AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price on March 18: 4 ದಿನದ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 1,100 ರೂ. ಹೆಚ್ಚಳ

ಭಾರತದ ಅನೇಕ ನಗರಗಳಲ್ಲಿ 4 ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿತ್ತು. ಆದರೆ, ಇಂದು ಬಂಗಾರದ ದರ ಏರಿಕೆ ಕಂಡಿದೆ. ಒಂದೇ ದಿನದಲ್ಲಿ ಬೆಳ್ಳಿ ಬೆಲೆ 1,100 ರೂ. ಹೆಚ್ಚಳವಾಗಿದೆ.

Gold Price on March 18: 4 ದಿನದ ಬಳಿಕ ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಳ್ಳಿ ದರವೂ 1,100 ರೂ. ಹೆಚ್ಚಳ
ಚಿನ್ನ
TV9 Web
| Edited By: |

Updated on: Mar 18, 2022 | 6:02 AM

Share

ಬೆಂಗಳೂರು: ಮೂರ್ನಾಲ್ಕು ದಿನಗಳಿಂದ ಭಾರೀ ಕುಸಿತ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಮತ್ತೆ ಏರಿಕೆಯಾಗಿದೆ. ಚಿನ್ನದ ಮಾರುಕಟ್ಟೆ ಕೊಂಚ ಏರಿಕೆ ಕಂಡಿದ್ದು, ಇಂದು 10 ಗ್ರಾಂ ಚಿನ್ನಕ್ಕೆ 160 ರೂ. ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ನಿನ್ನೆಗಿಂತಲೂ ಇಂದು 1,100 ರೂ. ಏರಿಕೆ ಕಂಡಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದ ಅನೇಕ ನಗರಗಳಲ್ಲಿ 4 ದಿನಗಳಿಂದ ಚಿನ್ನದ ಬೆಲೆ ಕುಸಿತವಾಗಿತ್ತು. ಆದರೆ, ಇಂದು ಬಂಗಾರದ ದರ ಏರಿಕೆ ಕಂಡಿದೆ. ನಿನ್ನೆ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 47,300 ರೂ. ಇದ್ದುದು ಇಂದು 47,450 ರೂ.ಗೆ ಏರಿಕೆ ಕಂಡಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,600 ರೂ. ಇದ್ದುದು 51,760 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48.140 ರೂ. ಮುಂಬೈ- 47,450 ರೂ, ದೆಹಲಿ- 47,450 ರೂ, ಕೊಲ್ಕತ್ತಾ- 47,450 ರೂ, ಬೆಂಗಳೂರು- 47,450 ರೂ, ಹೈದರಾಬಾದ್- 47,450 ರೂ, ಕೇರಳ- 47,450 ರೂ, ಪುಣೆ- 47,480 ರೂ, ಮಂಗಳೂರು- 47,450 ರೂ, ಮೈಸೂರು- 47,450 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,510 ರೂ, ಮುಂಬೈ- 51,760 ರೂ, ದೆಹಲಿ- 51,760 ರೂ, ಕೊಲ್ಕತ್ತಾ- 51,760 ರೂ, ಬೆಂಗಳೂರು- 51,760 ರೂ, ಹೈದರಾಬಾದ್- 51,760 ರೂ, ಕೇರಳ- 51,760 ರೂ, ಪುಣೆ- 51,790 ರೂ, ಮಂಗಳೂರು- 51,760 ರೂ, ಮೈಸೂರು- 51,760 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಚಿನ್ನದ ಬೆಲೆ ಏರಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: ಒಂದೇ ದಿನದಲ್ಲಿ ಬೆಳ್ಳಿ ಬೆಲೆ 1,100 ರೂ. ಹೆಚ್ಚಳವಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 67,900 ರೂ. ಇದ್ದುದು 69,000 ರೂ. ಆಗಿದೆ. ಕುಸಿಯುತ್ತಲೇ ಇದ್ದ ಬೆಳ್ಳಿ ದರ ಇಂದು ಏರಿಕೆಯತ್ತ ಸಾಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,900 ರೂ, ಮೈಸೂರು- 72,900 ರೂ., ಮಂಗಳೂರು- 72,900 ರೂ., ಮುಂಬೈ- 69,000 ರೂ, ಚೆನ್ನೈ- 72,900 ರೂ, ದೆಹಲಿ- 69,000 ರೂ, ಹೈದರಾಬಾದ್- 72,900 ರೂ, ಕೊಲ್ಕತ್ತಾ- 69,000 ರೂ. ಇದೆ.

ಇದನ್ನೂ ಓದಿ: Gold Price Today: ಮೂರ್ನಾಲ್ಕು ದಿನಗಳಿಂದ ಚಿನ್ನದ ಬೆಲೆ ಇಳಿಕೆ; ಇಂದಿನ ಬೆಳ್ಳಿ ದರ ಹೀಗಿದೆ

Gold Price Today: 3 ದಿನಗಳಿಂದ ಸತತವಾಗಿ ಚಿನ್ನದ ಬೆಲೆ ಕುಸಿತ; ಬೆಳ್ಳಿ ದರದಲ್ಲೂ ಮತ್ತೆ ಇಳಿಕೆ

Follow Us
TV9 Web
TV9 Web

TV9 Kannada

Read More
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ