AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಆಭರಣ ಕೊಳ್ಳುವ ಪ್ಲ್ಯಾನ್​ ಇದೆಯಾ? ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ

Gold Rate Today: ಕೇವಲ ಆಭರಣಕ್ಕೊಂದೇ ಅಲ್ಲದೇ ಹೂಡಿಕೆ ದೃಷ್ಟಿಯಿಂದಲೂ ಚಿನ್ನ ಖರೀದಿಸುವುದರಿಂದ ಬೆಲೆ ಎಷ್ಟಿದೆ? ಎಂಬ ಕುತೂಹಲ ಕೆರಳುತ್ತದೆ. ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold Price Today: ಆಭರಣ ಕೊಳ್ಳುವ ಪ್ಲ್ಯಾನ್​ ಇದೆಯಾ? ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Oct 20, 2021 | 7:40 AM

Share

Gold And Silver Price Today| ಬೆಂಗಳೂರು: ಹಬ್ಬದ ಸಂಭ್ರಮದಲ್ಲಿ ಅಥವಾ ಮದುವೆ ಸಮಾರಂಭಗಳಲ್ಲಿ ಚಿನ್ನ, ಬೆಳ್ಳಿಯ (Silver Price) ಆಭರಣ ತೊಟ್ಟು ಅಲಂಕಾರಗೊಳ್ಳುವುದೆಂದರೆ ಒಂದು ರೀತಿಯ ಹಬ್ಬದ ಮೆರುಗು ಹೆಚ್ಚಿಸಿದಂತೆ. ಮುಖ್ಯವಾಗಿ ಮಹಿಳೆಯರಿಗೆ ಚಿನ್ನದ ಮೇಲೆ ಕೊಂಚ ಹೆಚ್ಚಿನ ಮೋಹ ಎಂದರೆ ತಪ್ಪಾಗಲಾರದು. ಕೇವಲ ಆಭರಣಕ್ಕೊಂದೇ ಅಲ್ಲದೇ ಹೂಡಿಕೆ ದೃಷ್ಟಿಯಿಂದಲೂ ಚಿನ್ನ (Gold Price) ಖರೀದಿಸುವುದರಿಂದ ಬೆಲೆ ಎಷ್ಟಿದೆ? ಎಂಬ ಕುತೂಹಲ ಕೆರಳುತ್ತದೆ. ಇಂದು ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ ನಿನ್ನೆ ಚಿನ್ನದ ದರ ಕೊಂಚ ಪ್ರಮಾಣದಲ್ಲಿ ಏರಿಕೆ ಆಗಿತ್ತು. ಆ ಬಳಿಕ ಇಂದು ಸ್ಥಿರತೆಯನ್ನು ಕಾಯ್ದುಕೊಂಡಿದೆ. 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,300 ರೂಪಾಯಿ ಇದೆ. ಇನ್ನು ಬೆಳ್ಳಿ ಬೆಲೆಯಲ್ಲಿ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 64,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,46,500 ರೂಪಾಯಿ ಇದೆ. ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,710 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,87,100 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 300 ರೂಪಾಯಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿಯೂ ಸಹ ಕೊಂಚ ಏರಿಕೆ ಆಗಿದ್ದು, ಕೆಜಿ ಬೆಳ್ಳಿಗೆ 67,800 ರೂಪಾಯಿ ನಿಗದಿಯಾಗಿದೆ. ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಇನ್ನು, ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 44,300 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,43,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಯಾವುದೇ ಏರಿಳಿತಗಳಿಲ್ಲ. ಜತೆಗೆ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,330 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,300 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 67,800 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Price Today: ಚಿನ್ನದ ದರದಲ್ಲಿ ಮತ್ತಷ್ಟು ಏರಿಕೆ, ಬೆಳ್ಳಿ ಬೆಲೆ ಸ್ಥಿರ: ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ದರ?

Gold Price Today: ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ ಚಿನ್ನದ ದರ, ಬೆಳ್ಳಿ ಬೆಲೆ ಸ್ಥಿರ!

Published On - 7:39 am, Wed, 20 October 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು