Gold Price Today: ಏರಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವ ಪ್ಲಾನ್ ಇದ್ದರೆ ದರ ವಿವರ ಪರಿಶೀಲಿಸಿ

Gold Silver Rate Today, 19th August: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,300 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,20,000 ರೂಪಾಯಿಗೆ ಏರಿದೆ. ದೈನಂದಿನ ದರ ಬದಲಾವಣೆಯಲ್ಲಿ 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

Gold Price Today: ಏರಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಇಳಿಕೆ; ಆಭರಣ ಖರೀದಿಸುವ ಪ್ಲಾನ್ ಇದ್ದರೆ ದರ ವಿವರ ಪರಿಶೀಲಿಸಿ
ಸಾಂದರ್ಭಿಕ ಚಿತ್ರ
Edited By:

Updated on: Aug 19, 2021 | 12:00 PM

Gold Silver Rate Today | ಬೆಂಗಳೂರು: ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆಯತ್ತ ಸಾಗುತ್ತಿದೆ. ಇಂದು (ಆಗಸ್ಟ್ 19, ಗುರವಾರ) ಸಹ ಚಿನ್ನದ ದರ ಏರಿಕೆ ಕಂಡಿದೆ. ಇದು ಆಭರಣ ಪ್ರಿಯರಿಗೆ ಕೊಂಚ ಬೇಸರ ತಂದಿರುವ ವಿಚಾರ. ಆದರೆ ಇಂದು ಬೆಳ್ಳಿ ದರ ಇಳಿಕೆ ಕಂಡಿದೆ. ಕೈಯಲ್ಲಿ ಹಣವಿದ್ದಾಗ ಚಿನ್ನ ಖರೀದಿಸಿಟ್ಟು ಕೊಳ್ಳೋಣ ಎಂದು ಯೋಚಿಸುವುದು ಸಹಜ. ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನಕ್ಕೆ ಭಾರೀ ಬೇಡಿಕೆಯಂತೂ ಇದೆ. ಹಾಗಿರುವಾಗ ಆಭರಣದ ಬೆಲೆ ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,300 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,20,000 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,330 ರೂಪಾಯಿಗೆ ರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,83,300 ರೂಪಾಯಿಗೆ ಏರಿದೆ. ಸುಮಾರು 1,100 ರೂಪಾಯಿಯಷ್ಟು ಹೆಚ್ಚಳವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು ಕೆಜಿ ಬೆಳ್ಳಿ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಬಳಿಕ 63,500 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,640 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,46,400 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,700 ರೂಪಾಯಿಗೆ ಏರಿದೆ. 100 ಗ್ರಾಂ ಚಿನ್ನದ ದರ 4,87,000 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, 400 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 68,200 ರೂಪಾಯಿಗೆ ಇಳಿಕೆಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,450 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,64,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,000 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,660 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,06,600 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿಗೆ 63,500 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Rate Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ಆಭರಣ ದರ ವಿವರ ಮಾಹಿತಿ ಇಲ್ಲಿದೆ

Gold Rate Today: ಚಿನ್ನ ದರ ಕೊಂಚ ಏರಿಕೆ, ಬೆಳ್ಳಿ ದರ ಇಳಿಕೆ; ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Published On - 8:43 am, Thu, 19 August 21

TV9 Web

TV9 Kannada

Read More
Loading...
Unable to load recommendations.
Follow Us