Gold Silver Rate Today |ಬೆಂಗಳೂರು: ಚಿನ್ನದ ದರ ನಿನ್ನೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಇಂದು (ಆಗಸ್ಟ್ 21, ಶನಿವಾರ) ಚಿನ್ನದ ದರ (Gold Price) ಏರಿಕೆ ಕಂಡಿದೆ. ಇದು ಆಭರಣ ಪ್ರಿಯರಿಗೆ ಕೊಂಚ ಬೇಸರ ತಂದಿರುವ ವಿಚಾರ. ಆದರೆ ಇಂದು ಬೆಳ್ಳಿ ದರ (Silver Price) ಇಳಿಕೆ ಕಂಡಿದೆ. ಕೈಯಲ್ಲಿ ಹಣವಿದ್ದಾಗ ಚಿನ್ನ ಖರೀದಿಸಿಟ್ಟು ಕೊಳ್ಳೋಣ ಎಂದು ಯೋಚಿಸುವುದು ಸಹಜ. ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನಕ್ಕೆ ಭಾರೀ ಬೇಡಿಕೆಯಂತೂ ಇದೆ. ಹಾಗಿರುವಾಗ ಆಭರಣದ ಬೆಲೆ ಎಷ್ಟಿದೆ ಎಂಬ ಕುತೂಹಲ ಇದ್ದೇ ಇರುತ್ತದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,42,500 ರೂಪಾಯಿಗೆ ಏರಿದೆ. ದೈನಂದಿನ ದರ ಏರಿಕೆಯಲ್ಲಿ 1,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,280 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,82,800 ರೂಪಾಯಿಗೆ ಏರಿದೆ. ಸುಮಾರು 1,800 ರೂಪಾಯಿಯಷ್ಟು ಹೆಚ್ಚಳವಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆಯಲ್ಲಿ 300 ರೂಪಾಯಿ ಇಳಿಕೆ ಬಳಿಕ 62,200 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,650 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,46,500 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 1,600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,710 ರೂಪಾಯಿಗೆ ಏರಿದೆ. 100 ಗ್ರಾಂ ಚಿನ್ನದ ದರ 4,87,100 ರೂಪಾಯಿಗೆ ಏರಿಕೆಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 1,700 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, 400 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 67,000 ರೂಪಾಯಿಗೆ ಇಳಿಕೆಯಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50, 620 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,06,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,500 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,620 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,06,200 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿಗೆ 62,200 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Price Today: ಚಿನ್ನಾಭರಣ ಪ್ರಿಯರಿಗೆ ಗುಡ್ ನ್ಯೂಸ್; ವರಮಹಾಲಕ್ಷ್ಮೀ ವಿಶೇಷದಂದು ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ