Gold Silver Price Today | ಬೆಂಗಳೂರು: ನಿನ್ನೆ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡಿತ್ತು. ಆದರೆ ಇಂದು (ಆಗಸ್ಟ್ 28, ಶನಿವಾರ) ಚಿನ್ನದ ದರದಲ್ಲಿ ಏರಿಕೆಯಾಗಿದೆ. ಆದರೆ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಆ ಮೂಲಕ ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ ಕಂಡರೆ ಚಿನ್ನ(Gold Price) ಖರೀದಿಸಬಹುದು ಎಂದು ಯೋಚಿಸಿದ್ದ ಗ್ರಾಹಕರಿಗೆ ಬೇಸರ ತಂದಿದೆ. ಈ ವಾರದ ಪ್ರಾರಂಭದಿಂದಲೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ(Silver Price) ಏರಿಕೆ, ಇಳಿಕೆಯಾಗುತ್ತಲೇ ಇತ್ತು. ಅದರಂತೆ ಇಂದು ಕೂಡ ಚಿನ್ನದ ದರ ಏರಿಕೆಯತ್ತ ಮುಖಮಾಡಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,400 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,44,000 ರೂಪಾಯಿ ಇದೆ. ಸುಮಾರು 2,000 ರೂಪಾಯಿಯಷ್ಟು ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,440 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,84,400 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,840 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,48,400 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2,800 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,920 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,89,200 ರೂಪಾಯಿ ನಿಗದಿಯಾಗಿದೆ, ದೈನಂದಿನ ದರ ಬದಲಾವಣೆಯಲ್ಲಿ 3,100 ರೂಪಾಯಿ ಏರಿಕೆ ಕಂಡು ಬಂದಿದೆ.
ಬೆಳ್ಳಿ ದರ
ಬೆಳ್ಳಿ ದರ ಇಳಿಕೆ ಆಗಿದ್ದು, ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಗೆ 63,000 ರೂಪಾಯಿ ನಿಗದಿಯಾಗಿದೆ. ದೈನಂದಿನ ಬದಲಾವಣೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿ ದರದಲ್ಲಿ 100 ರೂಪಾಯಿ ಇಳಿಕೆ ಬಳಿಕ 67,900 ರೂಪಾಯಿ ನಿಗದಿ ಆಗಿದೆ.
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಹೈದರಾಬಾದ್ನಲ್ಲಿಯೂ ಚಿನ್ನಾಭರಣಗಳ ಬೆಲೆ ಏರಿಕೆ ಕಂಡಿದೆ. ಹೀಗಾಗಿ ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬೇಕು ಎಂದು ಯೋಚಿಸುತ್ತಿರುವವರು ಇಂದು ಆಭರಣ ಕೊಳ್ಳಲು ಮುಂದಾಗಬಹುದು.
ಇದನ್ನೂ ಓದಿ:
Gold Rate Today: ವಿವಿಧ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಚಿನ್ನ ದರ ಭಾರೀ ಇಳಿಕೆ; ಹೀಗಿದೆ ಬೆಲೆ