇ ರೀತಿ 100 ಗ್ರಾಂ ಚಿನ್ನದ ದರ 4,40,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,010 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,80,100 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 62,700 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ ಚಿನ್ನದ ದರ ಇಂದು ಕೊಂಚ ಏರಿಕೆಯಾಗಿದೆ. ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,480 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,44,800 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 1,200 ರೂಪಾಯಿ ಏರಿಕೆ ಕಂಡು ಬಂದಿದೆ. ಅದೆ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,530 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,85,300 ರೂಪಾಯಿ ಇದೆ. ಸುಮಾರು 1,400 ರೂಪಾಯಿ ಏರಿಕೆಯಾಗಿದೆ. ಹಾಗೆಯೇ ಕೆಜಿ ಬೆಳ್ಳಿಗೆ 68,200 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,160 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,61,600 ರೂಪಾಯಿ ಇದೆ. ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,360 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,03,600 ರೂಪಾಯಿ ಇದೆ. ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ಇಳಿಕೆ ಕಂಡು ಬಂದಿದ್ದು, 62,700 ರೂಪಾಯಿ ನಿಗದಿಯಾಗಿದೆ.

ಬೆಂಗಳೂರು, ದೆಹಲಿ, ಸೇರಿದಂತೆ ಹೈದರಾಬಾದ್, ಮುಂಬೈ, ಕೇರಳ, ಜೈಪುರ, ಕೋಲ್ಕತ್ತಾ ನಗರಗಳಲ್ಲಿಯೂ ಸಹ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಜತೆಗೆ ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡು ಬಂದಿದೆ. ಅದೆಷ್ಟೋ ವರ್ಷಗಳಿಂದ ಚಿನ್ನ ಖರೀದಿಸಬೇಕು ಎಂದು ಹಣ ಕೂಡಿಟ್ಟಿದ್ದರೆ, ಸರಿ ಹೊಂದುವುದಾದರೆ ಆಭರಣ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಇದನ್ನೂ ಓದಿ:

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Rate Today: ಗ್ರಾಹಕರಿಗೆ ಗುಡ್​ ನ್ಯೂಸ್​; ಸತತ ನಾಲ್ಕು ದಿನಗಳಿಂದ ಇಳಿಕೆಯತ್ತ ಸಾಗಿದ ಚಿನ್ನದ ದರ!

Published On - 8:39 am, Tue, 17 August 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ