Gold Price Today: ಇಂದು ಬೆಂಗಳೂರಿನಲ್ಲಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ

Gold Rate Today: ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಂದು ಆಭರಣದ ದರ ಇಳಿದಿದೆಯೋ? ಇಲ್ಲವೋ? ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

Gold Price Today: ಇಂದು ಬೆಂಗಳೂರಿನಲ್ಲಿ ಇಳಿಕೆ ಕಂಡ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ
ಸಂಗ್ರಹ ಚಿತ್ರ

Gold And Silver Price Today| ಬೆಂಗಳೂರು: ಇಂದು ರಾಜ್ಯದ ರಾಜಧಾನಿಯಲ್ಲಿ ಚಿನ್ನದ ದರದಲ್ಲಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ (Silver Price) ಯಾವುದೇ ಏರಿಳಿತ ಕಂಡು ಬಂದಿಲ್ಲ. ಹಾಗಿರುವಾಗ ಇಂದು (ಅಕ್ಟೋಬರ್​ 17, ಭಾನುವಾರ) ಪ್ರಮುಖ ನಗರಗಳಲ್ಲಿ ಚಿನ್ನದ ದರ (Gold Price) ಎಷ್ಟಿದೆ? ಇಳಿಕೆಯಾಗಿದೆಯೋ? ಇಲ್ಲವೋ? ಚಿನ್ನ ಖರೀದಿಸಲು ಸುಸಮಯವೇ? ಎಂಬೆಲ್ಲಾ ಕುರಿತಾದ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ. ಪರಿಶೀಲಿಸಿ. 

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,42,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 6,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,82,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಇಂದು ಕೊಂಚ ಇಳಿಕೆ ಕಂಡು ಬಂದಿದ್ದು, 6,500 ರೂಪಾಯಿಯಷ್ಟು ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 63,600 ರೂಪಾಯಿ ನಿಗದಿಯಾಗಿದೆ.

ಚೆನ್ನೈನಲ್ಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 44,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 5,000 ರೂಪಾಯಿ ಇಳಿಕೆ ಕಂಡು ಬಂದಿದೆ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 48,710 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,100 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 5,500 ರೂಪಾಯಿ ಇಳಿಕೆ ಕಂಡು ಬಂದಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿಗೆ 67,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿ ಇಳಿಕೆ ಕಂಡು ಬಂದಿದೆ.

ಚಿನ್ನ ಖರೀದಿಸುವಾಗ ದರ ಇಳಿಕೆಯತ್ತ ಸಾಗಿರಬೇಕು ಎಂಬ ಆಸೆ ಇದ್ದೇ ಇರುತ್ತದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಏರಿಳಿತ ಕಾಣುತ್ತಿರುವುದು ಸರ್ವೇ ಸಾಮಾನ್ಯ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನ, ಬೆಳ್ಳಿ ಖರೀದಿಸಬಹುದು ಎಂದೆನಿಸಿದರೆ ಆ ಕುರಿತಾಗಿ ಯೋಚಿಸಿ. ಬೆಂಗಳೂರು, ಚೆನ್ನೈ ಸೇರಿದಂತೆಯೇ ಹೈದರಾಬಾದ್​, ಜೈಪುರ, ದೆಹಲಿ ಹೀಗೆ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ದರ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಕೆಲವೆಡೆ ಸ್ಥಿರವಾಗಿದ್ದರೆ, ಇನ್ನು ಕೆಲವೆಡೆ ಇಳಿಕೆಯಾಗಿದೆ.

ಇದನ್ನೂ ಓದಿ:

Gold Price Today: ಚಿನ್ನ, ಬೆಳ್ಳಿ ದರದಲ್ಲಿ ಕೊಂಚ ಏರಿಕೆ; ಆಭರಣ ಖರೀದಿಗೆ ಮುಂದಾಗಿದ್ದರೆ ದರ ವಿವರ ಮಾಹಿತಿ ಇಲ್ಲಿದೆ

Gold Price Today: ಇಂದು ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ! ಪ್ರಮುಖ ನಗರಗಳಲ್ಲಿ ಎಷ್ಟಿದೆ ಬೆಲೆ ಎಂಬ ಮಾಹಿತಿ ಇಲ್ಲಿದೆ

Click on your DTH Provider to Add TV9 Kannada