AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವು ನಗರಗಳಲ್ಲಿ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ

Silver Price Today: ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ ಇಂದು 1 ಕೆಜಿಗೆ ಬರೋಬ್ಬರಿ 500 ರೂ. ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ.

Gold Price Today: ಬೆಂಗಳೂರು, ಮುಂಬೈ ಸೇರಿ ಹಲವು ನಗರಗಳಲ್ಲಿ ಇಂದು ಚಿನ್ನದ ಬೆಲೆ ಕುಸಿತ; ಬೆಳ್ಳಿ ದರವೂ ಇಳಿಕೆ
ಚಿನ್ನದ ಆಭರಣ
TV9 Web
| Edited By: |

Updated on: Mar 29, 2022 | 5:54 AM

Share

ಬೆಂಗಳೂರು: ಏರಿಕೆಯಾಗುತ್ತಲೇ ಇದ್ದ ಚಿನ್ನದ ಬೆಲೆ ಇದೀಗ ಇಳಿಕೆಯಾಗುತ್ತಿರುವುದರಿಂದ ಬಂಗಾರ ಖರೀದಿಸುವವರು ನಿಟ್ಟುಸಿರು ಬಿಡುವಂತಾಗಿದೆ. ಇಂದು ಕೂಡ ಮತ್ತೆ ಚಿನ್ನದ ದರ ಇಳಿಕೆಯಾಗಿದ್ದು, 10 ಗ್ರಾಂ ಚಿನ್ನಕ್ಕೆ (Gold Rate) 280 ರೂ. ಕುಸಿತವಾಗಿದೆ. ಭಾರತದಲ್ಲಿ ಬೆಳ್ಳಿಯ ಬೆಲೆ ಕೂಡ (Silver Price) ಇಂದು 1 ಕೆಜಿಗೆ ಬರೋಬ್ಬರಿ 500 ರೂ. ಇಳಿಕೆ ಕಂಡಿದೆ. ಭಾರತದ ಅನೇಕ ನಗರಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 48,200 ರೂ. ಇದ್ದುದು 47,950 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,590 ರೂ. ಇದ್ದುದು 52,310 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,160 ರೂ. ಮುಂಬೈ- 47,950 ರೂ, ದೆಹಲಿ- 47,950 ರೂ, ಕೊಲ್ಕತ್ತಾ- 47,950 ರೂ, ಬೆಂಗಳೂರು- 47,950 ರೂ, ಹೈದರಾಬಾದ್- 47,950 ರೂ, ಕೇರಳ- 47,950 ರೂ, ಪುಣೆ- 48,050 ರೂ, ಮಂಗಳೂರು- 47,950 ರೂ, ಮೈಸೂರು- 47,950 ರೂ. ಇದೆ.

ಹಾಗೇ, 24 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ: ಚೆನ್ನೈ- 52,650 ರೂ, ಮುಂಬೈ- 52,310 ರೂ, ದೆಹಲಿ- 52,550 ರೂ, ಕೊಲ್ಕತ್ತಾ- 52,310 ರೂ, ಬೆಂಗಳೂರು- 52,310 ರೂ, ಹೈದರಾಬಾದ್- 52,310 ರೂ, ಕೇರಳ- 52,310 ರೂ, ಪುಣೆ- 52,400 ರೂ, ಮಂಗಳೂರು- 52,310 ರೂ, ಮೈಸೂರು- 52,310 ರೂ. ಇದೆ.

ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದರೆ ಬೆಳ್ಳಿ ಬೆಲೆ (Silver Price) ಕೂಡ ಇಳಿಮುಖವಾಗಿದೆ.

ಇಂದಿನ ಬೆಳ್ಳಿಯ ದರ: 2 ದಿನಗಳಿಂದ ಬೆಳ್ಳಿ ಬೆಲೆ ಕುಸಿತವಾಗುತ್ತಿದೆ. ಒಂದೇ ದಿನದಲ್ಲಿ 1 ಕೆಜಿ ಬೆಳ್ಳಿ ಬೆಲೆ 500 ರೂ. ಇಳಿಕೆಯಾಗಿದೆ. ಭಾರತದಲ್ಲಿ 1 ಕೆಜಿ ಬೆಳ್ಳಿಯ ದರ 68,900 ರೂ. ಇದ್ದುದು ಇಂದು 68,400 ರೂ. ಆಗಿದೆ. ಭಾರತದ ಪ್ರಮುಖ ನಗರಗಳ ಬೆಳ್ಳಿ ದರವನ್ನು ಗಮನಿಸುವುದಾದರೆ, ಬೆಂಗಳೂರು- 72,700 ರೂ, ಮೈಸೂರು- 72,700 ರೂ., ಮಂಗಳೂರು- 72,700 ರೂ., ಮುಂಬೈ- 68,400 ರೂ, ಚೆನ್ನೈ- 72,700 ರೂ, ದೆಹಲಿ- 68,400 ರೂ, ಹೈದರಾಬಾದ್- 72,700 ರೂ, ಕೊಲ್ಕತ್ತಾ- 68,400 ರೂ. ಇದೆ.

ಇದನ್ನೂ ಓದಿ: Gold Price Today: ಬೆಂಗಳೂರು ಸೇರಿ ಹಲವೆಡೆ ಚಿನ್ನದ ಬೆಲೆ ಏರಿಕೆ; 1,500 ರೂ. ಹೆಚ್ಚಳ ಕಂಡ ಬೆಳ್ಳಿ ದರ

Gold Price Today: ಮತ್ತೆ ಗಗನಕ್ಕೇರಿದ ಚಿನ್ನದ ಬೆಲೆ; ಬೆಂಗಳೂರಿನಲ್ಲಿ 73 ಸಾವಿರದ ಗಡಿ ತಲುಪಿದ ಬೆಳ್ಳಿ ದರ

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ