AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನ ಕೊಳ್ಳುವತ್ತ ಯೋಚಿಸಬಹುದು; ಬೆಲೆ ಅಲ್ಪವೇ ಏರಿಕೆಯಾಗಿದೆ ಅಷ್ಟೆ! ಪ್ರಮುಖ ನಗರಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Gold Rate Today: ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತದೆ ಎಂಬ ಭರವಸೆಯೊಂದಿಗೆ ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವತ್ತ ಯೋಚಿಸುತ್ತಾರೆ. ಹಾಗಿರುವಾಗ ಇಂದಿನ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ. ಬಳಿಕ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Rate Today: ಚಿನ್ನ ಕೊಳ್ಳುವತ್ತ ಯೋಚಿಸಬಹುದು; ಬೆಲೆ ಅಲ್ಪವೇ ಏರಿಕೆಯಾಗಿದೆ ಅಷ್ಟೆ! ಪ್ರಮುಖ ನಗರಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 21, 2021 | 9:59 AM

Share

Gold Silver Price Today: ಚಿನ್ನದ ದರ ಏರಿಳಿತ ಕಾಣುತ್ತಿರುವುದು ಸಹಜ. ಚಿನ್ನದ ದರ(Gold Price) ಇಳಿಕೆಕತ್ತ ಸಾಗಿದಾಗ ಆಭರಣ ಕೊಳ್ಳಬೇಕು ಎಂದೆನಿಸುವುದೂ ತಪ್ಪಲ್ಲ. ಕಳೆದ ಎರಡು ದಿನಗಳಿಂದ ಚಿನ್ನದ ದರ ಅಲ್ಪವೇ ಏರುತ್ತಿದೆ. ಇಂದು ( ಜುಲೈ 21 ಬುಧವಾರ) ಕೊಂಚ ಏರಿದೆ. ದೈನಂದಿನ ದರ ಬದಲಾವಣೆಯಲ್ಲಿ ಪರಿಶೀಲಿಸಿದಾಗ ಬೆಂಗಳೂರಿನಲ್ಲಿ 22 ಕ್ಯಾರೆಟ್​ 1 ಗ್ರಾಂ ಚಿನ್ನದ ದರದಲ್ಲಿ 1 ರೂಪಾಯಿ ಏರಿಕೆ ಕಂಡು ಬಂದಿದೆ. ಪ್ರಮುಖ ಎಲ್ಲಾ ನಗರಗಳಲ್ಲಿಯೂ ಕಳೆದ ಎರಡು ದಿನಗಳಿಂದ ಬೆಳ್ಳಿ ದರ(Silver Price) ಕೊಂಚ ಇಳಿಕೆ ಕಾಣುತ್ತಿದೆ. ಇಂದೂ ಸಹ ದರ ಇಳಿಕೆ ಕಂಡಿದೆ.

ಚಿನ್ನ ಖರೀದಿಸಬೇಕು ಎಂಬ ಆಸೆ ಎಲ್ಲರಿಗೂ ಇರುತ್ತದೆ. ಮಹಿಳೆಯರಂತೂ ಚಿನ್ನದ ಆಭರಣ ತೊಟ್ಟು ಸಂತೋಷದಿಂದ ಆಚರಣೆಗಳನ್ನು ಆಚರಿಸುತ್ತಾರೆ. ಅದರಲ್ಲಿಯೂ ಮದುವೆ ಸಮಾರಂಭಗಳು ಮನೆಯಲ್ಲಿದ್ದರೆ ಮೊದಲು ನೆನಪಾಗುವುದೇ ಚಿನ್ನದ ಸರ, ಬಳೆಗಳು. ಹೊಸ ಡಿಸೈನ್​ ಕಂಡಾಗ ನಮ್ಮ ಬಳಿಯೂ ಈ ತರಹದ ಬಳೆಗಳು ಇರಬೇಕಿತ್ತು ಎಂದೆನಿಸುವುದು ಸಹಜ. ಹಾಗಾಗಿಯೇ ಹಣವನ್ನು ಕೂಡಿಟ್ಟು ಆಭರಣ ಕೊಳ್ಳಲು ಮುಂದಾಗುತ್ತಾರೆ. ಇಷ್ಟೆಲ್ಲಾ ಆಸೆ ಇದ್ದಾಗ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ? ಎಂಬ ಕುತೂಹಲ ಇದ್ದೇ ಇರುತ್ತದೆ.

ಕೇವಲ ಆಭರಣಗಳನ್ನು ತೊಟ್ಟು, ಅಲಂಕಾರಗೊಂಡು ಖುಷಿ ಪಡುವುದು ಮಾತ್ರವಲ್ಲ. ಹೂಡಿಕೆಯ ದೃಷ್ಟಿಯಿಂದಲೂ ಚಿನ್ನ ಖರೀದಿಸಲಾಗುತ್ತದೆ. ಕಷ್ಟ ಕಾಲದಲ್ಲಿ ಸಹಾಯಕ್ಕೆ ಬರುತ್ತದೆ ಎಂಬ ಭರವಸೆಯೊಂದಿಗೆ ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವತ್ತ ಯೋಚಿಸುತ್ತಾರೆ. ಹಾಗಿರುವಾಗ ಇಂದಿನ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯಿರಿ. ಬಳಿಕ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಚಿನ್ನದ ದರ ವಿವರ

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,260 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ 4,52,600 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,380 ರೂಪಾಯಿ ನಿಗದಿ ಮಾಡಲಾಗಿದೆ. 100 ಗ್ರಾಂ ಚಿನ್ನದ ದರ 4,93,800 ರೂಪಾಯಿ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,410 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,74,100 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,720 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,17,200 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,670 ರೂಪಾಯಿ ಆಗಿದೆ. 100 ಗ್ರಾಂ ಚಿನ್ನದ ದರ 4,56,700 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,820 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,98,200 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಬೆಳ್ಳಿ ದರ ವಿವರ

ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ಬೆಲೆ 66,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 900 ರೂಪಾಯಿ ಇಳಿಕೆ ಕಂಡಿದೆ. ಚೆನ್ನೈನಲ್ಲಿ 500 ರೂಪಾಯಿ ಕುಸಿತದ ಬಳಿಕ ಕೆಜಿ ಬೆಳ್ಳಿ ಬೆಲೆ 71,800 ರೂಪಾಯಿಗೆ ಇಳಿಕೆಯಾಗಿದೆ. ದೆಹಲಿಯಲ್ಲಿ ಕೆಜಿ ಬೆಳ್ಳಿ ಬೆಲೆ 66,600 ರೂಪಾಯಿ ಇದೆ. ಅದೇ ರೀತಿ ಮುಂಬೈನಲ್ಲಿ 900 ರೂಪಾಯಿ ಇಳಿಕೆ ಬಳಿಕ ಕೆಜಿ ಬೆಳ್ಳಿ ಬೆಲೆ 66,600ರೂಪಾಯಿಗೆ ಇಳಿದಿದೆ. ಮುಂಬೈ, ಛಂಡೀಗಢ, ಹೈದರಾಬಾದ್​, ಕೇರಳ, ಕೋಲ್ಕತ್ತಾ, ಲಕ್ನೋ ನಗರಗಳಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ಅದೇ ರೀತಿ ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಚಿನ್ನದ ದರ ಏರಿಕೆ, ಬೆಳ್ಳಿ ದರ ಇಳಿಕೆ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು? ಮಾಹಿತಿ ಇಲ್ಲಿದೆ

Gold Rate Today: ಪ್ರೀತಿಪಾತ್ರರಿಗಾಗಿ ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ? ಚಿನ್ನದ ದರದಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ಪರಿಶೀಲಿಸಿ

(Gold Price increased Today on 2021 July 21 check silver price in Bangalore Delhi Mumbai and major city)

Published On - 9:00 am, Wed, 21 July 21

Follow Us
TV9 Web
TV9 Web

TV9 Kannada

Read More
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಗಳ ತಲೆ ಮೇಲೆ ಸಗಣಿ ನೀರು, ಕಸ: ವಿಡಿಯೋ ನೋಡಿ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ