Gold Price Today: ಚಿನ್ನ ಖರೀದಿಸುವ ಪ್ಲ್ಯಾನ್​ ಇದೆಯಾ? ಇಂದು ಸಹ ಆಭರಣ ಬೆಲೆಯಲ್ಲಿ ಇಳಿಕೆ

Gold Price Today: ಕೈಯ್ಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವ ಪದ್ಧತಿ ಮೊದಲಿನಿಂದಲೂ ಬಂದಿದೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಎಂಬ ಕುತೂಹಲ ಕೆರಳುತ್ತದೆ.

Gold Price Today: ಚಿನ್ನ ಖರೀದಿಸುವ ಪ್ಲ್ಯಾನ್​ ಇದೆಯಾ? ಇಂದು ಸಹ ಆಭರಣ ಬೆಲೆಯಲ್ಲಿ ಇಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Sep 13, 2021 | 7:58 AM

Gold Silver Price Today | ಬೆಂಗಳೂರು: ಚಿನ್ನಾಭರಣ ಖರೀದಿಸಬೇಕು ಎಂಬ ಆಸೆ ಇರುವುದು ಸಹಜ. ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನಾಭರಣಕ್ಕೆ ಭಾರತದಲ್ಲಿ ಬೇಡಿಕೆಯೂ ಹೆಚ್ಚಿದೆ. ಮಹಿಳೆಯರಂತೂ ಚಿನ್ನ ಖರೀದಿಸಲು ತುದಿಗಾಲಿನಲ್ಲಿ ನಿಂತಿರುತ್ತಾರೆ. ಕೈಯ್ಯಲ್ಲಿ ಹಣವಿದ್ದಾಗ ಚಿನ್ನದ ಮೇಲೆ ಹೂಡಿಕೆ ಮಾಡುವ ಪದ್ಧತಿ ಮೊದಲಿನಿಂದಲೂ ಬಂದಿದೆ. ಹಾಗಾಗಿಯೇ ಪ್ರತಿನಿತ್ಯ ಚಿನ್ನ, ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುತೂಹಲ ಕೆರಳುತ್ತದೆ. ಇಂದು ( ಸೆಪ್ಟೆಂಬರ್ 13, ಸೋಮವಾರ) ಚಿನ್ನದ ದರ (Gold Price) ಇಳಿಕೆ ಕಂಡಿದೆ. ಆಭರಣ ಖರೀದಿಸುವತ್ತ ಯೋಚಿಸಬಹುದು.

ಮದುವೆ ಸಮಾರಂಭಗಳು ಎದುರಿಗಿದ್ದಾಗ ಚಿನ್ನ ಖರೀಸಬೇಕು ಅಂದುಕೊಂಡಿರುತ್ತೀರಿ. ಹಾಗಿರುವಾಗ ಇಂದು ಚಿನ್ನ, ಬೆಳ್ಳಿ ಖರೀದಿಸುವ ಕುರಿತಾಗಿ ಯೋಚಿಸಬಹುದು. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡು ಬಂದಿದೆ. ಕೆಲವೆಡೆ ಬೆಳ್ಳಿ ದರ ಕೊಂಚ ಏರಿಕೆ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರಕ್ಕೆ 43,990 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರಕ್ಕೆ 4,39,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರಕ್ಕೆ 47,990 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರಕ್ಕೆ 4,79,900 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 3,800 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,390 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,43,900 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,390 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,900 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿ ಇಳಿಕೆ ಕಂಡಿದೆ. ಬೆಳ್ಳಿ ದರ ಸ್ಥಿರವಾಗಿದ್ದು ಕೆಜಿ ಬೆಳ್ಳಿಗೆ 68,000 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,140 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿ ಇಳಿಕೆ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,03,400 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಾಯಿ ಇಳಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 64,200 ರೂಪಾಯಿ ಇದೆ.

ಬೆಂಗಳೂರು, ಮುಂಬೈ, ದೆಹಲಿ ಸೇರಿದಂತೆ ಚೆನ್ನೈ, ಜೈಪುರ, ಕೇರಳದಲ್ಲಿ ನಿನ್ನೆ ಸಹ ಆಭರಣದ ಬೆಲೆ ಇಳಿಕೆ ಕಂಡಿದ್ದು, ಇಂದು ಸಹ ಚಿನ್ನದ ದರ ಇಳಿಕೆ ಕಂಡಿದೆ. ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಬೆಳ್ಳಿ ದರ ಕೊಂಚ ಏರಿಕೆ ಆಗಿದೆ.

ಇದನ್ನೂ ಓದಿ:

Gold Rate Today: ಇಂದು ಸಹ ಏರಿಕೆಯಾದ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ!

Gold Rate Today: ಬೆಂಗಳೂರು ಸೇರಿದಂತೆ ಹಲವೆಡೆ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಏರಿಕೆ!

(Gold price today 0n 2021 September 13 check silver price in bangalore delhi mumbai and minor city)

Published On - 7:38 am, Mon, 13 September 21