AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ! ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ

Gold Rate Today: ಚಿನ್ನ, ಬೆಳ್ಳಿಯ ಆಭರಣ ಖರೀದಿಸಬೇಕು ಎಂದು ನೀವು ಯೋಚಿಸಿದ್ದರೆ, ಇಂದಿನ ಮಾರುಕಟ್ಟೆಯಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಪರಿಶೀಲಿಸಿ ಆ ಕುರಿತಾಗಿ ಯೋಚಿಸಿ.

Gold Price Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ! ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 15, 2021 | 7:38 AM

Share

Gold and Silver Price Today | ಬೆಂಗಳೂರು: ನಿನ್ನೆ ಕೆಲವೆಡೆ ಚಿನ್ನದ ದರ ಸ್ಥಿರವಾಗಿದ್ದರೆ, ಇನ್ನು ಕೆಲವೆಡೆ ಏರಿಕೆ ಕಂಡು ಬಂದಿತ್ತು. ಬೆಳ್ಳಿ ಬೆಲೆಯಲ್ಲಿಯೂ ಸಹ ಕೊಂಚ ಪ್ರಮಾಣದಲ್ಲಿ ಏರಿಕೆ ಆಗಿತ್ತು. ಆ ಬಳಿಕ ಇಂದು (ಅಕ್ಟೋಬರ್ 15, ಶುಕ್ರವಾರ) ಚಿನ್ನ (Gold Price), ಬೆಳ್ಳಿ ದರದಲ್ಲಿ (Silver Price) ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಪ್ರಮುಖ ನಗರಗಳಲ್ಲಿ ಎಷ್ಟಿದೆ ದರ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಚಿನ್ನ ಖರೀದಿಸಬೇಕು ಎಂದು ಮನಸ್ಸಿನಲ್ಲಿದ್ದರೂ ಸ್ವಲ್ಪ ಇಳಿಕೆಯಾಗಲೀ ಎಂಬ ಆಸೆ ಇರುವುದು ಸಹಜ. ಅದರಲ್ಲಿಯೂ ಮುಖ್ಯವಾಗಿ ಮಹಿಳೆಯರಿಗೆ ಚಿನ್ನ, ಬೆಳ್ಳಿಯ ಆಭರಣ ಎಂದರೆ ಹೆಚ್ಚು ಸಂತೋಷ, ಖುಷಿ. ಮನೆಯಲ್ಲಿ ಮದುವೆ ಸಮಾರಂಭಗಳು, ವಿಶೇಷದ ದಿನಗಳು ಬಂದರೆ ಚಿನ್ನ ಖರೀದಿಸುವತ್ತ ಮೊದಲು ಗಮನ ಸೆಳೆಯುವುದು. ಹಾಗಿರುವಾಗ ಚಿನ್ನ, ಬೆಳ್ಳಿಯ ಆಭರಣ ಖರೀದಿಸಬೇಕು ಎಂದು ನೀವು ಯೋಚಿಸಿದ್ದರೆ, ಇಂದಿನ ಮಾರುಕಟ್ಟೆಯಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಪರಿಶೀಲಿಸಿ ಆ ಕುರಿತಾಗಿ ಯೋಚಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿಗೆ ಏರಿಕೆಯಾಗಿದೆ. ಹಾಗೆಯೇ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,500 ರೂಪಾಯಿ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,000 ರೂಪಾಯಿ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 63,200 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,47,000 ರೂಪಾಯಿ ನಿಗದಿಯಾಗಿದೆ. ಸುಮಾರು 5,500 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,760 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,600 ರೂಪಾಯಿ ನಿಗದಿಯಾಗಿದೆ. ಸುಮಾರು 6,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 66,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,050 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,50,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 49,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,91,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,600 ರೂಪಾಯಿ ಏರಿಕೆಯಾಗಿದೆ. ಕೆಜಿ ಬೆಳ್ಳಿ ಬೆಲೆ 66,600 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 800 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇದನ್ನೂ ಓದಿ:

Gold Price Today: ವೀಕೆಂಡ್​ನಲ್ಲಿ ಆಭರಣ ಖರೀದಿಸಬೇಕು ಅಂದುಕೊಂಡಿದ್ದರೆ ಚಿನ್ನ, ಬೆಳ್ಳಿ ದರ ವಿವರ ಪರಿಶೀಲಿಸಿ

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Published On - 7:24 am, Fri, 15 October 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ