Gold Price Today: ಗ್ರಾಹಕರೇ ಗಮನಿಸಿ! ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ದರದಲ್ಲಿ ಇಂದು ಇಳಿಕೆ

Gold Price Today: ಮದುವೆಯಂಥಹ ಸಂಭ್ರಮದ ದಿನದಂದು ಚಿನ್ನ ತೊಟ್ಟು ಅಲಂಕಾರಗೊಳ್ಳಬೇಕು ಎಂಬ ಆಸೆ ಇರಬಹುದು ಅಥವಾ ಅದೆಷ್ಟೋ ವರ್ಷಗಳಿಂದ ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಎಂಬ ಯೋಚನೆಯನ್ನೂ ಮಾಡಿರಬಹುದು. ಹಾಗಿರುವಾಗ ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

Gold Price Today: ಗ್ರಾಹಕರೇ ಗಮನಿಸಿ! ಏರಿಕೆಯಾಗಿದ್ದ ಚಿನ್ನ, ಬೆಳ್ಳಿ ದರದಲ್ಲಿ ಇಂದು ಇಳಿಕೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Sep 17, 2021 | 8:04 AM

Gold Silver Price Today | ಬೆಂಗಳೂರು: ನಿನ್ನೆ ಚಿನ್ನದ ದರದಲ್ಲಿ (Gold Price) ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿತ್ತು. ಇಂದು ( ಸೆಪ್ಟೆಂಬರ್​ 17, ಶುಕ್ರವಾರ) ಆಭರಣ ದರದಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಇದು ಗ್ರಾಹಕರಿಗೆ ಸಮಾಧಾನ ತರುವ ವಿಚಾರ. ಸಭೆ ಸಮಾರಂಭಗಳಿಗೆ, ಮದುವೆಯಂಥಹ ಸಂಭ್ರಮದ ದಿನದಂದು ಚಿನ್ನ ತೊಟ್ಟು ಅಲಂಕಾರಗೊಳ್ಳಬೇಕು ಎಂಬ ಆಸೆ ಇರಬಹುದು ಅಥವಾ ಅದೆಷ್ಟೋ ವರ್ಷಗಳಿಂದ ಕೂಡಿಟ್ಟ ಹಣದಲ್ಲಿ ಚಿನ್ನಾಭರಣ ಖರೀದಿಸಬೇಕು ಎಂಬ ಯೋಚನೆಯನ್ನೂ ಮಾಡಿರಬಹುದು. ಹಾಗಿರುವಾಗ ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ (Silver Price) ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,40,000 ರೂಪಾಯಿಗೆ ಇಳಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾ ಚಿನ್ನಕ್ಕೆ 48,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,000 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿಯೂ ಸಹ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 62,800 ರೂಪಾಯಿ ನಿಗದಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,000 ರೂಪಾಯಿ ಇಳಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಜೆ 4,38,300 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 3,300 ರೂಪಾಯಿ ಇಳಿಕೆ ಆಗಿದೆ. ಚೆನ್ನೈನಲ್ಲಿ ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,800 ರೂಪಾಯಿ ನಿಗದಿಯಾಗಿದೆ. ಸುಮಾರು 100 ರೂಪಅಯಿಯಷ್ಟು ಏರಿಕೆ ಆಗಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,40,000 ರೂಪಾಯಿ ನಿಗದಿಯಾಗಿದೆ. ಸುಮಾರು 3,000 ರೂಪಾಯಿ ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,80,000 ರೂಪಾಯಿ ನಿಗದಿಯಾಗಿದೆ. ಸುಮಾರು 3,300 ರೂಪಾಯಿ ಇಳಿಕೆ ಆಗಿದೆ.

ಇದನ್ನೂ ಓದಿ:

Gold Price Today: ಇಂದು ಸಹ ಸ್ಥಿರತೆಯಲ್ಲಿದೆ ಚಿನ್ನದ ಬೆಲೆ, ಇಳಿಕೆಯ ಹಾದಿ ಹಿಡಿದ ಬೆಳ್ಳಿ ದರ; ನಿಮ್ಮೂರಿನಲ್ಲಿ ಎಷ್ಟಿದೆ ಆಭರಣ ದರ ಪರಿಶೀಲಿಸಿ

Gold Price Today: ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಸ್ಥಿರ, ಬೆಳ್ಳಿ ದರದಲ್ಲಿ ಕೊಂಚ ಇಳಿಕೆ!

(Gold price today 0n 2021 September 17 check silver price in Bangalore Delhi Mumbai and minor city)

Published On - 7:52 am, Fri, 17 September 21