Gold Silver Price Today | ಬೆಂಗಳೂರು: ಕಳೆದ ವಾರದ ಪ್ರಾರಂಭದಲ್ಲಿ ಚಿನ್ನ (Gold Price), ಬೆಳ್ಳಿ ದರಗಳೆರಡೂ ಸಹ ಇಳಿಕೆ ಕಂಡಿತ್ತು. ಇಂದು ( ಸೆಪ್ಟೆಂಬರ್ 6, ಸೋಮವಾರ) ಚಿನ್ನ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಅದೇ ರೀತಿ ನಿನ್ನೆ ಕೂಡಾ ಆಭರಣಗಳ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು. ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ? ಎಂಬ ಮಾಹಿತಿ ಈ ಕೆಳಗಿನಂತಿದೆ.
ಸಾಮಾನ್ಯವಾಗಿ ಆಭರಣ ಖರೀದಿಸುವಾಗ ದರ ಕೊಂಚ ಇಳಿಕೆಯತ್ತ ಸಾಗಿದ್ದರೆ ಒಳ್ಳೆಯದು ಎಂಬ ಭಾವನೆ ತಪ್ಪಲ್ಲ. ಕಷ್ಟಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಪದ್ಧತಿ ಮೊದಲಿನಿಂದಲೂ ಬಂದಿದೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನದ ದರ ಎಷ್ಟಿರಬಹುದು ಎಂಬ ಕುತೂಹಲ ಕೆರಳುವುದು. ಇದೊಂದೇ ಅಲ್ಲದೇ ಭಾರತದಲ್ಲಿ ಮದುವೆ ಸಮಾರಂಭಗಳು ಬಂದರೆ ಚಿನ್ನ ಖರೀದಿಸುವ ಸಂಪ್ರದಾಯವೂ ಇದೆ. ಜತೆಗೆ ಚಿನ್ನದ ಆಭರಣ ಎಂದರೆ ಮಹಿಳೆಯರಿಗೆ ಕೊಂಚ ಮೋಹ ಜಾಸ್ತಿಯೇ ಇರುವುದರಿಂದ ಚಿನ್ನಅಭರಣದ ಬೆಲೆ ಎಷ್ಟಿದೆ ಎಂಬ ಕುತೂಹಲ ಕೆರಳುತ್ತದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,510 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,45,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,560 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,85,600 ರೂಪಾಯಿ ಇದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಆಗಿದೆ. ಬೆಳ್ಳಿ ದರ ಸ್ಥಿರವಾಗಿದ್ದು, ಕೆಜಿ ಬೆಳ್ಳಿಗೆ 65,200 ರೂಪಾಯಿ ಇದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,970 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,49,700 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,060 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,90,600 ರೂಪಾಯಿ ಇದೆ. ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 69,600 ರೂಪಾಯಿ ನಿಗದಿ ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,410 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,64,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,410 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,74,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 65,200 ರೂಪಾಯಿ ನಿಗದಿಯಾಗಿದೆ.
ಮುಂಬೈ, ಬೆಂಗಳೂರು, ದೆಹಲಿ, ಚೆನ್ನೈ ಸೇರಿದಂತೆಯೇ ಜೈಪುರ, ಕೇರಳ ಹೈದರಾಬಾದ್ ನಗರಗಳಲ್ಲಿಯೂ ಸಹ ಚಿನ್ನಾಭರಣದ ಬೆಲೆ ಏರಿಕೆ ಆಗಿದೆ. ನಿನ್ನೆ ಸಹ ಚಿನ್ನದ ದರ ಏರಿಕೆ ಕಂಡಿತ್ತು. ಬೆಳ್ಳಿಯ ದರ ಇಂದು ಸ್ಥಿರವಾಗಿದ್ದು ನಿನ್ನೆಯ ದರವನ್ನೇ ಕಾಯ್ದುಕೊಂಡಿದೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿ ಆಭರಣಗಳನ್ನು ಖರೀದಿಸಬಹುದು ಎಂದೆನಿಸಿದರೆ ಆ ಕುರಿತಂತೆ ಯೋಚಿಸಬಹುದು.
ಇದನ್ನೂ ಓದಿ:
Gold Price Today: ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿ ಖರೀದಿಸುವುದಾದರೆ ದರ ವಿವರ ಪರಿಶೀಲಿಸಿ
Published On - 7:54 am, Mon, 6 September 21